ಕೋಲಾರ: ಮಾಲೂರಿನಲ್ಲಿ ದೇವಾಲಯದ ಪೂಜಾರಿ ಕೊಲೆ; ದುಷ್ಕರ್ಮಿಗಳು ಪರಾರಿ

ಕೋಲಾರ: ದೇವಾಲಯದ ಪೂಜಾರಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಹರಳೇರಿ ಸಮೀಪ ನಡೆದಿದೆ.
ಮಾಲೂರು ತಾಲ್ಲೂಕು ಕಲ್ಲೂರು ಗ್ರಾಮದ ಚೌಡೇಶ್ವರಿ ದೇವಾಲಯದ ಪೂಜಾರಿ ಆಂಜಿನಪ್ಪ (45) ಮೃತರು. ರವಿವಾರ ರಾತ್ರಿ ಮಾಲೂರು ನಗರದಿಂದ ಬೈಕ್‌ನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ದುಷ್ಕರ್ಮಿಗಳು ಆತನ ಮೇಲೆ ದಾಳಿ ನಡೆಸಿ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಕೊಲೆಯ ಹಿಂದೆ ಇರುವ ದುಷ್ಕರ್ಮಿಗಳು ಯಾರು ಹಾಗೂ ಕೊಲೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ, ವ್ಯಕ್ತಿಗತ ದ್ವೇಷವೇ ಈ ಕೊಲೆಗೆ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಮಾಲೂರು ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story





