ಗಂಗಾವತಿ | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಪ್ರಕರಣ : ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಗಂಗಾವತಿ: ನಗರ ಬಿಜೆಪಿ ಯುವ ಮೊರ್ಚಾ ಅಧ್ಯಕ್ಷ ಕೆ.ವೆಂಕಟೇಶನ ಹತ್ಯೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಧನಂಜಯ, ಭೀಮ, ಸಲಿಂ ಮತ್ತು ವಿಜಯ ಎಂಬವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ವೆಂಕಟೇಶನು ನಿನ್ನೆ ತಡರಾತ್ರಿ ಒಂದು ಗಂಟೆ ಸುಮಾರಿಗೆ ಸ್ನೇಹಿತರೊಂದಿಗೆ ಊಟ ಮುಗಿಸಿಕೊಂಡು ಬೈಕಿನಲ್ಲಿ ಗಂಗಾವತಿಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.
ಈ ಕುರಿತು ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





