Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಗ್ರಾಮ ಮಟ್ಟದಿಂದ ಕಾಂಗ್ರೆಸ್ ಸಂಘಟನೆ...

ಗ್ರಾಮ ಮಟ್ಟದಿಂದ ಕಾಂಗ್ರೆಸ್ ಸಂಘಟನೆ ಬಲಪಡಿಸಲು ಅಭಿಪ್ರಾಯ ಸಂಗ್ರಹ: ಎನ್.ಎಸ್.ಬೋಸರಾಜ್

ವಾರ್ತಾಭಾರತಿವಾರ್ತಾಭಾರತಿ1 Aug 2026 7:35 PM IST
share
ಗ್ರಾಮ ಮಟ್ಟದಿಂದ ಕಾಂಗ್ರೆಸ್ ಸಂಘಟನೆ ಬಲಪಡಿಸಲು ಅಭಿಪ್ರಾಯ ಸಂಗ್ರಹ: ಎನ್.ಎಸ್.ಬೋಸರಾಜ್

ಕುಕನೂರು: ಕಾಂಗ್ರೆಸ್ ಸಂಘಟನೆಯನ್ನು ಗ್ರಾಮ ಮಟ್ಟದಿಂದ ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ಎಐಸಿಸಿ ರಾಜ್ಯಾದ್ಯಂತ ಅಭಿಪ್ರಾಯ ಸಂಗ್ರಹ ನಡೆಸುತ್ತಿದ್ದು, ಕಾರ್ಯಕರ್ತರ ಅಭಿಪ್ರಾಯದ ಆಧಾರದ ಮೇಲೆ ಸಂಘಟನಾ ಪುನರ್‌ರಚನೆ ಕೈಗೊಳ್ಳಲಾಗುವುದು ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ್ ಹೇಳಿದರು.

ಪಟ್ಟಣದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಐಸಿಸಿ ವೀಕ್ಷಕ ವಿವೇಕ್ ಬನ್ಸಲ್ ನೇತೃತ್ವದ ತಂಡ ಕಾರ್ಯಕರ್ತರು, ಮುಖಂಡರು, ಮಾಧ್ಯಮ ಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹಿಸುತ್ತಿದೆ. ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ಗ್ರಾಮ ಪಂಚಾಯಿತಿ, ಬ್ಲಾಕ್ ಕಾಂಗ್ರೆಸ್ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಗಳನ್ನು ಮತ್ತಷ್ಟು ಬಲಪಡಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಯಾವುದೇ ಒಬ್ಬ ವ್ಯಕ್ತಿಯನ್ನು ಅವಲಂಬಿಸದ ಸಂಘಟನೆಯನ್ನು ರೂಪಿಸುವ ಉದ್ದೇಶದಿಂದ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುತ್ತಿದೆ. ಸಂಗ್ರಹವಾಗುವ ಅಭಿಪ್ರಾಯಗಳ ಆಧಾರದ ಮೇಲೆ ಒಂದರಿಂದ ಆರು ಹೆಸರುಗಳನ್ನು ಎಐಸಿಸಿಗೆ ಸಲ್ಲಿಸಲಾಗುವುದು. ಅದರ ಆಧಾರದ ಮೇಲೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಮುಂದುವರಿಕೆ ಅಥವಾ ಬದಲಾವಣೆ ಸೇರಿದಂತೆ ಸಂಘಟನೆಗೆ ಸಂಬಂಧಿಸಿದ ಅಂತಿಮ ತೀರ್ಮಾನವನ್ನು ಹೈಕಮಾಂಡ್ ಕೈಗೊಳ್ಳಲಿದೆ ಎಂದು ಹೇಳಿದರು.

ರಾಹುಲ್ ಗಾಂಧಿ ಅವರ ಆಶಯದಂತೆ 50 ರಿಂದ 60 ವರ್ಷದೊಳಗಿನ ಯುವ ನಾಯಕರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಕುರಿತು ಪಕ್ಷದಲ್ಲಿ ಚರ್ಚೆ ನಡೆಯುತ್ತಿದೆ ಎಂದರು.

ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಅವರು, ಸಂಪುಟ ವಿಸ್ತರಣೆ ಅಂತಿಮ ಹಂತದಲ್ಲಿದ್ದು, ಸಚಿವರ ಆಯ್ಕೆಯಲ್ಲಿ ಜಾತಿ, ಉಪಜಾತಿ, ಮಹಿಳೆಯರು, ಯುವ ನಾಯಕರು ಹಾಗೂ ಪ್ರಾದೇಶಿಕ ಸಮತೋಲನಕ್ಕೆ ಆದ್ಯತೆ ನೀಡಲಾಗುವುದು. ಅಂತಿಮ ಪಟ್ಟಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅನುಮೋದನೆ ನೀಡಲಿದ್ದಾರೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹೊಸ ಪೀಳಿಗೆಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಅವರ ಅನುಭವ ಹಾಗೂ ನಾಯಕತ್ವ ಕಾಂಗ್ರೆಸ್‌ಗೆ ಮುಂದೆಯೂ ಅಗತ್ಯವಾಗಿದ್ದು, ಪಕ್ಷದ ಮಾರ್ಗದರ್ಶನದಲ್ಲಿ ಅವರ ಪಾತ್ರ ಮುಂದುವರಿಯಲಿದೆ ಎಂದರು.

ತಮ್ಮ ರಾಜಕೀಯ ಭವಿಷ್ಯದ ಕುರಿತು ಮಾತನಾಡಿದ ಬೋಸರಾಜ್, ವಿಧಾನ ಪರಿಷತ್ ಸದಸ್ಯರಾಗಿ ಇನ್ನೂ ನಾಲ್ಕು ವರ್ಷಗಳ ಅವಧಿ ಉಳಿದಿದ್ದು, ಚುನಾವಣೆಗೆ ಸ್ಪರ್ಧಿಸುವ ಉದ್ದೇಶ ಇಲ್ಲ. ಪಕ್ಷ ನೀಡುವ ಯಾವುದೇ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುವುದಾಗಿ ಹೇಳಿದರು.

ಕೊಪ್ಪಳ ಜಿಲ್ಲೆಯಲ್ಲಿ ಬರ ಘೋಷಣೆ ಕುರಿತು ಬಿಜೆಪಿ ಮಾಡುತ್ತಿರುವ ಆರೋಪವನ್ನು ತಳ್ಳಿಹಾಕಿದ ಅವರು, ಬರ ಘೋಷಣೆ ಕೇಂದ್ರ ಸರ್ಕಾರದ ಮಾರ್ಗಸೂಚಿ ಹಾಗೂ ತಾಂತ್ರಿಕ ಮಾನದಂಡಗಳ ಪ್ರಕಾರವೇ ನಡೆಯುವ ಪ್ರಕ್ರಿಯೆಯಾಗಿದೆ. ಸರ್ಕಾರ ಮಳೆ ಪ್ರಮಾಣ ಹಾಗೂ ಹವಾಮಾನ ವರದಿಗಳ ಆಧಾರದ ಮೇಲೆ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಮರೇಗೌಡ ಬಯ್ಯಾಪುರ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಬರ ಪರಿಶೀಲನಾ ಸಭೆಗೆ ಕೆಲ ನಾಯಕರು ಗೈರಾಗಿರುವುದನ್ನು ರಾಜಕೀಯ ಭಿನ್ನಾಭಿಪ್ರಾಯ ಎಂದು ಬಿಂಬಿಸುವುದು ಸರಿಯಲ್ಲ ಎಂದರು.

ಮಾಜಿ ಸಚಿವ ಶಿವರಾಜ್ ತಂಗಡಗಿ ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ಕಾರಣ ಸಭೆಗೆ ಹಾಜರಾಗಿರಲಿಲ್ಲ. ಶಾಸಕ ರಾಘವೇಂದ್ರ ಹಿಟ್ನಾಳ್ ಪಕ್ಷದ ಹಾಗೂ ವೈಯಕ್ತಿಕ ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದರಿಂದ ಸಭೆಗೆ ಬರಲು ಸಾಧ್ಯವಾಗಲಿಲ್ಲ. ಜಿಲ್ಲಾ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಪಕ್ಷ ಸಂಘಟಿತವಾಗಿ ಕಾರ್ಯನಿರ್ವಹಿಸುತ್ತಿದ್ದು, ಅಪಪ್ರಚಾರಗಳಿಗೆ ಕಾರ್ಯಕರ್ತರು ಕಿವಿಗೊಡಬಾರದು ಎಂದು ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

N.S.BosarajuCongress
share
ವಾರ್ತಾಭಾರತಿ
ವಾರ್ತಾಭಾರತಿ
Next Story
X