Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕಾಂತರಾಜು ವರದಿ ಬಗ್ಗೆ ವಾಸ್ತವ ತಿಳಿಯದೆ...

ಕಾಂತರಾಜು ವರದಿ ಬಗ್ಗೆ ವಾಸ್ತವ ತಿಳಿಯದೆ ಮಾತನಾಡುವುದು ಸರಿಯಲ್ಲ: ಸಚಿವ ಶಿವರಾಜ ಎಸ್‌.ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ13 April 2025 7:20 PM IST
share
ಕಾಂತರಾಜು ವರದಿ ಬಗ್ಗೆ ವಾಸ್ತವ ತಿಳಿಯದೆ ಮಾತನಾಡುವುದು ಸರಿಯಲ್ಲ: ಸಚಿವ ಶಿವರಾಜ ಎಸ್‌.ತಂಗಡಗಿ

ಕೊಪ್ಪಳ: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್ ಕಾಂತರಾಜು ನೇತೃತ್ವದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವರದಿ ಬಗ್ಗೆ ವಾಸ್ತವ ತಿಳಿಯದೆ ಮಾತನಾಡುವುದು ಸರಿಯಲ್ಲ. ಎಲ್ಲಾ ಸಚಿವರಿಗೂ ವರದಿ ಪ್ರತಿ ಕಳುಹಿಸಲಾಗುತ್ತಿದೆ. ವರದಿ ಓದಿ ತಿಳಿದುಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ಎಸ್‌.ತಂಗಡಗಿ ಹೇಳಿದ್ದಾರೆ.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣತಿ ವಾಸ್ತವ ಸತ್ಯ ಯಾರಿಗೂ ಗೊತ್ತಿಲ್ಲ. ಈಗಾಗಲೇ 26 ಮಂತ್ರಿಗಳಿಗೆ ವರದಿ ಪ್ರತಿ ಕಳುಹಿಸಲಾಗಿದೆ. ಎಲ್ಲಾ ಮಂತ್ರಿಗಳಿಗೂ ಪ್ರತಿ ಕಳುಹಿಸಲಾಗುವುದು. ಜಾತಿ ಲೆಕ್ಕ ಹಾಕಲು ಗಣತಿ ಮಾಡಿಲ್ಲ. ಎಲ್ಲ ಸಮುದಾಯಗಳಲ್ಲಿ ವಿದ್ಯಾವಂತರು, ಅವಿದ್ಯಾವಂತರು ಎಷ್ಟಿದ್ದಾರೆ? ಆಸ್ತಿ ಎಷ್ಟಿದೆ? ಬಡವರು ಎಷ್ಟಿದ್ದಾರೆ? ಉದ್ಯೋಗದಲ್ಲಿ ಎಷ್ಟು ಮಂದಿ ಇದ್ದಾರೆ ಇತ್ಯಾದಿ ಮಾಹಿತಿ ಸಂಗ್ರಹಿಸಲು ಈ ಜಾತಿ ಗಣತಿ ಮಾಡಿಸಲಾಗಿದೆ ಎಂದು ತಿಳಿಸಿದರು.

ಇಲ್ಲಿ ನಮಗೆ ಜಾತಿ ಲೆಕ್ಕವಲ್ಲ. ರಾಜ್ಯದ ಪ್ರತಿ ವಿಧಾನಸಭಾವಾರು ಸಮುದಾಯಗಳ ಸ್ಥಿತಿಗತಿ ಕುರಿತ ಮಾಹಿತಿ ಒಳಗೊಂಡ 50 ಸಂಪುಟಗಳ ವರದಿ ಇದೆ. ಈ ವರದಿ ಆಧರಿಸಿ ಎಲ್ಲ ಸಮುದಾಯಗಳ ಬಡವರನ್ನು ಮೇಲೆತ್ತಲು ಯೋಜನೆ ರೂಪಿಸುವುದು ಮುