Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. Kolara | ಕುರಿ ಕೊಂದ ವಿಚಾರಕ್ಕೆ ಎರಡು...

Kolara | ಕುರಿ ಕೊಂದ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಜಗಳ: ಓರ್ವ ಮಹಿಳೆ ಸಾವು

ವಾರ್ತಾಭಾರತಿವಾರ್ತಾಭಾರತಿ25 Aug 2026 10:16 AM IST
share
Kolara | ಕುರಿ ಕೊಂದ ವಿಚಾರಕ್ಕೆ ಎರಡು ಕುಟುಂಬಗಳ ಮಧ್ಯೆ ಜಗಳ: ಓರ್ವ ಮಹಿಳೆ ಸಾವು

ಕೋಲಾರ, ಆ.25 : ಕುರಿಯನ್ನು ಕೊಂದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದ್ದು, ಈ ಮಧ್ಯೆ ವೃದ್ದೆಯೊಬ್ಬರು ಕೊಲೆಯಾಗಿರುವ ಘಟನೆ ಕೋಲಾರದ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೋಲಾರ ತಾಲೂಕಿನ ಮದ್ದೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಚ್ಚಾರ್ಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ವೆಂಕಟಲಕ್ಷಮ್ಮ (65) ಕೊಲೆಯಾದ ಮಹಿಳೆ ಎಂದು ತಿಳಿದು ಬಂದಿದೆ.

ನಿನ್ನೆ ಕುರಿಯೊಂದು ಸಾವನ್ನಪ್ಪಿದ ಹಿನ್ನೆಲೆ, ವೆಂಕಟಲಕ್ಷ್ಮಮ್ಮ ಹಾಗೂ ಆಂಜಪ್ಪ ಕುಟುಂಬದ ನಡುವೆ ಜಗಳ ನಡೆದಿತ್ತು. ಬಳಿಕ ಈ ವಿಚಾರವಾಗಿ ವೇಮಗಲ್ ಪೊಲೀಸ್ ಠಾಣೆಯಲ್ಲಿ ರಾಜಿ ಪಂಚಾಯ್ತಿ ನಡೆದಿತ್ತು.

ಈ ಮಧ್ಯೆ ದೂರು ನೀಡಿದ ಯುವಕ ಗಂಗರಾಜು ಎಂಬವರನ್ನು ಪೋಲೀಸರು ಥಳಿಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತ ಸೋಮವಾರ ಎಸ್.ಎನ್.ಆರ್. ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾನೆ. ಇದೇ ಕಾರಣಕ್ಕೆ ಸೋಮವಾರ ರಾತ್ರಿ ಗ್ರಾಮದಲ್ಲಿ ಉಭಯ ಕುಟುಂಬಗಳ ನಡುವೆ ಮಧ್ಯೆ ಗಲಾಟೆ ನಡೆದಿದೆ ಎನ್ನಲಾಗಿದೆ. ಗಲಾಟೆ ವೇಳೆ ವೆಂಕಟಲಕ್ಷ್ಮಮ್ಮ ಮೃತಪಟ್ಟಿದ್ದು, ಅವರನ್ನು ಕೊಲೆ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾರ್ಗದರ್ಶನದಲ್ಲಿ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು, ಮೃದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ.

ಗ್ರಾಮದ ಆಂಜಪ್ಪ, ಮಂಜುನಾಥ್, ವೆಂಕಟೇಶ್ ಸೇರಿ ಹಲವರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.

Tags

KolarMurder
share
ವಾರ್ತಾಭಾರತಿ
ವಾರ್ತಾಭಾರತಿ
Next Story
X