ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಅಗತ್ಯ: ಅಮ್ಜದ್ ಪಟೇಲ್

ಕೊಪ್ಪಳ: ಇಂದಿನ ಮಕ್ಕಳೇ ಈ ನಾಡಿನ ಭಾವಿ ಪ್ರಜೆಗಳಾಗಿದ್ದು ಅವರ ಭವಿಷ್ಯ ಉಜ್ವಲಗೊಳ್ಳಲು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವದು ಅಗತ್ಯವಾಗಿದೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.
ಅವರು ಮಂಗಳವಾರದಂದು ನಗರದ ಗೌರಿ ಅಂಗಳ ಓಣಿಯ ಉರ್ದು ಸರಕಾರಿ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಹಾಗೂ ಶಾಲೆಯ ಉತ್ತಮ ಶಿಕ್ಷಕಿ ಪ್ರಶಸ್ತಿ ಸಮಾರಂಭದಲ್ಲಿ ಉದ್ಘಾಟಕರಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದ ಸಾನಿಧ್ಯವನ್ನು ಧರ್ಮ ಗುರುಗಳಾದ ಮೌಲಾನ ಮುಫ್ತಿ ನಝೀರ್ ಅಹ್ಮದ್ ತಸ್ಕಿನ್ ರವರು ವಹಿಸಿದ್ದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಶಿಕ್ಷಣ ಅಧಿಕಾರಿಗಳಾದ ಹನುಮಂತಪ್ಪನವರು ವಹಿಸಿದರು.
ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಬಿ ಆರ್ ಸಿ ಆದ ಮಹಿಬೂಬ್ ಮೈಮುದ್ದೀನ್ ಇನ್ನೂ ಅನೇಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.
Next Story





