Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ವೇಮಗಲ್ | ಕ್ರೋನ್ಸ್ ಕಂಪನಿಯ ಉತ್ಪಾದನಾ...

ವೇಮಗಲ್ | ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕಕ್ಕೆ ಸಚಿವ ಎಂ.ಬಿ.ಪಾಟೀಲರಿಂದ ಭೂಮಿಪೂಜೆ

"315 ಕೋಟಿ ಹೂಡಿಕೆ, 550 ಉದ್ಯೋಗ ಸೃಷ್ಟಿ"

ವಾರ್ತಾಭಾರತಿವಾರ್ತಾಭಾರತಿ20 Feb 2025 8:31 PM IST
share
ವೇಮಗಲ್ | ಕ್ರೋನ್ಸ್ ಕಂಪನಿಯ ಉತ್ಪಾದನಾ ಘಟಕಕ್ಕೆ ಸಚಿವ ಎಂ.ಬಿ.ಪಾಟೀಲರಿಂದ ಭೂಮಿಪೂಜೆ

ಕೋಲಾರ : ಇನ್ವೆಸ್ಟ್ ಕರ್ನಾಟಕ-25ರ ಭಾಗವಾಗಿ ವಿಶ್ವದ ಅತ್ಯುನ್ನತ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ಆರಂಭಿಸಲಾಗುತ್ತಿದ್ದು, ಸ್ಥಳೀಯ ಹಾಗೂ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಮೆರಿಟ್ ಆಧಾರದಲ್ಲಿ ಆದ್ಯತೆ ಮೇಲೆ ಕಡ್ಡಾಯವಾಗಿ ಉದ್ಯೋಗ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ತಾಕೀತು ಮಾಡಿದರು.

ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಂಪನಿ ನಿರ್ಮಿಸಲಿರುವ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಇತ್ತೀಚೆಗಷ್ಟೇ ಮುಕ್ತಾಯವಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ 315 ಕೋಟಿ ರೂಪಾಯಿಗಳ ಜರ್ಮನಿ ಮೂಲದ ಕ್ರೋನ್ಸ್ ಕಂಪನಿಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣದ ಅನುಷ್ಠಾನ ಗುರುವಾರ ಆರಂಭಗೊಂಡಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಪಾಟೀಲ ಅವರು, “ಕೈಗಾರಿಕಾ ಅಗತ್ಯಗಳಿಗೆ ಬೇಕಾಗುವ ಬಾಟ್ಲಿಂಗ್ ಮತ್ತು ಶುದ್ಧೀಕರಣ ಸಾಧನಗಳ ತಯಾರಿಕೆಗೆ ದೇಶದಲ್ಲಿ ಅಪಾರ ಬೇಡಿಕೆ ಇದೆ. ಇದನ್ನು ಮನಗಂಡು ಕ್ರೋನ್ಸ್, ರಾಜ್ಯದಲ್ಲಿ ಈ ಸ್ಥಾವರ ಆರಂಭಿಸಲು ಮುಂದಾಗಿದೆ. ಇದರಿಂದ ಬಂಡವಾಳ ಹೂಡಿಕೆಯ ಜತೆಗೆ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಯೂ ಆಗಲಿದೆ. ವೇಮಗಲ್ ಕೈಗಾರಿಕಾ ಪ್ರದೇಶವು ಬೆಂಗಳೂರಿಗೆ ಕೂಡ ಹತ್ತಿರದಲ್ಲಿ ಇರುವುದರಿಂದ ಮತ್ತಷ್ಟು ಅನುಕೂಲವಾಗಲಿದೆ” ಎಂದರು.

ತಾವು ಮೂರು ತಿಂಗಳ ಹಿಂದೆ ಇತ್ತೀಚೆಗೆ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾವಿಯಾಗಿ ಜರ್ಮನಿಯಲ್ಲಿ ರೋಡ್-ಶೋ ನಡೆಸಿದಾಗ, ಅಲ್ಲಿ ಕ್ರೋನ್ಸ್ ಕಂಪನಿಯ ಕೇಂದ್ರ ಕಚೇರಿಗೆ ಭೇಟಿ ನೀಡಿ, ವ್ಯವಸ್ಥೆಯನ್ನು ವೀಕ್ಷಿಸಿದ್ದೆ. ಪ್ರಿಸಿಷನ್ ಎಂಜಿನಿಯರಿಂಗ್ ಮತ್ತು ನಾವೀನ್ಯತೆಗಳಿಗೆ ಹೆಸರು ಮಾಡಿರುವ ಕಂಪನಿಯು ಭಾರತದಲ್ಲಿನ ತನ್ನ ನೂತನ ಉತ್ಪಾದನಾ ಸ್ಥಾವರವನ್ನು ಆರಂಭಿಸುತ್ತಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ. ಜರ್ಮನಿಯಲ್ಲಿ ಏನಿದೆಯೋ ಅವೆಲ್ಲವೂ ನಮ್ಮಲ್ಲೂ ಬರಬೇಕು. ಇದಕ್ಕಾಗಿ ಸರಕಾರವು ಎಲ್ಲ ಬೆಂಬಲವನ್ನೂ ಕೊಡಲು ಬದ್ಧವಾಗಿದೆ ಎಂದು ಹೇಳಿದ್ದೆ. ಆ ಪ್ರಕಾರ ಇವತ್ತು ಈ ಸಂಸ್ಥೆ ನಿರ್ಮಾಣಕ್ಕೆ ನಾಂದಿಯಾಗಿದೆ ಎಂದು ಅವರು ನುಡಿದಿದ್ದಾರೆ.

