Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ಕನಕದಾಸರನ್ನು ಭಕ್ತಿಗೆ ಸೀಮಿತಗೊಳಿಸಿ...

ಕನಕದಾಸರನ್ನು ಭಕ್ತಿಗೆ ಸೀಮಿತಗೊಳಿಸಿ ವೈಚಾರಿಕತೆ ಮರೆಯಬಾರದು : ಕೆ.ವಿ.ಪ್ರಭಾಕರ್

ವಾರ್ತಾಭಾರತಿವಾರ್ತಾಭಾರತಿ15 Sept 2024 2:52 PM IST
share
ಕನಕದಾಸರನ್ನು ಭಕ್ತಿಗೆ ಸೀಮಿತಗೊಳಿಸಿ ವೈಚಾರಿಕತೆ ಮರೆಯಬಾರದು : ಕೆ.ವಿ.ಪ್ರಭಾಕರ್

ಕೋಲಾರ : ಕನಕದಾಸರನ್ನು ಭಕ್ತಿಗೆ ಸೀಮಿತಗೊಳಿಸಿ ವೈಚಾರಿಕತೆ ಮರೆಯಬಾರದು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

ರಾಜ್ಯ ಕನಕ ನೌಕರರ ಸಂಘ, ಜಿಲ್ಲಾ ಮತ್ತು ಪ್ರದೇಶ ಕುರುಬರ ಸಂಘ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ʼಇಂದು ವಿಶ್ವ ಪ್ರಜಾಪ್ರಭುತ್ವ ದಿನ. ಇದೇ ದಿನ ಕನಕ ಸಮುದಾಯದಿಂದ ಕಾರ್ಯಕ್ರಮ ನಡೆಯುತ್ತಿದೆ. ಕನಕದಾಸರು ಸಮಾಜದಲ್ಲಿನ‌ ತಾರತಮ್ಯ ಹೋಗಲಾಡಿಸಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಸ್ಥಾಪಿಸಲು ಶ್ರಮಿಸಿದ್ದರುʼ ಎಂದು ವಿವರಿಸಿದರು.

ಕನಕದಾಸರ ಬದುಕಿನ ಸಂದೇಶ ಕೇವಲ ಅವರನ್ನು ಭಕ್ತಿಯಿಂದ ಪೂಜಿಸುವುದಾಗಿರಲಿಲ್ಲ. ಕನಕದಾಸರು ಸಮಾಜದ ನೋವನ್ನು ಹಾಡಾಗಿ ಹಾಡಿದರು. ಸಮಾಜದಲ್ಲಿನ ತಾರತಮ್ಯಕ್ಕೆ ತಮ್ಮ ವಚನಗಳ ಮೂಲಕ ಕನ್ನಡಿ ಹಿಡಿದರು. "ಕುಲ ಕುಲವೆಂದು ಬಡಿದಾಡದಿರಿ..." ಎಂದು ಕನಕರು ಹಾಡುವ ಮೊದಲು ಕುಲದ ಅವಮಾನವನ್ನು ಅನುಭವಿಸಿದ್ದರು. ಈ ಅವಮಾನವನ್ನು ಅಳಿಸಲು ಬದುಕಿನುದ್ದಕ್ಕೂ ಶ್ರಮಿಸಿದರು ಎಂದರು.

ಹೀಗಾಗಿ ಭಕ್ತಿಯ ಜೊತೆಗೆ ವೈಚಾರಿಕ ಹಿನ್ನೆಲೆಯಲ್ಲಿ ನಾವು ಕನಕರನ್ನು ಅರಿತರೆ ಮಾತ್ರ ಕನಕದಾಸರು ಒಬ್ಬ ಬಂಡಾಯಗಾರರು ಎನ್ನುವುದು ನಮಗೆ ಅರ್ಥ ಆಗುತ್ತದೆ. ಕನಕದಾಸರನ್ನು ಪೂಜಿಸುವ ಜೊತೆಗೆ ಅವರೊಳಗಿನ ಪ್ರತಿಭಟನಾ ಶಕ್ತಿಯನ್ನು ನಾವು ಗ್ರಹಿಸಬೇಕಿದೆ. ಕನಕರೆಂದರೆ ಭಕ್ತಿ, ಭಾವ, ತನ್ಮಯತೆ ಮಾತ್ರವೇ ಎಂದುಕೊಂಡರೆ ಸಾಲದು. ಅವರ ಹೋರಾಟ, ವೈಚಾರಿಕ ಚಿಂತನೆ, ಚಳವಳಿಗಳ ಬಗ್ಗೆ ಹೆಚ್ಚೆಚ್ವು ತಿಳಿಯಬೇಕು. ಹೆಚ್ಚೆಚ್ಚು ಮಾತಾಡಬೇಕು ಎಂದು ಹೇಳಿದರು.

ಕನಕದಾಸರ ಹೋರಾಟದ ಪರಂಪರೆಯನ್ನೇ ನಾಶಮಾಡುವ ಹುನ್ನಾರದ ಭಾಗವಾಗಿ ಅವರನ್ನು ಕೇವಲ ಭಕ್ತಿಗೆ ಸೀಮಿತಗೊಳಿಸುತ್ತಿದ್ದಾರೆ. ಇದು ನಮ್ಮ ಇವತ್ತಿನ ಮತ್ತು ಮುಂದಿನ ಪೀಳಿಗೆಯಲ್ಲಿ ಹೋರಾಟವನ್ನು ಮರೆಸುವ ತಂತ್ರವೇ ಆಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕಾಗಿನೆಲೆ ಮಹಾಸಂಸ್ಥಾನದ ಹೊಸದುರ್ಗ ಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿಗಳು, ಸಚಿವರಾದ ಬೈರತಿ ಸುರೇಶ್, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ವರ್ತೂರು ಪ್ರಕಾಶ್, ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಬಿ.ಕೆ.ರವಿ, ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಸೇರಿ ಹಲವಾರು ಮುಖಂಡರು, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X