ಕೋಲಾರ | ವೃದ್ಧೆಯ ಅತ್ಯಾಚಾರ, ಕೊಲೆ ಶಂಕೆ: ಆರೋಪಿಯ ಬಂಧನ

ಸಾಂದರ್ಭಿಕ ಚಿತ್ರ | PC : freepik.com
ಕೋಲಾರ : ಕೊಲೆಯಾದ ಸ್ಥಿತಿಯಲ್ಲಿ ವೃದ್ಧೆಯ ಮೃತದೇಹ ಕೋಲಾರದ ಶ್ರೀನಿವಾಸಪುರದ ಸಂತೆ ಮೈದಾನದ ಬಳಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.
ಎಚ್.ಜಿ.ಹೊಸೂರಿನ ವೃದ್ಧೆಯನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
2 ದಿನದ ಹಿಂದೆ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿದ್ದಾರೆ. ವೃದ್ಧೆಯನ್ನು ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಫರ್ ಖಾನ್ ಮೊಹಲ್ಲಾದ ನಿವಾಸಿ ಬಾಬಾ ಎಂಬಾತನಿಂದ ಈ ಕೃತ್ಯ ನಡೆದಿದೆ ಎನ್ನಲಾಗಿದೆ.
ಮೃತದೇಹ ಪತ್ತೆಯಾದ ಕೇವಲ 24 ಗಂಟೆಗಳ ಒಳಗಾಗಿ ಆರೋಪಿಯನ್ನು ಪೊಲೀಸರು ಬಂಧಿಸಿ ಮುಂದಿನ ಕ್ರಮವಹಿಸಿದ್ದಾರೆ.
Next Story





