Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ...

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಬ್ಲ್ಯಾಕ್‌ಮೇಲ್: ಚಲುವಾದಿ ನಾರಾಯಣಸ್ವಾಮಿ ಆರೋಪ

ವಾಲ್ಮೀಕಿ ನಿಗಮದ ಅಕ್ರಮ ಪ್ರಕರಣದ ತನಿಖೆಗೆ ಆಗ್ರಹ

ಹೊನ್ನೂರ ಹುಸೇನ ಬೇಲ್ದಾರ್ಹೊನ್ನೂರ ಹುಸೇನ ಬೇಲ್ದಾರ್29 Nov 2026 7:53 AM IST
share
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರಿಗೆ ಬ್ಲ್ಯಾಕ್‌ಮೇಲ್: ಚಲುವಾದಿ ನಾರಾಯಣಸ್ವಾಮಿ ಆರೋಪ

ಕನಕಗಿರಿ: ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಕಾಂಗ್ರೆಸ್ ಸರ್ಕಾರ ಜನರನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ. ಇದು ಬ್ರೋಕರ್ ಸರ್ಕಾರವಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು.

ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕದಿದ್ದರೆ ಗ್ಯಾರಂಟಿ ಯೋಜನೆಗಳನ್ನು ತೆಗೆದುಹಾಕುತ್ತೇವೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಗ್ಯಾರಂಟಿ ಎಂದರೆ ಜನರನ್ನು ಬ್ಲ್ಯಾಕ್‌ಮೇಲ್ ಮಾಡುವುದೇ? ಎಂದು ಪ್ರಶ್ನಿಸಿದರು.

ನೀವು ಈಗಲೇ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ನೀಡುತ್ತಿಲ್ಲ. ಇನ್ನು ತೆಗೆದುಹಾಕುವುದು ಯಾವಾಗ? ಕಳೆದ ಬಾರಿ ಗ್ಯಾರಂಟಿ ಕೊಡುತ್ತಿರಲಿಲ್ಲ. ಅದಕ್ಕೂ ಮೊದಲು ಯಾವ ಸರ್ಕಾರಗಳೂ ಗ್ಯಾರಂಟಿ ನೀಡುತ್ತಿರಲಿಲ್ಲ. ಆಗ ಜನ ಬದುಕಿರಲಿಲ್ಲವೇ? ಜನ ಆರಾಮವಾಗಿಯೇ ಇದ್ದರು. ಈಗ ನಮ್ಮ ದುಡ್ಡನ್ನೇ ಒಂದು ಜೇಬಿನಿಂದ ತೆಗೆದು ಮತ್ತೊಂದು ಜೇಬಿಗೆ ಹಾಕುತ್ತಿದ್ದೀರಿ. ಅದಕ್ಕೆ ದೊಡ್ಡ ಸಾಧನೆ ಮಾಡಿದಂತೆ ಬಿಂಬಿಸಿಕೊಳ್ಳುತ್ತಿದ್ದೀರಾ? ಎಂದು ಟೀಕಿಸಿದರು.

ಈ ಸರ್ಕಾರ ಗಂಡನನ್ನು ಹೆಂಡತಿಯ ಮುಂದೆ ಏಜೆಂಟ್‌ನಂತೆ ಮಾಡುತ್ತಿದೆ. ಹೆಂಡತಿಗೆ ಉಚಿತ ಎಂದು ಹೇಳಿ, ಗಂಡನಿಗೆ ಡಬಲ್ ಹಾಕಿದರೆ ಅದೇನು ದೊಡ್ಡ ಸಾಧನೆಯೇ? ಈ ರೀತಿ ಜನರನ್ನು ಬ್ಲ್ಯಾಕ್‌ಮೇಲ್ ಮಾಡಬಾರದು. ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಿ ನೋಡಿ, ನಿಮ್ಮ ಹಣೆಬರಹ ಏನೆಂಬುದು ಗೊತ್ತಾಗುತ್ತದೆ. ಈ ಬಾರಿ ಜನ ನಿಮ್ಮನ್ನು ಮನೆಗೆ ಕಳುಹಿಸುತ್ತಾರೆ ಎಂದು ಹೇಳಿದರು.

ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ :

ವಾಲ್ಮೀಕಿ ನಿಗಮದಲ್ಲಿ 87 ಕೋಟಿ ರೂ. ದುರುಪಯೋಗವಾಗಿದೆ ಎಂದು ಮಾಜಿ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಈ ಕುರಿತು ದಾಖಲೆಗಳಿವೆ. ಈಡಿ ಪ್ರಕರಣ ನಡೆಯುತ್ತಿದೆ. ಸಿಬಿಐ ತನಿಖೆಯೂ ಒಂದು ಕಡೆ ನಡೆಯುತ್ತಿದೆ. ಸಿಐಡಿ ತನಿಖೆ ನಡೆಸಿದೆಯೇ? ಮೊದಲು ಎಸ್‌ಐಟಿ ತನಿಖೆಯಲ್ಲಿ ಕ್ಲೀನ್‌ಚಿಟ್ ಕೊಡಿಸಿದ್ದೀರಿ. ಅಂದರೆ ಈ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಲಗೊಳಿಸುತ್ತಿದೆ. ಅಧಿಕಾರಿಗಳ ಸ್ಥೈರ್ಯವನ್ನು ಕುಗ್ಗಿಸುತ್ತಿದೆ ಎಂದು ಆರೋಪಿಸಿದರು.

ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಅದಕ್ಕೂ ಕಪ್ಪುಚುಕ್ಕೆ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಕ್ಲೀನ್‌ಚಿಟ್ ನೀಡಿರುವುದು ಸಮರ್ಪಕ ತನಿಖೆ ನಡೆದಿಲ್ಲ ಎಂಬುದನ್ನು ತೋರಿಸುತ್ತದೆ. ಅದರ ನಂತರ ನಾವೆಲ್ಲ ಹೋರಾಟ ನಡೆಸಿ ರಾಜೀನಾಮೆ ನೀಡುವಂತೆ ಒತ್ತಾಯಿಸಿದೆವು. ರಾಜೀನಾಮೆ ನೀಡಿದ ಬಳಿಕ ಕ್ಲೀನ್‌ಚಿಟ್ ಎಲ್ಲಿಂದ ಬರುತ್ತದೆ? ಮತ್ತೆ ತನಿಖೆ ನಡೆಸಿದ್ದಾರೆಯೇ? ಇನ್ನೂ ಸಿಬಿಐ ಮತ್ತು ಇಡಿ ತನಿಖೆಗಳು ಬಾಕಿ ಇವೆ. ಹೀಗಾಗಿ ಅವರನ್ನು ಮತ್ತೆ ಮಂತ್ರಿ ಮಾಡಬಾರದು. ರಾಜೀನಾಮೆ ನೀಡಿದ ನಂತರ ಕ್ಲೀನ್‌ಚಿಟ್ ನೀಡಿದ್ದು ಹೇಗೆ? ಅದಕ್ಕೆ ಆದೇಶ ನೀಡಿದವರು ಯಾರು? ಎಂದು ಪ್ರಶ್ನಿಸಿದರು.

ಗೃಹ ಸಚಿವರು ಗೃಹ ಇಲಾಖೆಗೆ ಮಾತ್ರ ಸರಿಯಾಗಿದ್ದಾರೆ. ರಾಜ್ಯಕ್ಕೆ ಮತ್ತು ಜನರಿಗೆ ಅವರಿಂದ ಯಾವುದೇ ಸಂಬಂಧವಿಲ್ಲ. ಆದ್ದರಿಂದ ಸರ್ಕಾರದ ಈ ಕ್ರಮವನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದರು.

ತುಂಗಭದ್ರಾ ನೀರಿನ ಸಮಸ್ಯೆ ಬಗೆಹರಿಸಿ :

ತುಂಗಭದ್ರಾ ನೀರಿನ ಸಮಸ್ಯೆ ಇದೆ. ಮಳೆಯ ಕೊರತೆಯಿಂದ ಸಮಸ್ಯೆ ಮತ್ತಷ್ಟು ಹೆಚ್ಚಾಗಿದೆ. ಇದನ್ನು ಬಗೆಹರಿಸಬೇಕು. ರೈತರ ಬೆಳೆಗಳಿಗೆ ನೀರು ನೀಡದಿದ್ದರೆ ಅದು ಜನವಿರೋಧಿ ಸರ್ಕಾರವಾಗುತ್ತದೆ. ಯಾವುದೇ ಹಂತದಲ್ಲೂ ಇದನ್ನು ಸಹಿಸಿಕೊಳ್ಳುವುದಿಲ್ಲ ಎಂದು ಎಚ್ಚರಿಸಿದರು.

Tags

Blackmailguarantee schemesChaluvadi Narayanaswamy
share
ಹೊನ್ನೂರ ಹುಸೇನ ಬೇಲ್ದಾರ್
ಹೊನ್ನೂರ ಹುಸೇನ ಬೇಲ್ದಾರ್

ಹೊನ್ನೂರ ಹುಸೇನ ಬೇಲ್ದಾರ್ ಅವರು ಕೊಪ್ಪಳ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಕನಕಗಿರಿ, ಗಂಗಾವತಿ ಹಾಗೂ ಕಾರಟಗಿ ತಾಲೂಕುಗಳಲ್ಲಿ ವಾರ್ತಾಭಾರತಿ ಕನ್ನಡ ದಿನಪತ್ರಿಕೆಯ ವರದಿಗಾರರಾಗಿ ಕಾರ್ಯನಿರ್ವಹಿಸಿ ಅನುಭವಗಳಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ.

Next Story
X