ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಕಲಿಸಿಕೊಡಬೇಕು: ಅಮ್ಜದ್ ಪಟೇಲ್

ಕೊಪ್ಪಳ: ಇಂದಿನ ಮಕ್ಕಳೇ ಈ ನಾಡಿನ ಬಾವಿ ಪ್ರಜೆಗಳಾಗಿದ್ದು ಅವರ ಭವಿಷ್ಯ ಉಜ್ವಲ ಗೊಳ್ಳಲು ಅವರಿಗೆ ಉತ್ತಮ ಗುಣಮಟ್ಟದ ಶಿಕ್ಷಣದ ಜೊತೆಗೆ ಒಳ್ಳೆಯ ಸಂಸ್ಕಾರ ವನ್ನು ಕಲಿಸಿಕೊಡಬೇಕು ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ಹೇಳಿದರು.
ಮಂಗಳವಾರ ನಗರದ ಮಿಲ್ಲತ್ ಪಬ್ಲಿಕ್ ಶಾಲೆ ಆವರಣದಲ್ಲಿ ಅಯೋಜಿಸಿದ್ದ ಕೊಪ್ಪಳ ಉರ್ದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಮ್ಜದ್ ಪಟೇಲ್, ಶಿಕ್ಷಣದಿಂದ ಮಾತ್ರ ಸಮಗ್ರ ಅಭಿವೃದ್ಧಿ ಕಾಣಲು ಸಾಧ್ಯವಾಗಿದೆ. ನಾವು ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಡಬೇಕು, ಮಕ್ಕಳಲ್ಲಿ ದೇಶಾಭಿಮಾನ ಮೂಡಿಸುವಂತಹ ಕೆಲಸ ಮಾಡಬೇಕು ಅವರ ಭವಿಷ್ಯ ಉಜ್ವಲ ಗೊಳಿಸಬೇಕು ಇದರಲ್ಲಿ ಶಿಕ್ಷಕರ ಮತ್ತು ಪಾಲಕರ ಜವಾಬ್ದಾರಿ ಹೆಚ್ಚಾಗಿದೆ ಎಂದು ಹೇಳಿದರು.
ಪ್ರತಿಯೊಬ್ಬರು ತಮ್ಮ ಪಾಲಿನ ಜವಾಬ್ದಾರಿ ನಿಭಾಯಿಸಬೇಕು. ಈ ಭಾಗದ ಶೈಕ್ಷಣಿಕ ವಿಷಯಕ್ಕೆ ಸಂಬಂಧಿಸಿದಂತೆ ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯದ ಉರ್ದು ಶಾಲೆಯ ಸರ್ವತೋಮುಖ ಅಭಿವೃದ್ಧಿಗಾಗಿ ಹೆಚ್ಚಿನ ಮುತುವರ್ಜಿ ವಹಿಸಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ.ಹೆಚ್ ಅವರು ಉದ್ಘಾಟನೆ ನೆರವೇರಿಸಿ ಮಾತನಾಡಿ, ಪ್ರತಿಭಾ ಕಾರಂಜಿ ಮೂಲಕ ವಿದ್ಯಾರ್ಥಿಗಳಲ್ಲಿ ಅಡಗಿರುವ ಉತ್ತಮ ಪ್ರತಿಭೆಗಳನ್ನು ಬೆಳಕಿಗೆ ತರುವ ಪ್ರಯತ್ನ ಈ ಕಾರ್ಯಕ್ರಮದ ಮೂಲಕ ಮಾಡಲಾಗುವುದು ಎಂದು ಹೇಳಿದರು.
ಸಮಾರಂಭದಲ್ಲಿ ಶರಣಬಸವನಗೌಡ ಪಾಟೀಲ್, ಬೀರಪ್ಪ ಅಂಡಗಿ ಅಕ್ಷರದಾಸೋಹ ಅಧಿಕಾರಿ ಮಲ್ಲಿಕಾರ್ಜುನ, ಬಿ ಆರ್ ಸಿ ಸಂಯೋಜಕ ಮಹಿಬೂಬ್ ಹುಸೇನ್, ಸಿ ಆರ್ ಪಿ ಮೈನುದ್ದೀನ್ ಅತ್ತಾರ್, ನಫೀಸ ಪಠಾನ್ , ಹೋಳಿ ಬಸಯ್ಯ ವಾಹಿದಾ ಬೇಗಂ, ಕೆ ಎಮ್ ಅಲಿ, ಶರಣಪ್ಪ ರೆಡ್ಡಿ ಹನುಮರೆಡ್ಡಿ ರೇವಣಸಿದ್ದಪ್ಪ ಸೈಲಾನಿ ಬಾಷಾ, ಉರ್ದು ಸಾಹಿತಿ ಅನ್ವರ್ ಹುಸೇನ್,ಹಿರಿಯ ಸಮಾಜ ಸೇವಕ ಎಮ್ ಏ ಮಾಜಿದ ಸಿದ್ದಿಕ್ಕಿ ಅಂಜುಮನ್ ಅಧ್ಯಕ್ಷ ಎಂ ಡಿ ಆಸಿಫ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.







