ಗಂಗಾವತಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಪ್ರಕರಣ : ಮೃತ ವೆಂಕಟೇಶ್, ಅರೋಪಿಗಳ ನಡುವಿನ ಸಂಭಾಷಣೆಯ ಆಡಿಯೋ ವೈರಲ್

ಕೊಪ್ಪಳ : ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕೊಲೆ ಪ್ರಕರಣಕ್ಕೆ ಸಂಬಧಿಸಿದಂತೆ ಕೊಲೆಗೂ ಮುನ್ನ ಪ್ರಮುಖ ಆರೋಪಿ ರವಿ ಮತ್ತು ಮೃತನ ವೆಂಕಟೇಶ್ ನಡುವೆ ದೂರವಾಣಯಲ್ಲಿ ನಡೆದ ಸಂಭಾಷಣೆ ಎನ್ನಲಾದ ಅಡಿಯೋ ವೈರಲ್ ಆಗಿದೆ.
ಬುಧವಾರ ಒಂದು ಗಂಟೆ ಸುಮಾರಿಗೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಆಪ್ತ ವಲಯಲ್ಲಿ ಗುರುತಿಸಿಕೊಂಡಿದ್ದ ನಗರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕೆ. ವೆಂಕಟೇಶನು ಸ್ನೇಹಿತರೊಂದಿಗೆ ಊಟ ಮುಗಿಸಿಕೊಂಡು ಬೈಕಿನಲ್ಲಿ ಗಂಗಾವತಿಗೆ ತೆರಳುತ್ತಿದ್ದ ಕಾರಿನಲ್ಲಿ ಹಿಂಬಾಲಿಸಿ ಕೊಂಡು ಬಂದ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿತ್ತು ಅದಕ್ಕೆ ಸಂಬಂಧಿಸಿದಂತೆ ನಾಲ್ಕು ಜನರನ್ನು ಪೊಲೀಸರು ಬಂಧಿಸಿದ್ದರು.
ಇನ್ನು ತನಿಖೆ ಮುಂದುವರೆದಿರುವಾಗ ಆರೋಪಿ ರವಿ ಮತ್ತು ಮೃತನ ವೆಂಕಟೇಶ್ ನಡುವೆ ನಡೆದ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಆಡಿಯೋದಲ್ಲಿ ಇಬ್ಬರು ಪರಸ್ಪರ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡಿದ್ದಾರೆ.
Next Story





