ಕೋಲಾರ | ಬಸ್ ಢಿಕ್ಕಿ: ಬೈಕ್ ಸವಾರರಿಬ್ಬರು ಮೃತ್ಯು

ಕೋಲಾರ: ಖಾಸಗಿ ಬಸ್ಸೊಂದು ಚಲಿಸುತ್ತಿದ್ದ ವೇಳೆ ಟೈರ್ ಸ್ಫೋಟಗೊಂಡಿದ್ದರಿಂದ ನಿಯಂತ್ರಣ ತಪ್ಪಿ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೆಜಿಎಫ್ ತಾಲೂಕಿನ ಗೆನ್ನೇರಹಳ್ಳಿ ಗೇಟ್ ಬಳಿ ನಡೆದಿದೆ.
ಮೃತರನ್ನು ಕೆಜಿಎಫ್ ನಗರದ ವಿನಯ್ ಹಾಗೂ ವಿನಾಯಕ್ ಎಂದು ಗುರುತಿಸಲಾಗಿದೆ.
ಎಂಜಿಎಂ(MGM) ಟ್ರಾವೆಲ್ಸ್ ಎಂಬ ಖಾಸಗಿ ಬಸ್ ಚಲಿಸುತ್ತಿದ್ದ ವೇಳೆ ಅದರ ಚಕ್ರ ಸ್ಫೋಟಗೊಂಡಿದೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಬಸ್ ಎದುರಿಗಿದ್ದ ಬೈಕಿಗೆ ಢಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಬಸ್ಸಿನಲ್ಲಿದ್ದವರಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಬಗ್ಗೆ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




