ಸತೀಶ್ ಜಾರಕಿಹೊಳಿ ಬೆಳವಣಿಗೆ ಸಹಿಸದೆ ಬಿಜೆಪಿಯಿಂದ ED ದಾಳಿ : ಬಸವರಾಜ ಅಂದ್ರಾಳ

ಕನಕಗಿರಿ: ರಾಜ್ಯದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಳವಣಿಗೆಯನ್ನು ಸಹಿಸದ ಬಿಜೆಪಿಯವರು ಕೇಂದ್ರ ಸರ್ಕಾರದ ಮೂಲಕ ಇಡಿ ದಾಳಿ ಮಾಡಿಸಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ ಬಸವರಾಜ ಅಂದ್ರಾಳ ಆರೋಪಿಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಸತೀಶ್ ಜಾರಕಿಹೊಳಿ ಪ್ರಭಾವಿ ನಾಯಕರಾಗಿ ಹೊರಹೊಮ್ಮುತ್ತಿರುವುದನ್ನು ಸಹಿಸದ ಬಿಜೆಪಿ, ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಇದಕ್ಕೂ ಮುನ್ನವೇ ರಾಜ್ಯದಲ್ಲಿ ಪ್ರಭಾವಿ ಸಚಿವರೊಬ್ಬರು ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮಾಧ್ಯಮಗಳ ಮುಂದೆ ಭವಿಷ್ಯ ನುಡಿದಿದ್ದರು. ಅದರ ಬೆನ್ನಲ್ಲೇ ED ದಾಳಿ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದು ರಾಜಕೀಯ ಪ್ರೇರಿತ ದಾಳಿಯಾಗಿದ್ದು, ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಷಡ್ಯಂತ್ರದ ಭಾಗವಾಗಿದೆ. ಇಂತಹ ದಾಳಿಗಳಿಗೆ ನಾವು ಹೆದರುವುದಿಲ್ಲ, ಕಾನೂನು ಪ್ರಕಾರ ಎದುರಿಸುತ್ತೇವೆ ಎಂದು ಅಂದ್ರಾಳ ಸ್ಪಷ್ಟಪಡಿಸಿದ್ದಾರೆ.
Next Story




