Kolar | ಕೃಷಿ ಹೊಂಡದಲ್ಲಿ ಈಜು ಕಲಿಸಲು ಹೋದ ತಂದೆ ಸಹಿತ ಇಬ್ಬರು ಮಕ್ಕಳು ಮೃತ್ಯು

ಕೋಲಾರ : ಕೃಷಿ ಹೊಂಡದಲ್ಲಿ ಈಜಾಡಲು ತೆರಳಿದ್ದ ತಂದೆ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಮಾಲೂರಿನ ನಕ್ಕನಹಳ್ಳಿ ಗ್ರಾಮದಲ್ಲಿ ನಡೆದಿರುವುದು ವರದಿಯಾಗಿದೆ.
ತಂದೆ ಶ್ರೀನಿವಾಸ್ (40), ಮಕ್ಕಳಾದ ಚೇತನ್ (13) ಹಾಗೂ ರಾಜೇಶ್ (8) ಮೃತರು. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ರವಿವಾರ ತಂದೆ ಶ್ರೀನಿವಾಸ್, ತಮ್ಮಿಬ್ಬರು ಮಕ್ಕಳಿಗೆ ಈಜು ಕಲಿಸಿಕೊಡಲು ಕರೆದುಕೊಂಡು ಹೋಗಿದ್ದರು ಎನ್ನಲಾಗಿದೆ. ಗ್ರಾಮದ ಭೈರಪ್ಪ ಎಂಬುವರಿಗೆ ಸೇರಿದ ಕೃಷಿ ಹೊಂಡದ ಬಳಿ ತೆರಳಿದ್ದಾಗ, ಕಾಲು ಜಾರಿ ಹೊಂಡಕ್ಕೆ ಬಿದ್ದಿದ್ದಾರೆ. ಈ ವೇಳೆ ಮೂವರೂ ಕೃಷಿ ಹೊಂಡದಲ್ಲೇ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Next Story




