Kolara | ರೌಡಿ ಶೀಟರ್ ಮೇಲೆ ಗುಂಡಿನ ದಾಳಿ: ಇಬ್ಬರಿಗೆ ಗಾಯ

ಕೋಲಾರ, ನ.24: ರೌಡಿ ಶೀಟರ್ ಒಬ್ಬನ ಮೇಲೆ ಗುಂಡಿನ ದಾಳಿಯಲ್ಲಿ ಇಬ್ಬರು ಗಾಯಗೊಂಡ ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಸಮೀಪ ಮಂಗಳವಾರ ನಡೆದಿರುವುದು ವರದಿಯಾಗಿದೆ.
ರೌಡಿ ಶೀಟರ್ ಅಣಕರಹಳ್ಳಿ ಪ್ರತಾಪ್ ಎಂಬಾತನ ಮೇಲೆ ಗುಂಡಿನ ದಾಳಿ ನಡೆದಿದೆ. ಈ ವೇಳೆ ಜೊತೆಗಿದ್ದ ಪ್ರತಾಪ್ ಅಣ್ಣ ನರೇಂದ್ರ ನಿಗೂ ಗಾಯಗಳಾಗಿವೆ.
ಹಳೆ ದ್ವೇಷದ ಹಿನ್ನೆಲೆಯಲ್ಲಿಯೇ ದುಷ್ಕರ್ಮಿಗಳು ಈ ಗುಂಡಿನ ದಾಳಿ ನಡೆಸಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಕಾರಿನಲ್ಲಿ ತೆರಳುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಗಾಯಗೊಂಡಿರುವ ರೌಡಿ ಶೀಟರ್ ಪ್ರತಾಪ್ ಹಾಗೂ ಕಾರು ಚಲಾಯಿಸುತ್ತಿದ್ದ ಆತನ ಅಣ್ಣ ನರೇಂದ್ರರನ್ನು ತಕ್ಷಣವೇ ಹೆಚ್ಚಿನ ಚಿಕಿತ್ಸೆಗಾಗಿ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಮಾಸ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ, ಘಟನೆಗೆ ಸಂಬಂಧಿಸಿದಂತೆ ಕಾರೊಂದನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.
Next Story






