Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ ವಿಶ್ವವಿದ್ಯಾಲಯದ...

ಕೊಪ್ಪಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮೂಲ ಅಂಕಪಟ್ಟಿ ವಿತರಿಸಲು ಆಗ್ರಹ

ಎಸ್‌ಎಫ್‌ಐ ಜಿಲ್ಲಾ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ15 Oct 2026 10:12 PM IST
share
ಕೊಪ್ಪಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಮೂಲ ಅಂಕಪಟ್ಟಿ ವಿತರಿಸಲು ಆಗ್ರಹ

ಕೊಪ್ಪಳ: ಕೊಪ್ಪಳ ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ 2023–24ರಿಂದ 2025–26ನೇ ಶೈಕ್ಷಣಿಕ ಸಾಲಿನವರೆಗೆ ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಮೂಲ ಅಂಕಪಟ್ಟಿಗಳನ್ನು ತ್ವರಿತವಾಗಿ ವಿತರಿಸುವಂತೆ ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್‌ಎಫ್‌ಐ) ಜಿಲ್ಲಾ ಸಮಿತಿಯು ರಾಜ್ಯಪಾಲರಿಗೆ ಮನವಿ ಸಲ್ಲಿಸಿತು.

ತಹಶೀಲ್ದಾರ್ ಕಚೇರಿ ಮೂಲಕ ಸಲ್ಲಿಸಿದ ಮನವಿಯನ್ನು ಉಪತಹಶೀಲ್ದಾರ್ ಗವಿಸಿದ್ದಪ್ಪ ಮಣ್ಣೂರು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್‌ಎಫ್‌ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಯು., ಕೊಪ್ಪಳ ವಿಶ್ವವಿದ್ಯಾಲಯದ ವ್ಯಾಪ್ತಿಯ ವಿವಿಧ ಕಾಲೇಜುಗಳಲ್ಲಿ ಬಿ.ಎ., ಬಿ.ಎಸ್ಸಿ., ಬಿ.ಕಾಂ., ಬಿಬಿಎ ಮತ್ತು ಬಿಎಡ್ ಸೇರಿದಂತೆ ವಿವಿಧ ಪದವಿ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ಮೂಲ ಅಂಕಪಟ್ಟಿಗಳನ್ನು ವಿತರಿಸುವಲ್ಲಿ ವಿಳಂಬವಾಗುತ್ತಿದೆ ಎಂದು ತಿಳಿಸಿದರು.

ಅಂಕಪಟ್ಟಿಗಳ ವಿತರಣೆಯಲ್ಲಿನ ವಿಳಂಬದಿಂದ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಶಿಕ್ಷಣಕ್ಕೆ ಪ್ರವೇಶ ಪಡೆಯಲು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಹಾಗೂ ಸರ್ಕಾರಿ ಮತ್ತು ಖಾಸಗಿ ಉದ್ಯೋಗಗಳಿಗೆ ಅಗತ್ಯ ದಾಖಲೆಗಳನ್ನು ಒದಗಿಸಲು ತೊಂದರೆಯಾಗುತ್ತಿದೆ. ಆದ್ದರಿಂದ, ಬಾಕಿ ಇರುವ ಮೂಲ ಅಂಕಪಟ್ಟಿಗಳನ್ನು ತಕ್ಷಣ ವಿತರಿಸಬೇಕು ಎಂದು ಆಗ್ರಹಿಸಿದರು.

ಅಂಕಪಟ್ಟಿ ವಿತರಣೆಯಲ್ಲಿನ ವಿಳಂಬಕ್ಕೆ ಕಾರಣಗಳನ್ನು ಪರಿಶೀಲಿಸಿ ಹೊಣೆಗಾರಿಕೆ ನಿಗದಿಪಡಿಸಬೇಕು. ವಿತರಣೆಗೆ ನಿಗದಿತ ಕಾಲಮಿತಿ ಪ್ರಕಟಿಸುವುದರ ಜತೆಗೆ, ಮೂಲ ಅಂಕಪಟ್ಟಿಗಳು ದೊರೆಯದ ವಿದ್ಯಾರ್ಥಿಗಳಿಗೆ ತಾತ್ಕಾಲಿಕ ದಾಖಲೆಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.

ಮುಂದಿನ ದಿನಗಳಲ್ಲಿ ಇಂತಹ ವಿಳಂಬ ಮರುಕಳಿಸದಂತೆ ಶಾಶ್ವತ ವ್ಯವಸ್ಥೆ ರೂಪಿಸಬೇಕು. ರಾಜ್ಯಪಾಲರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಕುಲಸಚಿವರಿಗೂ ಮನವಿಯ ಪ್ರತಿಗಳನ್ನು ಸಲ್ಲಿಸಲಾಗಿದೆ.

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಹ ಕಾರ್ಯದರ್ಶಿಗಳಾದ ಹನುಮೇಶ್, ಆಕಾಶ್ ಹಾಗೂ ವಿದ್ಯಾರ್ಥಿಗಳಾದ ಸಾಂಕೇತ್, ಸಾಯಿ ಕೃಷ್ಣ, ರೋಹಿತ್ ಮತ್ತು ಪ್ರಶಾಂತ್ ಉಪಸ್ಥಿತರಿದ್ದರು.

Tags

Koppal Universitystudents
share
ವಾರ್ತಾಭಾರತಿ
ವಾರ್ತಾಭಾರತಿ
Next Story
X