ಕಂಪನಿಯು ಹಂತ ಹಂತವಾಗಿ 315 ಕೋಟಿ ರೂಪಾಯಿ ಹೂಡಿಕೆ ಮಾಡಲಿದ್ದು, 550 ಮಂದಿಗೆ ಉದ್ಯೋಗ ಸಿಗಲಿದೆ. ನಿಮಿಷಕ್ಕೆ ನೂರಾರು ಬಾಟಲಿ ಉತ್ಪಾದಿಸುವ ಯಂತ್ರಗಳನ್ನು ಇಲ್ಲಿ ಉತ್ಪಾದಿಸಲಾಗುತ್ತದೆ ಎಂದು ಅವರು ಹೇಳಿದರು.

ವೇಮಗಲ್ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಕರ್ನಾಟಕವನ್ನು ಉತ್ಪಾದನಾ ವಲಯದಲ್ಲಿ ಯಾವ ರೀತಿ ಅಭಿವೃದ್ಧಿ ಮಾಡಬೇಕು ಎಂಬುದರ ಬಗ್ಗೆಯೂ ಸದ್ಯದಲ್ಲೇ ಪರಿಣಿತರ ಚರ್ಚೆ ಕೂಡ ಮಾಡಲಾಗುವುದು ಎಂದ ಅವರು, ಸಿಎಸ್ ಆರ್ ಹಣ ಕೂಡ ಸ್ಥಳೀಯರ ಅಭಿವೃದ್ಧಿಗೆ ಬಳಸುವಂತೆ ಸಚಿವರು ಸಂಬಂಧಪಟ್ಟ ಕಂಪೆನಿಯ ಅಧಿಕಾರಿಗಳಿಗೆ ಸೂಚಿಸಿದರು.

ನಮ್ಮಲ್ಲಿ ನೂತನ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗಿದ್ದು, ಉದ್ದಿಮೆಗಳಿಗೆ ಬಂಡವಾಳದ ಮೇಲೆ ಸಹಾಯಧನ ಅಥವಾ ಉತ್ಪಾದನೆಗೆ ತಕ್ಕ ಪ್ರೋತ್ಸಾಹನ ಭತ್ಯೆ ಎರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವ ಮುಕ್ತ ಅವಕಾಶ ಕೊಡಲಾಗಿದೆ. ಜೊತೆಗೆ ಅಗತ್ಯ ಅನುಮೋದನೆಗಳನ್ನು ತ್ವರಿತ ಗತಿಯಲ್ಲಿ ನೀಡಲು ಪರಿಷ್ಕೃತ ಏಕಗವಾಕ್ಷಿ ವ್ಯವಸ್ಥೆಯನ್ನೂ ತರಲಾಗಿದೆ. ಕ್ರೋನ್ಸ್ ಕಂಪನಿಯು ನಮ್ಮಲ್ಲಿ ಮುಂಬರುವ ದಿನಗಳಲ್ಲಿ ಅಪಾರ ಹೂಡಿಕೆ ಮಾಡುವ ನಿರೀಕ್ಷೆ ಇದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಕ್ರೋನ್ಸ್ ಕಂಪನಿಯು ಆಹಾರ ಮತ್ತು ಪಾನೀಯ ಕ್ಷೇತ್ರಗಳಲ್ಲಿ ಕಳೆದ 23 ವರ್ಷಗಳಿಂದಲೂ ಭಾರತದಲ್ಲಿ ನೆಲೆ ಹೊಂದಿದೆ. ಕಂಪನಿಯ ಡಿಜಿಟಲ್ ವಿಭಾಗದ ಕೇಂದ್ರ ಕಚೇರಿಯು ಬೆಂಗಳೂರಿನಲ್ಲೇ ಇದೆ. ಇದು ಕಂಪನಿಯ ಸಾಫ್ಟ್ವೇರ್ ಅಭಿವೃದ್ಧಿ, ಐಟಿ ಭದ್ರತೆ ಮತ್ತು ಡಿಜಿಟಲ್ ಪರಿಹಾರಗಳಿಗೆ ಬಲ ತುಂಬಿದೆ. ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಉತ್ಪಾದನಾ ಘಟಕವು ಭಾರತದಲ್ಲಿ ಕಂಪನಿಯ ಸ್ಥಾನಮಾನಗಳನ್ನು ಮತ್ತಷ್ಟು ಬಲಪಡಿಸಿ, ರಾಜ್ಯದ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕ್ರೋನ್ಸ್ ಆಡಳಿತ ಮಂಡಳಿ ನಿರ್ದೇಶಕರಾದ ರೊಲ್ಫ್ಸ್ ಗೋಲ್ಡ್ ಬ್ರೋನರ್, ಮಾರ್ಕಸ್ ವಿಂಟರ್, ಯೋಜನಾ ನಿರ್ದೇಶಕ ಡೇವಿಡ್ ಕ್ರಿಮ್ಮರ್, ಕ್ರೋನ್ಸ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಹರೀಶ ಹನುಗೋಡು, ವಿಧಾನ ಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ, ಕೆಐಎಡಿಬಿ ಸಿಇಒ ಡಾ.ಮಹೇಶ ಮುಂತಾದವರು ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X