Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | 18 ಲಕ್ಷ ರೂ. ಸಾಲಕ್ಕೆ ಪತಿಯ...

Koppal | 18 ಲಕ್ಷ ರೂ. ಸಾಲಕ್ಕೆ ಪತಿಯ ಕೊಲೆ; ಪತ್ನಿ ಸೇರಿ ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ9 Oct 2026 11:24 PM IST
share
Koppal | 18 ಲಕ್ಷ ರೂ. ಸಾಲಕ್ಕೆ ಪತಿಯ ಕೊಲೆ; ಪತ್ನಿ ಸೇರಿ ಮೂವರ ಬಂಧನ

ಗಂಗಾವತಿ: ತಾಲೂಕಿನ ಮುಸ್ಟೂರು ಕ್ಯಾಂಪಿನಲ್ಲಿ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ರಸ್ತೆ ಬದಿ ಎಸೆದಿದ್ದ ಪ್ರಕರಣವನ್ನು ಗಂಗಾವತಿ ಗ್ರಾಮೀಣ ಪೊಲೀಸರು 24 ಗಂಟೆಯೊಳಗೆ ಭೇದಿಸಿದ್ದಾರೆ. ಕೊಲೆಗೆ ಸಂಚು ರೂಪಿಸಿದ ಆರೋಪದ ಮೇಲೆ ಮೃತನ ಪತ್ನಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.

ಮುಸ್ಟೂರು ಕ್ಯಾಂಪಿನ ರಾಘವೇಂದ್ರ ಹನುಮಂತಪ್ಪ ಸಾಳುಂಕೆ (38) ಕೊಲೆಯಾದವರು.

ಪತ್ನಿ ಉಮಾ ಸಾಳುಂಕೆ, ಗಂಗಾವತಿ ನಿವಾಸಿಗಳಾದ ಶಿವಾಜಿ ಮತ್ತು ಖಲೀಲ್ ಬಂಧಿತ ಆರೋಪಿಗಳು.

ಮನೆ ನಿರ್ಮಾಣಕ್ಕಾಗಿ ಮಾಡಿದ್ದ ಸುಮಾರು ₹18 ಲಕ್ಷ ಸಾಲ ತೀರಿಸಲಾಗದೆ ದಂಪತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಪತಿಯನ್ನು ಕೊಲೆ ಮಾಡಿದರೆ ವಿಮೆ ಹಣ ದೊರೆಯುತ್ತದೆ ಎಂಬ ಸಲಹೆ ಉಮಾಗೆ ಸಿಕ್ಕಿತ್ತು ಎನ್ನಲಾಗಿದೆ. ಇದರಿಂದ ಪ್ರೇರಿತಳಾಗಿ ಕೊಲೆಗೆ ಸಂಚು ರೂಪಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಉಮಾ ಸುಮಾರು ಒಂದು ವಾರ ಪತಿಯ ಊಟದಲ್ಲಿ ಮಾತ್ರೆ ಬೆರೆಸಿದ್ದಳು. ಬಳಿಕ ತನ್ನ ಸಂಬಂಧಿ ಶಿವಾಜಿಯನ್ನು ಸಂಪರ್ಕಿಸಿ, ಪತಿಯನ್ನು ಕೊಲೆ ಮಾಡಿದರೆ ಸಾಲದ ಹೊರೆ ಕಡಿಮೆಯಾಗುತ್ತದೆ ಎಂದು ಹೇಳಿ ಸ್ಕೂಟಿ ಕೊಡಿಸುವ ಆಮಿಷವೊಡ್ಡಿದ್ದಳು ಎನ್ನಲಾಗಿದೆ.

