Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನಕದಾಸರ ಆದರ್ಶಗಳನ್ನು ನಮ್ಮ ಜೀವನದಲ್ಲಿ...

ಕನಕದಾಸರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಶಾಸಕ ಕೆ.ರಾಘವೇಂದ್ರ ಹಿಟ್ನಾಳ್‌

ವಾರ್ತಾಭಾರತಿವಾರ್ತಾಭಾರತಿ8 Nov 2025 4:49 PM IST
share
ಕನಕದಾಸರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು : ಶಾಸಕ ಕೆ.ರಾಘವೇಂದ್ರ ಹಿಟ್ನಾಳ್‌

ಕೊಪ್ಪಳ(ನ.08): ಕನಕದಾಸರ ಜಯಂತಿ ದಿನದಂದು ಭಾವಚಿತ್ರದ ಮೆರವಣಿಗೆ ಮಾಡಿದರೆ ಸಾಲದು, ಅವರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವು ನಡೆಯಬೇಕಿದೆ ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ್‌ ಹೇಳಿದರು.

ಅವರು ಶನಿವಾರ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಸಂತ ಶ್ರೇಷ್ಠ ಭಕ್ತ ಕನಕದಾಸ ಜಯಂತಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಕನಕದಾಸರು ದೇಶ ಕಂಡ ದಾಸ ಶ್ರೇಷ್ಠರು, ಅವರು ತಮ್ಮ ಕೀರ್ತನೆಗಳ ಮೂಲಕ ಜಾತಿ, ಮತ, ಪಂಥಗಳನ್ನು ಹೋಗಲಾಡಿಸಿದ್ದರು. 12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪವನ್ನು ಸ್ಥಾಪಿಸಿ ಸಮ ಸಮಾಜವನ್ನು ಕಟ್ಟುವ ಕೆಲಸ ಮಾಡಿದ್ದರು. ಅಂಬೇಡ್ಕರ್, ಬಸವಣ್ಣ, ಕನಕದಾಸರು ಎಲ್ಲಾ ಸಮಾಜದ ಏಳಿಗಾಗಿ ಶ್ರಮಿಸಿದ್ದರು ಎಂದರು.

ಸಿದ್ಧರಾಮಯ್ಯನವರು ಎಲ್ಲಾ ಜಾತಿ ಜನಾಂಗದವರಿಗೆ ಸಮಾನ ಸ್ಥಾನಮಾನ ನೀಡಿ 2013 ರಿಂದ ಇಲ್ಲಿಯವರೆಗೆ ಅವರು ಅನೇಕ ಭಾಗ್ಯಗಳನ್ನು ಜಾರಿಗೆ ತಂದಿದ್ದಾರೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಯು ಮುಖ್ಯ ವಾಹಿನಿಗೆ ಬರಬೇಕೆಂದು ಅವರು ಎಲ್ಲರಿಗೂ ಸಮಾನತೆ ತರುವ ಕೆಲಸ ಮಾಡುತ್ತಿದ್ದಾರೆ. ನಾವು ಸಮಾನವಾಗಿ ಬದುಕುವುದರ ಜೊತೆಗೆ ಇತರರನ್ನು ಸಮಾನವಾಗಿ ಬದುಕುವಂತೆ ಮಾಡಬೇಕು. ಕನಕದಾಸರು, ಅಂಬೇಡ್ಕರ್, ಬಸವಣ್ಣನವರು ಆಯಾ ಸಮಾಜಕ್ಕೆ ಸೀಮಿತ ಅಲ್ಲ. ಅವರು ಎಲ್ಲರ ಒಳಿತಿಗಾಗಿ ಶ್ರಮಿಸಿದ್ದರು ಎಂದರು.

