Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ವಧು-ವರರ ಅರ್ಹ ವಯಸ್ಸಿನ ಖಾತ್ರಿ ನಂತರವೇ...

ವಧು-ವರರ ಅರ್ಹ ವಯಸ್ಸಿನ ಖಾತ್ರಿ ನಂತರವೇ ವಿವಾಹಕ್ಕೆ ಅವಕಾಶ ನೀಡಿ : ಡಿಸಿ ಇಟ್ನಾಳ

ವಾರ್ತಾಭಾರತಿವಾರ್ತಾಭಾರತಿ8 Oct 2025 7:22 PM IST
share
ವಧು-ವರರ ಅರ್ಹ ವಯಸ್ಸಿನ ಖಾತ್ರಿ ನಂತರವೇ ವಿವಾಹಕ್ಕೆ ಅವಕಾಶ ನೀಡಿ : ಡಿಸಿ ಇಟ್ನಾಳ

ಕೊಪ್ಪಳ : ದೇವಾಲಯಗಳಲ್ಲಿ, ಮಸೀದಿಗಳಲ್ಲಿ ಹಾಗೂ ಚರ್ಚ್ಗಳಲ್ಲಿ ನಡೆಯುವ ಎಲ್ಲ ವಿವಾಹಗಳಲ್ಲಿ ವಧು-ವರರ ಅರ್ಹ ವಯಸ್ಸಿನ ದೃಢೀಕರಣದ ನಂತರವೇ ಅರ್ಚಕರು, ಮೌಲ್ವಿಗಳು ಹಾಗೂ ಪಾದ್ರಿಗಳು ವಿವಾಹಕ್ಕೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ಸೂಚಿಸಿದ್ದಾರೆ.

ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತವು ಹಲವಾರು ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸುತ್ತಿದೆ. ಆದರೂ, ಜಿಲ್ಲೆಯಲ್ಲಿ ಅಪ್ರಾಪ್ತ ಮಕ್ಕಳಿಗೆ ವಿವಾಹವನ್ನು ಮಾಡಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತಿದೆ. ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016 ರಂತೆ 18 ವರ್ಷದೊಳಗಿನ ಹೆಣ್ಣು ಮಗು ಹಾಗೂ 21 ವರ್ಷದೊಳಗಿನ ಗಂಡು ಮಕ್ಕಳ ವಿವಾಹವನ್ನು ನಿಷೇಧಿಸಿದೆ. ಬಾಲ್ಯವಿವಾಹವು ಶಿಕ್ಷಾರ್ಹ ಅಪರಾಧವಾಗಿದ್ದು, ಕಾಯ್ದೆಯ ಕಾಲಂ 10 ಮತ್ತು 11 ರನ್ವಯ ಬಾಲ್ಯವಿವಾಹದಲ್ಲಿ ಭಾಗವಹಿಸಿದವರು, ಪ್ರೋತ್ಸಾಹಿಸಿದವರು, ಸಹಕರಿಸಿದವರು ಹಾಗೂ ನಡೆಸಿದವರಿಗೆ ಕನಿಷ್ಟ 1 ರಿಂದ 2 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ವರೆಗೆ ದಂಡವನ್ನು ವಿಧಿಸಬಹುದಾಗಿದೆ.

ಸರ್ವೋಚ್ಛ ನ್ಯಾಯಾಲಯವು ಬಾಲ್ಯವಿವಾಹದಿಂದ ಮಕ್ಕಳ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರುವುದಲ್ಲದೆ ಮಕ್ಕಳ ಮೇಲೆ ಲೈಂಗಿಕ ಅಪರಾಧಗಳನ್ನು ಎಸಗಲು ಅವಕಾಶಗಳನ್ನು ನೀಡಿದಂತಾಗುತ್ತದೆ. ಆದ್ದರಿಂದ ಬಾಲ್ಯವಿವಾಹಗಳನ್ನು ಕಡ್ಡಾಯವಾಗಿ ತಡೆಗಟ್ಟಿ ಮತ್ತು ಸಮುದಾಯಗಳಲ್ಲಿ ಜಾಗೃತಿಯನ್ನು ಮೂಡಿಸಲು ಅವಶ್ಯಕ ಕ್ರಮಗಳನ್ನು ಕೈಗೊಳ್ಳುವಂತೆ ನಿರ್ದೇಶಿಸಿದೆ.

ಆದ್ದರಿಂದ ತಾವುಗಳು ನೆರವೇರಿಸುವ ವಿವಾಹಗಳಲ್ಲಿ ವಧುವಿನ ವಯಸ್ಸು 18 ವರ್ಷ ಹಾಗೂ ವರನ ವಯಸ್ಸು 21 ವರ್ಷ ಪೂರ್ಣವಾಗಿರುವ ಬಗ್ಗೆ ಖಾತ್ರಿ ಪಡಿಸಿಕೊಂಡ ನಂತರವೇ(ಜನನ ಪ್ರಮಾಣ ಪತ್ರ ಅಥವಾ ಶಾಲಾ ದಾಖಲಾತಿ ಪ್ರಮಾಣ ಪತ್ರ ಅಥವಾ ಎರಡೂ ದಾಖಲಾತಿ ಇಲ್ಲದ ಸಂದರ್ಭದಲ್ಲಿ ಮಾತ್ರ ಜಿಲ್ಲಾ ಶಸ್ತ್ರ ಚಿಕಿತ್ಸಕರು ನೀಡಿದ ವೈದ್ಯಕೀಯ ಪ್ರಮಾಣ ಪತ್ರಗಳು ಮಾತ್ರ ಮಾನ್ಯವಾಗಿದ್ದು, ಇನ್ಯಾವುದೇ ದಾಖಲಾತಿಗಳು ಮಾನ್ಯವಲ್ಲ) ಅಂತಹ ವಿವಾಹಗಳಿಗೆ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X