Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಎಸ್ಟಿ ಪಟ್ಟಿಗೆ ಅನ್ಯ ಸಮುದಾಯಗಳ ಸೇರ್ಪಡೆ...

ಎಸ್ಟಿ ಪಟ್ಟಿಗೆ ಅನ್ಯ ಸಮುದಾಯಗಳ ಸೇರ್ಪಡೆ : ವಾಲ್ಮೀಕಿ ನಾಯಕ ಸಮಾಜದಿಂದ ಖಂಡನೆ

ವಾರ್ತಾಭಾರತಿವಾರ್ತಾಭಾರತಿ25 Sept 2025 8:11 PM IST
share
ಎಸ್ಟಿ ಪಟ್ಟಿಗೆ ಅನ್ಯ ಸಮುದಾಯಗಳ ಸೇರ್ಪಡೆ : ವಾಲ್ಮೀಕಿ ನಾಯಕ ಸಮಾಜದಿಂದ ಖಂಡನೆ

ಕಾರಟಗಿ : ಪರಿಶಿಷ್ಟ ಪಂಗಡಕ್ಕೆ ಅನ್ಯ ಸಮುದಾಯದವರ ಸೇರ್ಪಡೆಗೆ ವಿರೋಧ ವ್ಯಕ್ತಪಡಿ ಕಾರಟಗಿ ತಾಲೂಕು ವಾಲ್ಮೀಕಿ ಮಹಾಸಭಾ ಗುರುವಾರ ನಗರದ ತಹಶೀಲ್ದಾರರ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಿತು.

ಪ್ರತಿಭಟನಾ ಮೆರವಣಿಗೆ ಪಟ್ಟಣದ ಪುರಸಭೆ ಕಚೇರಿ ಹೊರಗೆ ಆರಂಭವಾಗಿ, ರಾಜ್ಯ ಹೆದ್ದಾರಿ ಮತ್ತು ಕನಕದಾಸ ವೃತ್ತ ಮುಖಾಂತರ ತಹಶೀಲ್ದಾರರ ಕಚೇರಿ ತಲುಪಿತು.

ಸಮಾಜದ ಮುಖಂಡ ಬಿ. ಶಿವರೆಡ್ಡಿ ನಾಯಕ ಮಾತನಾಡಿ, ನಮ್ಮ ವಾಲ್ಮೀಕಿ ಸಮಾಜ ಈಗಾಗಲೇ ಶೇ.7ರಷ್ಟು ಮೀಸಲಾತಿಯನ್ನು ವರ್ಷಗಳ ಹೋರಾಟದ ಮೂಲಕ ಪಡೆಯಲು ಯಶಸ್ವಿಯಾಗಿದೆ. ಪರಿಶಿಷ್ಟ ಪಂಗಡಕ್ಕೆ ಅನ್ಯ ಸಮುದಾಯ ಸೇರಿಸಿದರೆ ನಮ್ಮ ಸಮುದಾಯದ ಹಕ್ಕು ಮೀಸಲಾತಿ ಹಾಳಾಗುತ್ತದೆ. ಈ ಕುರಿತು ಅಗತ್ಯವಿದ್ದರೆ ಹೋರಾಟದ ಮೂಲಕ ಹಕ್ಕುಗಳನ್ನು ರಕ್ಷಿಸುತ್ತೇವೆ ಎಂದರು.

ನಮ್ಮ ಮೀಸಲಾತಿಯನ್ನು ಅನ್ಯ ಸಮುದಾಯಕ್ಕೆ ನೀಡದಂತೆ ತಕ್ಷಣವೇ ಸೇರ್ಪಡೆ ಕಾರ್ಯಕ್ಕೆ ಅಂತ್ಯ ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಘೋರ ಪರಿಣಾಮಗಳು ಬೀರಬಹುದು ಎಂದು ಮುಖಂಡ ನಾಗರಾಜ ಬಿಲ್ಗಾರ್ ಎಚ್ಚರಿಸಿದರು.

ಪ್ರಧಾನ ಕಾರ್ಯದರ್ಶಿ ಸೋಮನಾಥ ಹೆಬ್ಬಡದ ವಕೀಲರು ಮನವಿ ಪತ್ರ ಓದಿ ಮಾತನಾಡಿದರು. ಕೊನೆಯಲ್ಲಿ ಶಿರಸ್ತೇದಾರ ಉಮಾಮಹೇಶ್ವರರ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ತಾಲೂಕು ಅಧ್ಯಕ್ಷ ಬೂದಿ ಗಿರಿಯಪ್ಪ, ಗೌರವಾಧ್ಯಕ್ಷ ನಾಗನಗೌಡ, ಮಾಜಿ ಅಧ್ಯಕ್ಷ ಗದ್ದೆಪ್ಪ ನಾಯಕ, ಮತ್ತು ಪಾಲಿಕೆ ಸದಸ್ಯರು ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಸಾವಿರಕ್ಕೂ ಹೆಚ್ಚು ವಾಲ್ಮೀಕಿ ನಾಯಕ ಸಮುದಾಯದ ಮುಖಂಡರು ಭಾಗವಹಿಸಿದ್ದರು.

Tags

Valmiki
share
ವಾರ್ತಾಭಾರತಿ
ವಾರ್ತಾಭಾರತಿ
Next Story
X