Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕಾಂಗ್ರೆಸ್ ಸರಕಾರ ಅಭಿವೃದ್ಧಿ ಶೂನ್ಯ...

ಕಾಂಗ್ರೆಸ್ ಸರಕಾರ ಅಭಿವೃದ್ಧಿ ಶೂನ್ಯ ಸರಕಾರ : ಛಲವಾದಿ ನಾರಾಯಣಸ್ವಾಮಿ

ಹೊನ್ನೂರ ಹುಸೇನ ಬೇಲ್ದಾರ್ಹೊನ್ನೂರ ಹುಸೇನ ಬೇಲ್ದಾರ್28 Nov 2026 2:50 PM IST
share
ಕಾಂಗ್ರೆಸ್ ಸರಕಾರ ಅಭಿವೃದ್ಧಿ ಶೂನ್ಯ ಸರಕಾರ : ಛಲವಾದಿ ನಾರಾಯಣಸ್ವಾಮಿ

ಕನಕಗಿರಿ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಸಂಪೂರ್ಣ ಕುಂಠಿತಗೊಂಡಿದೆ. ಇದು ಅಭಿವೃದ್ಧಿ ಶೂನ್ಯ ಸರಕಾರವಾಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು.

ಕನಕಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಸರಿಯಾಗಿ ಜನರಿಗೆ ತಲುಪುತ್ತಿಲ್ಲ. ಜನರಿಗೆ ವಂಚಿಸಿ ಸರಕಾರ ಅಧಿಕಾರ ನಡೆಸುತ್ತಿದೆ ಎಂದು ಕಿಡಿಕಾರಿದರು.

ಗೃಹಲಕ್ಷ್ಮಿ ಹಣ ಸರಿಯಾಗಿ ನೀಡುತ್ತಿಲ್ಲ. ಫಲಾನುಭವಿಗಳಿಗೆ ಗೌರವ ನೀಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನು ಟಕಾಟಕ್ ಎಂದು ನೀಡುತ್ತೇವೆ ಎಂದು ಹೇಳಿದರು. ಈಗ ಯಾವುದೂ ಸರಿಯಾಗಿ ಸಿಗುತ್ತಿಲ್ಲ. ನಾವು ನೀಡುವ ತೆರಿಗೆಯ ಹಣವನ್ನೇ ನಮಗೆ ಕೊಡುತ್ತಿದ್ದಾರೆ. ಜಮೀನು ಹೆಚ್ಚು ಇದ್ದರೆ ನೀಡುವುದಿಲ್ಲ ಎಂದು ಮುಲಾಜಿಲ್ಲದೆ ಹೇಳುತ್ತಾರೆ ಎಂದು ಟೀಕಿಸಿದರು.

ಎಲ್ಲಿ ನೋಡಿದರೂ ರಸ್ತೆಗಳು ಹಾಳಾಗಿವೆ. ಮಳೆ ಕೊರತೆಯಿಂದ ರೈತರು ಕಂಗಾಲಾಗಿದ್ದಾರೆ. ಬೆಳೆಗಳು ಬೆಳೆದಿಲ್ಲ. ದನಕರುಗಳಿಗೆ ಮೇವು, ನೀರು ಸಿಗುತ್ತಿಲ್ಲ. ರೈತರು ಬಹಳ ಕಷ್ಟಕರ ಜೀವನ ಅನುಭವಿಸುತ್ತಿದ್ದಾರೆ ಎಂದರು.

ಎಕರೆಗೆ 25 ಸಾವಿರ ರೂ. ನೀಡಬೇಕು ಎಂದು ಬಿಜೆಪಿ ಹೋರಾಟ ಮಾಡಿದರೆ, ಸರಕಾರ ಕೇವಲ 2 ಸಾವಿರ ರೂ. ನೀಡುತ್ತಿದೆ. ಅದೂ ಕೂಡ ಸರಿಯಾಗಿ ರೈತರಿಗೆ ತಲುಪಿಲ್ಲ. ಕೆಲ ರೈತರಿಗೆ ಎಕರೆಗೆ 700, 900 ರೂ. ಮಾತ್ರ ಬಂದಿದೆ. ಕೇಳಿದರೆ ನನ್ನ ಜೇಬಿನಿಂದ ಕೊಡಲೇನು ಎಂದು ಸರಕಾರ ಹೇಳುತ್ತಿದೆ. ಹಣ ಇಲ್ಲದಿದ್ದರೆ ರಾಜೀನಾಮೆ ಕೊಟ್ಟುಬಿಡಲಿ. ಬೇರೆ ಯಾರಾದರೂ ಬಂದು ನೋಡಿಕೊಳ್ಳುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಸರಕಾರದಲ್ಲಿ ಶೇ.70 ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಖಾತೆ ಬದಲಾವಣೆ ಮಾಡಬೇಕಾದರೂ ಜಮೀನಿನ ಬೆಲೆ ಕೇಳಿ ಲಂಚ ನಿಗದಿ ಮಾಡುತ್ತಾರೆ. ಎಲ್ಲಾ ದಿನಸಿ ವಸ್ತುಗಳ ಬೆಲೆ ಏರಿದೆ. ಗ್ರಾಹಕರು ಕಂಗಾಲಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಬದುಕಲು ಆಗುತ್ತಿಲ್ಲ. ದವಸ-ಧಾನ್ಯಗಳ ದರ ಏರಿದೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಬಸವರಾಜ ಧಡೇಸೂಗೂರು, ಪ್ರಮುಖರಾದ ನವೀನ್ ಮಾನೆ,ಮಾಹಂತೇಶ ಸಜ್ಜನ, ಸಣ್ಣ ಕನಕಪ್ಪ, ಚೆನ್ನಪ್ಪ ತೆಗ್ಗಿನಮನಿ, ಗ್ಯಾನಪ್ಪ, ಗುರನಗೌಡ, ಮೌನೇಶ, ಲಿಂಗಪ್ಪ ಪೂಜಾರಿ,ಶೇಷಪ್ಪ, ಹನುಮಂತ,ರಂಗಪ್ಪ ಕೊರಗಟಗಿ, ನರಸಪ್ಪ ನಾಯಕ ಸೇರಿದಂತೆ ಇತರರು ಇದ್ದರು.

Tags

Chalavadi Narayanaswamy
share
ಹೊನ್ನೂರ ಹುಸೇನ ಬೇಲ್ದಾರ್
ಹೊನ್ನೂರ ಹುಸೇನ ಬೇಲ್ದಾರ್

ಹೊನ್ನೂರ ಹುಸೇನ ಬೇಲ್ದಾರ್ ಅವರು ಕೊಪ್ಪಳ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದಾರೆ. ವಿದ್ಯಾರ್ಥಿ ದೆಸೆಯಿಂದಲೇ ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ ಇವರು, ಕನಕಗಿರಿ, ಗಂಗಾವತಿ ಹಾಗೂ ಕಾರಟಗಿ ತಾಲೂಕುಗಳಲ್ಲಿ ವಾರ್ತಾಭಾರತಿ ಕನ್ನಡ ದಿನಪತ್ರಿಕೆಯ ವರದಿಗಾರರಾಗಿ ಕಾರ್ಯನಿರ್ವಹಿಸಿ ಅನುಭವಗಳಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಕೊಪ್ಪಳ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಐತಿಹಾಸಿಕ ಸ್ಮಾರಕಗಳು ಹಾಗೂ ಇತಿಹಾಸಕ್ಕೆ ಸಂಬಂಧಿಸಿದ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ.

Next Story
X