Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ...

ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಮುಕ್ತಾಯ: ಫಲಿತಾಂಶ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಗೆ ರವಾನೆ

ವಾರ್ತಾಭಾರತಿವಾರ್ತಾಭಾರತಿ11 Nov 2025 10:54 PM IST
share
ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಮುಕ್ತಾಯ: ಫಲಿತಾಂಶ ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂಗೆ ರವಾನೆ
ಮರು ಎಣಿಕೆಯಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ ಎಂದ ಶಾಸಕ ಕೆ.ವೈ.ನಂಜೇಗೌಡ

ಕೋಲಾರ: ಮಾಲೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಮರು ಮತ ಎಣಿಕೆ ಕಾರ್ಯ ಮುಕ್ತಾಯಗೊಂಡಿದ್ದು, ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸುಪ್ರೀಂಕೋರ್ಟ್ ಗೆ ರವಾನಿಸಿದ್ದಾರೆ.

ಸುಪ್ರೀಂಕೋರ್ಟ್ ಆದೇಶದಂತೆ ಕೋಲಾರ ನಗರದ ಹೊರವಲಯದಲ್ಲಿರುವ ತೋಟಗಾರಿಕಾ ವಿಶ್ವವಿದ್ಯಾನಿಲಯದಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆಗೆ ಮರು ಎಣಿಕೆ ಕಾರ್ಯ ಪ್ರಾರಂಭವಾಗಿ, ರಾತ್ರಿ 9 ಗಂಟೆಗೆ ಮುಕ್ತಾಯಗೊಂಡಿದೆ.

ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮಾಲೂರು ಶಾಸಕ ಕೆ.ವೈ. ನಂಜೇಗೌಡ, ಬಿಜೆಪಿ ಪರಾಜಿತ ಅಭ್ಯರ್ಥಿ ಮಂಜುನಾಥ್ ಗೌಡ, ಪಕ್ಷೇತರ ಅಭ್ಯರ್ಥಿ ಹೂಡಿ ವಿಜಯ ಕುಮಾರ್ ಮತ್ತು ಅವರ ಚುನಾವಣಾ ಏಜೆಂಟರ ಸಮ್ಮುಖದಲ್ಲಿ ಮರು ಎಣಿಕೆ ನಡೆಯಿತು.

ಮರು ಎಣಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಲೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಂಜುನಾಥಗೌಡ, ನನಗೆ ಇನ್ನೂ ಸಮಾಧಾನ ಆಗಿಲ್ಲ, ಸಂಪೂರ್ಣ ವಿವಿ ಪ್ಯಾಟ್‌ಗಳನ್ನು ಎಣಿಸಬೇಕಿತ್ತು. ಆದರೆ ಕೇವಲ ಐದು ವಿವಿ ಪ್ಯಾಟ್ ಮಾತ್ರ ಎಣಿಕೆ ಮಾಡಿದ್ದಾರೆ. ನನ್ನ ಮುಂದಿನ ಹೋರಾಟದ ಬಗ್ಗೆ ನಿರ್ಧಾರ ಮಾಡುತ್ತೇನೆ ಎಂದು ಹೇಳಿದರು.

ಎಣಿಕೆ ಕೇಂದ್ರದಿಂದ ಹೊರ ಬಂದ ಮಾಲೂರು ಶಾಸಕ ಕಾಂಗ್ರೆಸ್‌ನ ಕೆ.ವೈ.ನಂಜೇಗೌಡ ಮಾತನಾಡಿ, ಮಾಲೂರು ಜನರಿಗೆ ಮತ್ತು ಬಂಧುಗಳಿಗೆ ನನ್ನ ಧನ್ಯವಾದ. ಎರಡನೇ ಅವಧಿಗೆ ಶಾಸಕನಾಗಿ ಮಾಡಿದ ಮೇಲೆ ಶಾಸಕ ಎಂದು ಡಿಕ್ಲೇರ್ ಆದ ನಂತರ ಬಿಜೆಪಿಯವರು ಕೋರ್ಟ್‌ಗೆ ಹೋಗಿದ್ದರು. ತುಂಬಾ ನೋವನ್ನು ಅನುಭವಿಸಿದ್ದೇನೆ. ಬಿಜೆಪಿ ಅಭ್ಯರ್ಥಿ ನಾನೇ ಗೆದ್ದು ಬಿಡುತ್ತೇನೆ, ಮರು ಚುನಾವಣೆ ಆಗಿಬಿಡುತ್ತದೆ ಎಂದು ಗೊಂದಲ ಮಾಡಿದರು. ಆದರೆ ಸುಪ್ರಿಂ ನ್ಯಾಯಾಲಯದ ಆದೇಶದಂತೆ ಮರು ಎಣಿಕೆ ಮುಗಿದಿದೆ. ಮರು ಎಣಿಕೆಯಲ್ಲಿ ಯಾವುದೇ ಬದಲಾವಣೆ ಕಂಡಿಲ್ಲ.ನ್ಯಾಯ ನಮ್ಮಪರವಾಗಿದೆ ಎಂದರು.

ಹಿನ್ನೆಲೆ:

ಮಾಲೂರು ವಿಧಾನಸಭಾ ಕ್ಷೇತ್ರದ 2023ರ ಚುನಾವಣೆ ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶಿಸಿತ್ತು. ನಾಲ್ಕು ವಾರಗಳಲ್ಲಿ ಮರುಎಣಿಕೆ ಕಾರ್ಯ ಮುಗಿಸುವಂತೆ ಆದೇಶ ನೀಡಿರುವ ಕೋರ್ಟ್, ಶಾಸಕ ಸ್ಥಾನದಿಂದ ಹಾಲಿ ಶಾಸಕ ಕೆ.ವೈ.ನಂಜೇಗೌಡ ಅವರನ್ನು ಅಸಿಂಧುಗೊಳಿಸಿತ್ತು. ಸದ್ಯ ಶಾಸಕ ನಂಜೇಗೌಡ ಪರ ವಕೀಲರ ಮನವಿ ಮೇರೆಗೆ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆಯಾಜ್ಞೆ ನೀಡಿ, 30 ದಿನಗಳ ಕಾಲವಕಾಶ ನೀಡಿ ಮೇಲ್ಮನವಿಗೆ ಅವಕಾಶ ನೀಡಿತ್ತು. ಇದರಿಂದಾಗಿ ಸದ್ಯ ಮರುಎಣಿಕೆ ಕೋರಿ ಕೋರ್ಟ್ ಮೊರೆ ಹೋಗಿದ್ದ ಮಾಜಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮಂಜುನಾಥಗೌಡ ಸಂತೋಷಗೊಂಡಿದ್ದರು. ಹಿಂದಿನ ಜಿಲ್ಲಾ ಚುನಾವಣಾ ಅಧಿಕಾರಿ ವೆಂಕಟರಾಜು ಮತ ಎಣಿಕೆಯ ವೀಡಿಯೊ ಕೋರ್ಟ್‌ಗೆ ಸಲ್ಲಿಸಿಲ್ಲ. ಹೀಗಾಗಿ ಅಂದಿನ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧವೂ ಕ್ರಮಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X