Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ’ದುಬೈ ದೌಲತ್ತು’ ಬರೀ ಪ್ರವಾಸೀ...

’ದುಬೈ ದೌಲತ್ತು’ ಬರೀ ಪ್ರವಾಸೀ ಕಥನವಲ್ಲ-ಅನುಭವೀ ಕಥನವೂ ಕೂಡ: ಗವಿಸಿದ್ಧಪ್ಪ ಕೊಪ್ಪಳ

ವಾರ್ತಾಭಾರತಿವಾರ್ತಾಭಾರತಿ29 Jun 2025 6:00 PM IST
share
’ದುಬೈ ದೌಲತ್ತು’ ಬರೀ ಪ್ರವಾಸೀ ಕಥನವಲ್ಲ-ಅನುಭವೀ ಕಥನವೂ ಕೂಡ: ಗವಿಸಿದ್ಧಪ್ಪ ಕೊಪ್ಪಳ

ಕೊಪ್ಪಳ : ನಗರದ ಸ್ವಾಮಿ ವಿವೇಕಾನಂದ ಶಾಲೆಯ ಸಭಾಂಗಣದಲ್ಲಿ ಹಿರಿಯ ವಾಣಿಜ್ಯೋದ್ಯಮಿಗಳಾದ ಮಲ್ಲಿಕಾರ್ಜುನ ಬಳ್ಳೊಳ್ಳಿಯವರು ಕವಿ ಮಹೇಶ ಬಳ್ಳಾರಿಯವರ ’ದುಬೈ ದೌಲತ್ತು’ ಪ್ರವಾಸೀ ಕಥನವನ್ನು ಲೋಕಾರ್ಪಣೆ ಮಾಡಿದರು.

ನಿವೃತ್ತ ಮುಖ್ಯೋಪಾಧ್ಯಾಯರಾದ ಗವಿಸಿದ್ಧಪ್ಪ ಕೊಪ್ಪಳ ಕೃತಿ ಕುರಿತು ಮಾತನಾಡಿ ಅವರು, ದುಬೈ ಪ್ರವಾಸ ಕಥನ ಅನುಭವೀ ಕಥನವಾಗಿದೆ. ಕವಿಯೊಬ್ಬ ಕಂಡ ಅನುಭವಗಳನ್ನು ಚಿತ್ರಿಸಿದ ರೀತಿ ಓದುಗರ ಗಮನ ಸೆಳೆಯುತ್ತದೆ. ಇದೊಂದು ಮಾರ್ಗದರ್ಶಿ ಕೃತಿಯೂ ಕೂಡ. ಕವಿಯ ಸೂಕ್ಷ್ಮ ಅವಲೋಕನಗಳನ್ನು ಕೃತಿಯಲ್ಲಿ ಕಾಣಬಹುದು ಎಂದರು.

ನಿವೃತ್ತ ಎಲ್.ಐ.ಸಿ. ಆಫೀಸರ್ ವೆಂಕಟೇಶ ಶ್ಯಾನಭಾಗ್ ಮಾತನಾಡಿ, ಈ ಕೃತಿಯು ದುಬೈ ಹೋಗಬೇಕಾದವರಿಗೆ ಸೂಕ್ತ ತಿಳುವಳಿಕೆ ನೀಡಿದೆ. ಅದ್ಭುತಗಳ ನಾಡು ದುಬೈ ಮೀನು ಹಿಡಿಯುವವರ ದೇಶವಾಗಿತ್ತು. ಇದೀಗ ಇಡೀ ಜಗತ್ತು ತನ್ನ ಕಡೆ ಸೆಳೆಯುವಂತಹ ನೆಲವಾಗಿದೆ. ದುಬೈ ಐತಿಹ್ಯಗಳೆಲ್ಲ ಈ ಪುಸ್ತಕದಲ್ಲಿ ಅಡಕವಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಮಹೇಶ ಬಳ್ಳಾರಿಯವರ ’ನಾಡಕವಿತೆ’ ಯೂಟೂಬ್ ಚಾನೆಲ್‌ನ ’ಗಾಂಧೀಜಿ ಮತ್ತು ಕೊಪ್ಪಳ’ ವಿಡಿಯೋ ಕ್ಲಿಪ್ ನ್ನು ಶಿವಮೂರ್ತಿ ಹೊಸಮನಿ, ಆನಂದ ಗೊಂಡಬಾಳ, ಶರಣು ಉಂಕಿ ಉದ್ಘಾಟಿಸಿದರು.

ಕೃತಿಯ ಲೇಖಕರ ಮಹೇಶ ಬಳ್ಳಾರಿ ಪ್ರಾಸ್ತಾವಿಕ, ವೀರೇಶ ಕೊಪ್ಪಳ ನಿರ್ವಹಣೆ ನೆರವೇರಿಸಿದರು. ವೇದಿಕೆಯ ಮೇಲೆ ಪ್ರದೀಪ ಸೋಮಲಾಪುರ, ಡಿ.ಎಂ.ಬಡಿಗೇರ, ಡಾ.ಮಹಾಂತೇಶ ಮಲ್ಲನಗೌಡರ, ಗುರುರಾಜ ಹಲಗೇರಿ ಉಪಸ್ಥಿತರಿದ್ದರು.

ವಿಶ್ವನಾಥ ಬಳ್ಳೊಳ್ಳಿ, ಈರಣ್ಣ ಸಂಕ್ಲಾಪುರ, ಈಶ್ವರ ಹತ್ತಿ, ಮಲ್ಲಿಕಾರ್ಜುನ ಪಾಟೀಲ, ಅಮರದೀಪ, ಶಿ.ಕಾ.ಬಡಿಗೇರ, ವೀರಣ್ಣ ನಿಂಗೋಜಿ, ಮಹಾದೇವ ಸತ್ತಿಗೇರಿ, ಅರುಣಾ ನರೇಂದ್ರ, ಅಮರೇಶ ಅಂಗಡಿ, ಮಹಾಂತೇಶ ನೀಲಗಣಿ, ಶಿವಪ್ರಸಾದ ಹಾದಿಮನಿ ಮೊದಲಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X