ಅಕ್ಟೋಬರ್ 7ರ ರಾತ್ರಿ ಶಿವಾಜಿ ತನ್ನ ಸ್ನೇಹಿತ ಖಲೀಲ್‌ನೊಂದಿಗೆ ಮುಸ್ಟೂರು ಕ್ಯಾಂಪ್‌ಗೆ ಬಂದಿದ್ದ. ಅಂದು ರಾಘವೇಂದ್ರನ ಊಟದಲ್ಲಿ ಮಂಪರು ಮಾತ್ರೆ ಬೆರೆಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯರಾತ್ರಿ 12ರ ಸುಮಾರಿಗೆ ಉಮಾ ಮತ್ತು ಶಿವಾಜಿ ಶಾಲಿನಿಂದ ರಾಘವೇಂದ್ರನ ಕತ್ತು ಬಿಗಿದು, ಬಡಿಗೆಯಿಂದ ತಲೆಗೆ ಹೊಡೆದಿದ್ದಾರೆ ಎನ್ನಲಾಗಿದೆ. ಈ ವೇಳೆ ಎಚ್ಚರಗೊಂಡ ಮಕ್ಕಳನ್ನು ಉಮಾ ಗದರಿಸಿ ಮಲಗಿಸಿದ್ದಳು ಎಂದು ಪೊಲೀಸರು ಹೇಳಿದ್ದಾರೆ.

ಬಳಿಕ ರಾಘವೇಂದ್ರನನ್ನು ಗ್ರಾಮದಿಂದ ಸುಮಾರು ಐದು ಕಿ.ಮೀ. ದೂರದ ರಸ್ತೆ ಬದಿ ಕೊಂಡೊಯ್ದು ಎಸೆದಿದ್ದರು. ಆತ ಜೀವಂತವಾಗಿರುವುದನ್ನು ಗಮನಿಸಿ ಕ್ರಿಮಿನಾಶಕ ಔಷಧ ಕುಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪರಿಚಿತ ವಾಹನ ಢಿಕ್ಕಿಯಿಂದ ಸಾವು ಸಂಭವಿಸಿದೆ ಎಂದು ಬಿಂಬಿಸುವ ಉದ್ದೇಶ ಆರೋಪಿಗಳಿಗಿತ್ತು ಎನ್ನಲಾಗಿದೆ.

ಅಕ್ಟೋಬರ್ 8ರ ಬೆಳಿಗ್ಗೆ ಹೊಲಗಳಿಗೆ ತೆರಳುತ್ತಿದ್ದ ರೈತರು ರಸ್ತೆ ಬದಿ ರಾಘವೇಂದ್ರ ಬಿದ್ದಿರುವುದನ್ನು ಗಮನಿಸಿ ಉಮಾಗೆ ಮಾಹಿತಿ ನೀಡಿದ್ದರು. ಪತಿಗೆ ಫಿಟ್ಸ್‌ ಬಂದಿದ್ದು, ಅಪರಿಚಿತ ವಾಹನ ಢಿಕ್ಕಿ ಹೊಡೆದಿರಬಹುದು ಎಂದು ಆಕೆ ತಿಳಿಸಿದ್ದಳು ಎನ್ನಲಾಗಿದೆ.

ಪ್ರಕರಣದ ತನಿಖೆ ಆರಂಭಿಸಿದ ಪೊಲೀಸರಿಗೆ ಉಮಾಳ ವರ್ತನೆಯ ಬಗ್ಗೆ ಅನುಮಾನ ಮೂಡಿತ್ತು. ಬಳಿಕ ವಿಚಾರಣೆ ನಡೆಸಿ, ಇತರ ಆರೋಪಿಗಳ ಸಂಪರ್ಕ ಹಾಗೂ ಘಟನೆಯ ವಿವರಗಳನ್ನು ಪರಿಶೀಲಿಸಿದಾಗ ಕೊಲೆಯ ಹಿಂದಿನ ಸಂಚು ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ತನಿಖೆ ಮುಂದುವರಿದಿದೆ.

ಆರೋಪಿಗಳ ಮೇಲಿನ ಆರೋಪಗಳು ನ್ಯಾಯಾಲಯದಲ್ಲಿ ಸಾಬೀತಾಗಬೇಕಿದೆ.

Tags

MurderKoppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X