Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಉತ್ತಮ ತರಬೇತಿ ಮೂಲಕ ಮಕ್ಕಳ ಭವಿಷ್ಯ...

ಉತ್ತಮ ತರಬೇತಿ ಮೂಲಕ ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಸಾಧ್ಯ : ಸುರೇಶ್‌ ಇಟ್ನಾಳ

ವಾರ್ತಾಭಾರತಿವಾರ್ತಾಭಾರತಿ5 Dec 2025 6:55 PM IST
share
ಉತ್ತಮ ತರಬೇತಿ ಮೂಲಕ ಮಕ್ಕಳ ಭವಿಷ್ಯ ಉಜ್ವಲಗೊಳಿಸಲು ಸಾಧ್ಯ : ಸುರೇಶ್‌ ಇಟ್ನಾಳ

ಕೊಪ್ಪಳ: ಮಕ್ಕಳಿಗೆ ಅವರ ಬಾಲ್ಯದ ಹಂತದಲ್ಲಿಯೇ ಬಹುಮುಖ ಪ್ರತಿಭೆಗಳನ್ನು ಬೆಳೆಸಿಕೊಳ್ಳಲು ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ತರಬೇತಿ ನೀಡುವುದರಿಂದ ಅವರ ಉತ್ತಮ ಭವಿಷ್ಯ ರೂಪಿಸಲು ಸಾಧ್ಯವಾಗಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ್‌ ಬಿ.ಇಟ್ನಾಳ ಹೇಳಿದರು.

ಶುಕ್ರವಾರ ಕೊಪ್ಪಳ ನಗರದ ಹೊಸಪೇಟ ರಸ್ತೆಯ ಅಗ್ನಿಶಾಮಕ ಠಾಣೆಯ ಹತ್ತಿರದ ಕಲ್ವಾರಿ ಚಾಪೆಲ್ ಟ್ರಸ್ಟ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಹಾಗೂ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಕ್ಕಳ ರಕ್ಷಣಾ ನಿರ್ದೇಶನಾಲ, ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಮಕ್ಕಳ ಪಾಲನಾ ಸಂಸ್ಥೆಗಳು ಹಾಗೂ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ, ಕೊಪ್ಪಳ ಮಕ್ಕಳ ಜಾಗೃತಿ ಸಂಸ್ಥೆ, ಕಲ್ವಾರಿ ಚಾಪೆಲ್ ಟ್ರಸ್ಟ್, ಬೆಂಗಳೂರು, ಅಭಿನವ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಗ್ರಾಮೀಣ ಕ್ಷೇಮಾಭಿವೃದ್ಧಿ ಸಂಘ, ಕೊಪ್ಪಳ ಮತ್ತು ಸ್ಪೂರ್ತಿಧಾಮ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಕುಣಿಕೇರಿ ಇದರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ನಮ್ಮ ಮಕ್ಕಳ ದಿನಾಚರಣೆ-2025 ಕಾರ್ಯಕ್ರಮ ಉದ್ಘಾಟಿಸಿ ಡಾ.ಸುರೇಶ್‌ ಬಿ. ಇಟ್ನಾಳ ಮಾತನಾಡಿದರು.

ಮಕ್ಕಳು ತಮ್ಮ ಬಾಲ್ಯ ಜೀವನವನ್ನು ಕೇವಲ ಆಟೋಟಗಳಿಗೆ ಸೀಮಿತಗೊಳಿಸದೆ, ತಮ್ಮ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾಭ್ಯಾಸ, ಸಂಗೀತ, ಕಲೆ, ಮಾತುಗಾರಿಕೆಯ ಜೊತೆಗೆ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಎಲ್ಲರೂ ಒಂದೇ ರೀತಿ ಇರಲು ಸಾಧ್ಯವಿಲ್ಲ. ಅವರವರ ಇಚ್ಛೆಯ ಮೇರೆಗೆ ಒಂದೊಂದು ವೃತ್ತಿಯನ್ನು ಆರಿಸಿಕೊಳ್ಳಬಹುದು. ಪ್ರತಿಯೊಬ್ಬ ಮಗುವಿಗೂ ವಿಭಿನ್ನ ಆಸಕ್ತಿಗಳಿದ್ದು ಅದನ್ನು ಗುರುತಿಸಬೇಕು. ಕೆಲವರಿಗೆ ಓದುವುದರಲ್ಲಿ ಆಸಕ್ತಿ ಕಡಿಮೆ ಇದ್ದರೂ, ಅವರಿಗೆ ಬೇರೆ ಕ್ಷೇತ್ರಗಳಲ್ಲಿ ಅಪಾರ ಆಸಕ್ತಿ ಇರುತ್ತದೆ. ಮಕ್ಕಳಿಗೆ ಯಾವುದರಲ್ಲಿ ಆಸಕ್ತಿ ಹೆಚ್ಚಿದೆಯೊ ಅವರನ್ನು ಅದರಲ್ಲಿ ಹೆಚ್ಚಾಗಿ ತೊಡಗಿಸಿ ಅವರ ಭವಿಷ್ಯವನ್ನು ರೂಪಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ವರ್ಣಿತ್ ನೇಗಿ ಅವರು ಮಾತನಾಡಿ, ಮಕ್ಕಳ ಕೈಯಲ್ಲಿ ನಿರೂಪಣೆ ಮಾಡಿಸಿ ಅವರಿಗೆ ವೇದಿಕೆ ಭಯವನ್ನು ಹೋಗಲಾಡಿಸಲು ಒಂದು ಪ್ರಯತ್ನ ಮಾಡಿರುವುದು ತುಂಬಾ ಸಂತೋಷವಾಗಿದೆ. ಈ ಒಂದು ಕಾರ್ಯಕ್ರಮದ ಮೂಲಕ ಎಲ್ಲಾ ಮಕ್ಕಳಿಗೆ ಉತ್ತಮ ಭವಿಷ್ಯದ ಕಲ್ಪನೆ ಮೂಡಿಸುವಲ್ಲಿ ಒಂದು ಒಳ್ಳೆಯ ಪ್ರಯತ್ನವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಆರ್.ಹೇಮಂತ್ ಕುಮಾರ್, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ್, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಹಾಂತಸ್ವಾಮಿ ಪೂಜಾರ, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ.ಕೆ.ರಾಘವೇಂದ್ರ ಭಟ್, ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆ ಕೊಪ್ಪಳದ ವ್ಯವಸ್ಥಾಪಕರಾದ ಹರೀಶ್ ಜೋಗಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ವಿಠ್ಠಲ್ ಬಿ. ಜಾಬಗೌಡರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X