ಕೋಲಾರ | ಕೃಷಿ ಹೊಂಡದಲ್ಲಿ ಬಿದ್ದು ತಾಯಿ-ಮಗ ಮೃತ್ಯು

ಮಾಲಾ (30)/ ಮಗ ಚಕ್ರವರ್ತಿ (6)
ಕೋಲಾರ : ತಾಲ್ಲೂಕಿನ ಹೊಗರಿಗೊಲ್ಲಹಳ್ಳಿ ಗ್ರಾಮದಲ್ಲಿ ತಾಯಿ–ಮಗುವಿನ ದಾರುಣ ಮರಣ ಘಟನೆಯೊಂದು ಸಂಭವಿಸಿದೆ. ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದ ತನ್ನ ಮಗುವನ್ನು ಕಾಪಾಡಲು ಹೋಗಿ ತಾಯಿಯೂ ಸಹ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮಾಲಾ (30) ಹಾಗೂ ಆಕೆಯ ಮಗ ಚಕ್ರವರ್ತಿ (6) ಕೃಷಿ ಹೊಂಡದಲ್ಲಿ ಬಿದ್ದು ಪ್ರಾಣ ಕಳೆದುಕೊಂಡವರು. ತಾಯಿ ಜಾನುವಾರುಗಳಿಗೆ ಮೇವು ತರಲು ಹೊಲಕ್ಕೆ ತೆರಳಿದ್ದರು. ಜೊತೆಗೆ ಮಗ ಚಕ್ರವರ್ತಿಯನ್ನೂ ಕರೆದೊಯ್ದಿದ್ದರು. ಈ ವೇಳೆ ಈ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಮೊದಲು ಕಾಲು ಜಾರಿ ಮಗ ಚಕ್ರವರ್ತಿ ಹೊಂಡದಲ್ಲಿ ಬಿದ್ದಿದ್ದು, ಮಗನನ್ನು ರಕ್ಷಿಸಲು ಧಾವಿಸಿದ ತಾಯಿ ಮಾಲಾ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳೀಯರು ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ವಿಫಲರಾಗಿದ್ದಾರೆ. ಈ ಬಗ್ಗೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





