ಕೋಲಾರ | ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ಆರಂಭ

ಕೋಲಾರ: ಮಾಲೂರು ವಿಧಾನಸಭೆ ಕ್ಷೇತ್ರದ ಮತಗಳ ಮರು ಮತ ಎಣಿಕೆ ಮಂಗಳವಾರ ಆರಂಭಗೊಂಡಿದೆ.
ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವೈ.ನಂಜೇಗೌಡ ಗೆಲುವು ಸಾಧಿಸಿದ್ದರು. ಆದರೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸೋತ ಅಭ್ಯರ್ಥಿ ಬಿಜೆಪಿ ನಾಯಕ ಮಂಜುನಾಥಗೌಡ ಕಾನೂನು ದಾವೆ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಸಂಬಂಧಿತ ಅಧಿಕಾರಿಗಳ ಆದೇಶದಂತೆ ಮರು ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.
ಮತ ಎಣಿಕೆ ಕೇಂದ್ರಕ್ಕೆ ಕಾಂಗ್ರೆಸ್ ಶಾಸಕ ಕೆ.ವೈ ನಂಜೇಗೌಡ, ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ್ ಕುಮಾರ್ ಅಗಮಿಸಿದ್ದಾರೆ.
ಕೋಲಾರ ಹೊರಹೊಲಯದ ತೋಟಗಾರಿಕೆ ವಿ.ವಿ ಕಾಲೇಜಿನಲ್ಲಿ ಮರು ಎಣಿಕೆ ಕಾರ್ಯ ಪ್ರಾರಂಭವಾಗಿದೆ.
Next Story





