ಗಂಗಾವತಿ | ಮನೆ ಕುಸಿದು ಎರಡು ವರ್ಷದ ಮಗು ಮೃತ್ಯು

ಗಂಗಾವತಿ: ನಿನ್ನೆ ರಾತ್ರಿಯಿಂದ ಧಾರಾಕಾರವಾಗಿ ಸುರಿದ ಮಳೆಯಿಂದ ಮನೆಯೊಂದು ಸಂಪೂರ್ಣವಾಗಿ ಕುಸಿದು ಬಿದ್ದ ಪರಿಣಾಮ ಎರಡು ವರ್ಷದ ಹೆಣ್ಣು ಮಗು ಮೃತಪಟ್ಟಿರುವ ಘಟನೆ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಮೃತ ಮಗು ಹೆಬ್ಬಾಳ ಗ್ರಾಮದ ಶರಣಪ್ಪ ಎಂಬವರ ಪುತ್ರಿ ಪ್ರಶಾಂತಿ(2) ಎಂದು ತಿಳಿದು ಬಂದಿದೆ.
ಮನೆಮಂದಿ ರಾತ್ರಿ ಮಲಗಿದ್ದ ಏಕಾಏಕಿ ಮನೆ ಗೋಡೆ ಸಹಿತ ಕುಸಿದು ಬಿದ್ದಿದೆ. ಈ ವೇಳೆ ಅವಶೇಷಗಳ ಅಡಿಯಲ್ಲಿ ಸಿಲುಕಿದ ಮಗು ಮೃತಪಟ್ಟಿದೆ. ಹಾಗೂ ಕುಟುಂಬಸ್ತರಿಗೆ ಗಾಯಗಳಾಗಿದ್ದು, ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ, ಗ್ರಾಮ ಪಂಚಾಯತ್ ಅಧ್ಯಕ್ಷ ವಿರೇಶ ಗೌಡ, ತಹಶೀಲ್ದಾರ್, ವಿಲೇಜ್ ಅಕೌಂಟೆಂಟ್ ಹಾಗೂ ಗ್ರಾಮಸ್ಥರು ಸ್ಥಳಕ್ಕೆ ಬೇಟಿ ನೀಡಿದ್ದಾರೆ.
ಮೃತ ಬಾಲಕಿಯ ಕುಟುಂಬಸ್ಥರಿಗೆ ಸೂಕ್ತ ಪರಿಹಾರ ನೀಡಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
Next Story