ಕೊಪ್ಪಳ ಸಂಸದರಾದ ಕೆ. ರಾಜಶೇಖರ ಬಸವರಾಜ ಹಿಟ್ನಾಳ್‌ ಅವರು ಮಾತನಾಡಿ, ಕನಕದಾಸರು ದಂಡನಾಯಕ ತಿಮ್ಮಪ್ಪನಾಗಿ ತನ್ನ ಲೌಕಿಕ ಜೀವನವನ್ನು ತ್ಯಜಿಸಿ ಎಲ್ಲಾ ಸಿರಿ ಸಂಪತ್ತನ್ನು ತ್ಯಾಗಮಾಡಿ ಸಮಾಜದ ಸುಧಾರಣೆಗಾಗಿ ತಮ್ಮ ಜೀವನ ಮುಡುಪಾಗಿಟ್ಟಿದ್ದರು. ಅವರು ಸಮಾಜ ಸುಧಾರಣೆಗಾಗಿ ಕೀರ್ತನೆಗಳ ಮೂಲಕ ಜಾತಿ ಮುಖ್ಯ ಅಲ್ಲ ನೀತಿ ಮುಖ್ಯ. ತಮ್ಮ ಭಕ್ತಿಯಿಂದ ಶ್ರೀಕೃಷ್ಣನನ್ನೆ ತನ್ನೆಡೆಗೆ ಒಲಿಸಿಕೊಂಡಿರುವುದನ್ನು ನಾವು ಕಾಣುತ್ತೆವೆ. ಸಿದ್ದರಾಮಯ್ಯನವರು 16ನೇ ಶತಮಾನದಲ್ಲಿ ಕನಕದಾಸರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುತ್ತಿದ್ದು ಅವರು ಸಮಾಜದ ಕಟ್ಟ ಕಡೆಯ ಜನರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ತಮ್ಮೆಲ್ಲರ ಆಶಯದಂತೆ ಇತ್ತಿಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಪ್ಪಳದಲ್ಲಿ ಕನಕದಾಸ ಮೂರ್ತಿಯನ್ನು ಅನಾವರಣಗೊಳಿಸಿದರು ಎಲ್ಲರಿಗೂ ಕನಕದಾಸರ ಜಯಂತಿ ಶುಭಾಶಯಗಳು ಎಂದು ಹೇಳಿದರು.

ವಿಧಾನ ಪರಿಷತ್ ಶಾಸಕರಾದ ಹೇಮಲತಾ ನಾಯಕ ಅವರು ಮಾತನಾಡಿ, ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರು ಜನಸಾಮಾನ್ಯರಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ದಾಸ ಸಾಹಿತ್ಯ, ಭಕ್ತಿ ಪಂಥದ ಮೂಲಕ ಮನುಕುಲಕ್ಕೆ ಅತ್ಯುತ್ತಮ ಸಂದೇಶವನ್ನು ನೀಡಿದ್ದಾರೆ. ಕನಕದಾಸರು ಒಬ್ಬ ದಂಡನಾಯಕನಾಗಿದ್ದು, ತನ್ನ ಸಿರಿ, ಸಂಪತ್ತು ಎಲ್ಲವನ್ನು ತ್ಯಾಗಮಾಡಿ ಸಮಾಜದ ಸುಧಾರಣೆಗಾಗಿ ಶ್ರಮಿಸಿದ್ದಾರೆ. ಮಾನವನ ಒಳಿತಿಗಾಗಿ ಅವರ ಕೊಡುಗೆಯನ್ನು ನಾವು ಸ್ಮರಿಸಲೇಬೇಕು. ಕನಕದಾಸರು ಮೋಹನತರಂಗಿಣಿ, ಹರಿಭಕ್ತಿಸಾರ ಮತ್ತು ಹಲವಾರು ಪ್ರಮುಖ ಕೃತಿಗಳನ್ನು ರಚಿಸಿ, ದಾಸ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡುವುದರ ಜೊತೆಗೆ ಸಮಸ್ತ ಮಾನವಕುಲಕ್ಕೂ ಮಾರ್ಗದರ್ಶನ ಮಾಡಿದ್ದಾರೆ. ಯಾವುದೇ ಮಹನೀಯರ ಜಯಂತಿ ಆಚರಣೆಗಳು ಕೇವಲ ಒಂದು ಜಾತಿಗೆ ಸೀಮಿತವಾಗಬಾರದು. ಎಲ್ಲ ಧರ್ಮ, ಸಮಾಜದವರೂ ಪಾಲ್ಗೊಂಡಾಗ ಮಾತ್ರ ಮಹನೀಯರ ಜಯಂತಿಗಳ ಆಚರಣೆಗೆ ನಿಜವಾದ ಅರ್ಥ ಬರಲು ಸಾಧ್ಯ ಎಂದರು.

ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಮಾತನಾಡಿ, ಕನಕದಾಸರು ಈ ನಾಡು ಕಂಡ ಶ್ರೇಷ್ಠ ದಾರ್ಶನಿಕರಾಗಿದ್ದರು. ಮಾನವನ ಒಳಿತಿಗಾಗಿ ಅವರ ಕೊಡುಗೆಯನ್ನು ನಾವು ಸ್ಮರಿಸಲೇಬೇಕು. ಕನಕದಾಸರ ವಿಚಾರಗಳು ನಮ್ಮೆಲ್ಲರಿಗೂ ದಾರಿ ದೀಪವಾಗಿವೆ. ಮಾನವ ಜನುಮ ದೊಡ್ಡದು ಎಂಬುವುದನ್ನು ಸಾರಿ ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಭಕ್ತ ಕನಕದಾಸರು ಶ್ರಮಿಸಿದರು. ಇಂದು ನಮ್ಮ ರಾಜ್ಯದಲ್ಲಿ ಎಲ್ಲಾ ವರ್ಗದ ಜನರು ಸೌಹಾರ್ದಯುತವಾಗಿ ಬಾಳುತ್ತಿದ್ದೇವೆ ಎಂಬುವುದಕ್ಕೆ ಕನಕದಾಸರು ಹಾಕಿ ಕೊಟ್ಟ ಮಾರ್ಗವೇ ಕಾರಣವಾಗಿದೆ. ಎಲ್ಲರೂ ತಮ್ಮ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದರು.

