Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಪ್ರಶ್ನಿಸುವವರ ಬಾಯಿ ಮುಚ್ಚಿಸಲು...

ಪ್ರಶ್ನಿಸುವವರ ಬಾಯಿ ಮುಚ್ಚಿಸಲು ಅಟ್ರಾಸಿಟಿ ಕಾಯ್ದೆ ದುರ್ಬಳಕೆ: ಶಾಸಕ ಹಿಟ್ನಾಳ್ ವಿರುದ್ಧ ಶ್ರೀರಾಮುಲು ವಾಗ್ದಾಳಿ

ಮೂಲಸೌಕರ್ಯ ಪ್ರಶ್ನಿಸಿದ್ದಕ್ಕೆ ಜಾತಿನಿಂದನೆ ಪ್ರಕರಣ ಆರೋಪ: ಸಂತ್ರಸ್ತ ಕುಟುಂಬಗಳಿಗೆ ಶ್ರೀರಾಮುಲು ಸಾಂತ್ವನ

ವಾರ್ತಾಭಾರತಿವಾರ್ತಾಭಾರತಿ17 Oct 2026 6:32 PM IST
share
ಪ್ರಶ್ನಿಸುವವರ ಬಾಯಿ ಮುಚ್ಚಿಸಲು ಅಟ್ರಾಸಿಟಿ ಕಾಯ್ದೆ ದುರ್ಬಳಕೆ: ಶಾಸಕ ಹಿಟ್ನಾಳ್ ವಿರುದ್ಧ ಶ್ರೀರಾಮುಲು ವಾಗ್ದಾಳಿ

ಕೊಪ್ಪಳ: ಮೂಲಭೂತ ಸೌಕರ್ಯಗಳಿಗಾಗಿ ಶಾಸಕರನ್ನು ಪ್ರಶ್ನಿಸಿದ್ದಕ್ಕೆ ಸುಳ್ಳು ಜಾತಿನಿಂದನೆ ಪ್ರಕರಣ ಎದುರಿಸುತ್ತಿದ್ದಾರೆ ಎನ್ನಲಾದ ಹ್ಯಾಟಿ ಮುಂಡರಗಿ ಗ್ರಾಮದ ಸಂತ್ರಸ್ತ ಕುಟುಂಬಗಳನ್ನು ಹಿರಿಯ ಬಿಜೆಪಿ ನಾಯಕ ಬಿ.ಶ್ರೀರಾಮುಲು ಭೇಟಿ ಮಾಡಿ ಸಾಂತ್ವನ ಹೇಳಿದರು.

ಈಶಾನ್ಯ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಶಶಿಲ್ ನಮೋಶಿ ಅವರ ಪರವಾಗಿ ಕೊಪ್ಪಳ ವಿಧಾನಸಭಾ ಕ್ಷೇತ್ರದಲ್ಲಿ ಮತಯಾಚನೆ ನಡೆಸಲು ಆಗಮಿಸಿದ್ದ ಶ್ರೀರಾಮುಲು, ಹ್ಯಾಟಿ ಮುಂಡರಗಿ ಗ್ರಾಮಕ್ಕೆ ಭೇಟಿ ನೀಡಿದರು. ಈ ವೇಳೆ ಗ್ರಾಮದಲ್ಲಿನ ಮೂಲಭೂತ ಸೌಕರ್ಯಗಳ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದ ಅವರು, ಶಾಸಕರ ಬೆಂಬಲಿಗರಿಂದ ದೌರ್ಜನ್ಯ ನಡೆದಿದೆ ಎಂಬ ಆರೋಪದ ಕುರಿತು ಗ್ರಾಮಸ್ಥರಿಂದ ಮಾಹಿತಿ ಪಡೆದುಕೊಂಡರು.

ನಂತರ ಮಾತನಾಡಿದ ಅವರು, ಜಾತಿನಿಂದನೆ ಹಾಗೂ ದೌರ್ಜನ್ಯ ತಡೆ ಕಾಯ್ದೆಗಳು ನಿಜವಾಗಿ ನೊಂದ ಶೋಷಿತ ಹಾಗೂ ದಲಿತ ಸಮುದಾಯಗಳಿಗೆ ನ್ಯಾಯ ಒದಗಿಸುವುದಕ್ಕಾಗಿ ಇವೆ. ಆದರೆ, ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರಂತಹವರು ತಮ್ಮನ್ನು ಪ್ರಶ್ನಿಸುವ ಸಾರ್ವಜನಿಕರ ಬಾಯಿ ಮುಚ್ಚಿಸಲು ಈ ಕಾಯ್ದೆಯನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿರುವುದು ಖಂಡನೀಯ. ಇದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡುವ ಬಹುದೊಡ್ಡ ಅಪಮಾನ. ಇಂತಹವರಿಂದಲೇ ಸಮಾಜದಲ್ಲಿ ದಲಿತರ ಬಗ್ಗೆ ತಾತ್ಸಾರ ಭಾವನೆ ಬೆಳೆಯಲು ಸಾಧ್ಯ ಎಂದು ತೀವ್ರ ವಾಗ್ದಾಳಿ ನಡೆಸಿದರು.

ನೊಂದ ಕುಟುಂಬಗಳ ಪರವಾಗಿ ನಾನಿದ್ದೇನೆ. ಕೊಪ್ಪಳದ ಬಿಜೆಪಿ ನಾಯಕರೂ ಅವರ ಬೆಂಬಲಕ್ಕಿದ್ದಾರೆ. ಯಾರಿಗೂ ಹೆದರುವ ಅಗತ್ಯವಿಲ್ಲ ಎಂದು ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಿದರು.

ಇದಕ್ಕೂ ಮುನ್ನ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಮಹರ್ಷಿ ವಾಲ್ಮೀಕಿ ಅವರ ನಾಮಫಲಕಗಳಿಗೆ ಶ್ರೀರಾಮುಲು ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಡಾ.ಬಸವರಾಜ ಕ್ಯಾವಟರ್, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಕೊಪ್ಪಳ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣವರ್, ಗ್ರಾಮೀಣ ಮಂಡಲ ಅಧ್ಯಕ್ಷ ವೀರೇಶ್ ಸಜ್ಜನ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಹ್ಯಾಟಿ ಮುಂಡರಗಿ ಗ್ರಾಮಸ್ಥರು ಉಪಸ್ಥಿತರಿದ್ದರು.

Tags

HitnalB. Sreeramulu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X