Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಬೆಲೆ ಏರಿಕೆ ಖಂಡಿಸಿ ಯಲಬುರ್ಗಾದಲ್ಲಿ...

ಬೆಲೆ ಏರಿಕೆ ಖಂಡಿಸಿ ಯಲಬುರ್ಗಾದಲ್ಲಿ ಬಿಜೆಪಿ ಬಿಜೆಪಿಯಿಂದ ಪ್ರತಿಭಟನೆ

ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ23 Nov 2026 4:41 PM IST
share
ಬೆಲೆ ಏರಿಕೆ ಖಂಡಿಸಿ ಯಲಬುರ್ಗಾದಲ್ಲಿ ಬಿಜೆಪಿ ಬಿಜೆಪಿಯಿಂದ ಪ್ರತಿಭಟನೆ

ಯಲಬುರ್ಗಾ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ ಯಲಬುರ್ಗಾ ಮಂಡಲದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಹಾಲಿನ ದರ ಹೆಚ್ಚಳ, ಬಸ್ ಪ್ರಯಾಣ ದರ ಏರಿಕೆ, ರೈತರ ಜಮೀನುಗಳ ನೋಂದಣಿ ಸಂದರ್ಭದಲ್ಲಿ ಸ್ಟ್ಯಾಂಪ್ ಡ್ಯೂಟಿ ಹಾಗೂ ನೋಂದಣಿ ಶುಲ್ಕ ಹೆಚ್ಚಳ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಹಾಲಪ್ಪ ಆಚಾರ್ಯ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜನಸಾಮಾನ್ಯರ ಮೇಲೆ ಒಂದಿಲ್ಲೊಂದು ರೀತಿಯಲ್ಲಿ ಆರ್ಥಿಕ ಹೊರೆ ಹೆಚ್ಚಾಗುತ್ತಿದೆ. ಹಾಲು, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡವರು, ಮಧ್ಯಮ ವರ್ಗದವರು ಹಾಗೂ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೈತರ ಜಮೀನುಗಳ ನೋಂದಣಿ ಮತ್ತು ಸ್ಟ್ಯಾಂಪ್ ಡ್ಯೂಟಿ ಶುಲ್ಕ ಹೆಚ್ಚಳದಿಂದ ಕೃಷಿಕರ ಮೇಲಿನ ಹೊರೆ ಮತ್ತಷ್ಟು ಹೆಚ್ಚಾಗಿದೆ. ಜನರ ಹಿತ ಕಾಪಾಡಬೇಕಾದ ಸರ್ಕಾರವೇ ಜನರ ಬದುಕಿಗೆ ಹೊರೆಯಾಗುತ್ತಿರುವುದು ದುರದೃಷ್ಟಕರ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಚುನಾವಣೆ ಸಂದರ್ಭದಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸುವ ಬದಲು ಬೆಲೆ ಏರಿಕೆಯ ಮೂಲಕ ಜನಸಾಮಾನ್ಯರ ಜೀವನವನ್ನು ದುಸ್ತರಗೊಳಿಸಲಾಗುತ್ತಿದೆ. ಸರ್ಕಾರದ ಇಂತಹ ನೀತಿಗಳಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಹದಗೆಡುತ್ತಿದೆ. ಕೂಡಲೇ ಬೆಲೆ ಏರಿಕೆಯನ್ನು ನಿಯಂತ್ರಿಸಿ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸುತ್ತಿರುವ ರಾಜ್ಯ ಸರ್ಕಾರದ ನಿಲುವಿನ ವಿರುದ್ಧವೂ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ಮತದಾರರ ಪಟ್ಟಿಯ ಶುದ್ಧೀಕರಣ ಮತ್ತು ಪಾರದರ್ಶಕತೆಗೆ ಸಂಬಂಧಿಸಿದ ಪ್ರಕ್ರಿಯೆಗೆ ಸರ್ಕಾರ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಅನಗತ್ಯ ವಿರೋಧ ವ್ಯಕ್ತಪಡಿಸುವುದನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಯಲಬುರ್ಗಾ ಮಂಡಲದ ಅಧ್ಯಕ್ಷ ಮಾರುತಿ ಹೊಸಮನಿ ಪ್ರತಿಭಟನೆಯ ಅಧ್ಯಕ್ಷತೆ ವಹಿಸಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳುಗಣ್ಣನವರ, ಪಕ್ಷದ ಹಿರಿಯ ಮುಖಂಡರಾದ ಬಸವಲಿಂಗಪ್ಪ ಭೂತೆ, ಸಿ.ಎಚ್. ಪೊಲೀಸ್ ಪಾಟೀಲ, ಪಕ್ಷದ ವಕ್ತಾರ ವೀರಣ್ಣ ಹುಬ್ಬಳ್ಳಿ, ರತನ್ ದೇಸಾಯಿ, ಸುರಪುರ ವಕೀಲರು, ರಾಚಪ್ಪ ಹುಳ್ಳಿ, ಶರಣಪ್ಪ ನಿಲುಗಲ್ಲ, ಶರಣಪ್ಪ ಹೊಸಕೇರಿ, ಸೋಮನಗೌಡ ಸೋಂಪುರ, ವಿಜಯಕುಮಾರ ತಾಳಕೇರಿ, ಶಿವಲೀಲಾ ದಳವಾಯಿ, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಅಯ್ಯನಗೌಡ ಕೆಂಚಮ್ಮನವರ ಹಾಗೂ ಅಮರೇಶ ಹುಬ್ಬಳ್ಳಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಜೆಡಿಎಸ್ ತಾಲೂಕು ಅಧ್ಯಕ್ಷ ಬಸವರಾಜ ಗುರುಗುಳಿ, ಶರಣಪ್ಪ ರಾಂಪುರ, ಶರಣಪ್ಪ ಈಳಿಗೇರ, ಅಯ್ಯಪ್ಪ ಯಡ್ಡೋಣಿ, ಮಂಜುನಾಥ ನಾಡಗೌಡ್ರು, ಮಂಗಳೇಶ ಮಂಗಳೂರು, ಯುವ ಮೋರ್ಚಾ ಅಧ್ಯಕ್ಷ ಕಲ್ಲೇಶಪ್ಪ ಕರಮುಡಿ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂತೋಷಿ ಎಂ. ಜೋಶಿ, ಎಸ್‌ಟಿ ಮೋರ್ಚಾ ತಾಲೂಕು ಅಧ್ಯಕ್ಷ ದ್ಯಾಮಣ್ಣ ಉಚ್ಚಲಕುಂಟಿ, ಎಸ್‌ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಕಾಳಿ, ನಾಗರಾಜ ನಾಯಕ ಹಾಗೂ ಹನುಮಂತ ನಾಯಕ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ಬಿಜೆಪಿ ಪಕ್ಷದ ಹಿರಿಯ ಮುಖಂಡರು, ಮಹಿಳಾ ಪದಾಧಿಕಾರಿಗಳು, ಯುವ ಮೋರ್ಚಾ ಕಾರ್ಯಕರ್ತರು, ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರಗಳ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಬೂತ್ ಅಧ್ಯಕ್ಷರು ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿದರು.

Tags

BJPprotestYelburga
share
ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ
ಮುಹಮ್ಮದ್ ಅಖೀಲ್ ಉಡೇವು/ವಾರ್ತಾಭಾರತಿ

ಎಂ.ಡಿ.ಅಖೀಲ್ ಉಡೇವು ಅವರು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಪತ್ರಿಕೆಗಳ ಪುಟವಿನ್ಯಾಸ ಹಾಗೂ ವರದಿಗಾರಿಕೆಯಲ್ಲಿ ತೊಡಗಿಸಿಕೊಂಡು ಅನುಭವಗಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ

Next Story
X