ವಿಜಯಪುರ ಜಿಲ್ಲೆಯ ಖ್ಯಾತ ವಾಗ್ಮಿಗಳು ಮತ್ತು ಸಾಹಿತಿಗಳಾದ ಮೋಹನ ಮೇಟಿ ಅವರು ಕನಕದಾಸರ ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ಕನಕದಾಸರು 78 ಗ್ರಾಮಗಳ ನಾಡಗೌಡನಾಗಿದ್ದ. ಬಸವಣ್ಣನವರು ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದವರು ಭಕ್ತಿ ಭಂಡಾರಿಯಾದರು. ಕುಲಕುಲವೆಂದು ಹೊಡೆದಾಡದಿರಿ ಆತ್ಮ ಯಾವ ಕುಲ ಜೀವಯಾವ ಕುಲ ಎಂದು ಕನಕದಾಸರು ಸಮಾನತೆ ಸಂದೇಶ ಸಾರಿದ್ದರು. ಅವರ ಹರಿ ಭಕ್ತಿ ಸಾರ ಕೃತಿ ಕನ್ನಡದ ಭಗವತ ಗೀತೆ ಎಂದು ಕರೆಯುತ್ತಾರೆ. ಇತ್ತಿಚಿನ ನಮ್ಮ ತಾತ ಮುತ್ತಾತನವರನ್ನು ನಾವು ಸ್ಮರಿಸುವುದಿಲ್ಲ. ಆದರೆ 16ನೇ ಶತಮಾನದಲ್ಲಿನ ಮಹನೀಯರನ್ನು ನಾವು ಏಕೆ ಸ್ಮರಿಸುತ್ತೆವೆಂದರೆ ಅವರು ಪರರಿಗಾಗಿ ಬದುಕಿದ್ದರು ಎಂದು ಹೇಳಿದರು.

ಕನಕದಾಸರ ಜಯಂತಿ ಪ್ರಯುಕ್ತ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಮಕ್ಕಳಿಗೆ ಕಾರ್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಕೊಪ್ಪಳ ತಹಶಿಲ್ದಾರ ವಿಠ್ಠಲ ಚೌಗಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ, ಹಾಲಮತ ಮಹಾಸಭಾದ ಜಿಲ್ಲಾಧ್ಯಕ್ಷ ಹನುಮಂತಪ್ಪ ಕೌದಿ, ಮುಖಂಡರಾದ ಜಡಿಯಪ್ಪ ಬಂಗಾಳಿ, ಭರಮಪ್ಪ ಹಟ್ಟಿ, ವಿರೂಪಣ್ಣ ಕುರುಬರ, ಬೀರಪ್ಪ ಅಂಡಗಿ ಸೇರಿದಂತೆ ಸಮಾಜದ ಇತರೆ ಮುಖಂಡರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕನಕದಾಸರ ಜಯಂತಿ ಪ್ರಯುಕ್ತ ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣ ಎದುರುಗಡೆಯ ಕನಕದಾಸರ ವೃತ್ತದಿಂದ ಸಾಹಿತ್ಯ ಭವನದವರೆಗೆ ನಡೆದ ಮೆರವಣಿಗೆಗೆ ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್‌ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಅದ್ದೂರಿಯಾಗಿ ನಡೆದ ಮೆರವಣಿಗೆಯಲ್ಲಿ ಕುಂಭ ಹೊತ್ತ ಮಹಿಳೆಯರು ಹಾಗೂ ಡೊಳ್ಳು ಕುಣಿತ ಮತ್ತು ವಿವಿಧ ಕಲಾತಂಡಗಳು ಸಾರ್ವಜನಿಕರ ಗಮನ ಸೆಳೆದವು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಮಾಜಿ ಸಂಸದರಾದ ಕರಡಿ ಸಂಗಣ್ಣ, ಮಾಜಿ ಶಾಸಕರಾದ ಕೆ.ಬಸವರಾಜ ಹಿಟ್ನಾಳ್‌, ಜಿಲ್ಲಾಧಿಕಾರಿ ಡಾ.ಸುರೇಶ ಬಿ. ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಸೇರಿದಂತೆ ಇತರೆ ಅಧಿಕಾರಿಗಳು, ಜನಪ್ರತಿನಿಧಿಗಳು, ಸಮಾಜದ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X