ಕಾಂಗ್ರೆಸ್ ಮುಖಂಡರ ವಿರುದ್ಧ ಹೇಳಿಕೆ: ಇಕ್ಬಾಲ್ ಅನ್ಸಾರಿಗೆ ಶೋಕಾಸ್ ನೋಟಿಸ್

ಇಕ್ಬಾಲ್ ಅನ್ಸಾರಿ
ಗಂಗಾವತಿ: ಕಾಂಗ್ರೆಸ್ ಪಕ್ಷ ಹಾಗೂ ಜಿಲ್ಲೆಯ ಕೆಲವು ಮುಖಂಡರ ವಿರುದ್ಧ ಅನಾವಶ್ಯಕ ಟೀಕೆ-ಟಿಪ್ಪಣಿ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಶೋಕಾಸ್ ನೋಟಿಸ್ ಜಾರಿ ಮಾಡಿದೆ.
ಕೆಪಿಸಿಸಿ ಅಧ್ಯಕ್ಷರ ಸೂಚನೆಯ ಮೇರೆಗೆ ಪಕ್ಷದ ಉಪಾಧ್ಯಕ್ಷ ಎಂ. ನಾರಾಯಣಸ್ವಾಮಿ ಅವರು ಸೆ.1ರಂದು ನೋಟಿಸ್ ಜಾರಿ ಮಾಡಿದ್ದಾರೆ. ಅನ್ಸಾರಿ ಅವರ ಹೇಳಿಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರಗೊಂಡು ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟಾಗಿದೆ ಎಂದು ಸ್ಥಳೀಯ ಮುಖಂಡರು ದೂರು ನೀಡಿದ್ದಾರೆ ಎಂದು ನೋಟಿಸ್ನಲ್ಲಿ ಉಲ್ಲೇಖಿಸಲಾಗಿದೆ.
ನೋಟಿಸ್ ಜಾರಿಯಾದ ದಿನಾಂಕದಿಂದ ಏಳು ದಿನಗಳೊಳಗೆ ಉತ್ತರಿಸುವಂತೆ ಸೂಚಿಸಲಾಗಿದ್ದು, ತಪ್ಪಿದಲ್ಲಿ ಮುಂದಿನ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಲಾಗಿದೆ.
Next Story




