Kolar | ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ನೀರುಪಾಲು

ಕೋಲಾರ : ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಶ್ರೀನಿವಾಸಪುರ ತಾಲೂಕಿನ ಲಕ್ಷ್ಮಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಚ್ಚರಮಾಕಲಹಳ್ಳಿ ಬಳಿ ಈ ದುರ್ಘಟನೆ ಸಂಭವಿಸಿದೆ.
ಮಾಹಿತಿಯ ಪ್ರಕಾರ ಗಾರೆ ಕೆಲಸಕ್ಕೆಂದು ಪಚ್ಚರಮಾಕಲಹಳ್ಳಿಗೆ ತೆರಳಿದ್ದ ಯುವಕರು ಮಧ್ಯಾಹ್ನದ ತೀವ್ರ ಬಿಸಿಲಿನ ತಾಪಮಾನದಿಂದಾಗಿ ಸಮೀಪದ ಕೆರೆಯಲ್ಲಿ ಈಜಲು ಇಳಿದಿದ್ದಾರೆ. ಈ ವೇಳೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಇನ್ನೂ ಮೃತಪಟ್ಟ ಯುವಕರನ್ನು ರೋಣೂರು ಹೋಬಳಿ ವ್ಯಾಪ್ತಿಯ ಚಾಂಪಲ್ಲಿ ಗ್ರಾಮದ ನಿವಾಸಿಗಳಾದ ನರೇಂದ್ರ (25) ಹಾಗೂ ಚಂದನ್ (23) ಎಂದು ಗುರುತಿಸಲಾಗಿದೆ. ಇನ್ನೂ ಇಬ್ಬರು ಸಹ ಅಣ್ಣ ತಮ್ಮಂದಿರಾಗಿದ್ದು, ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Next Story




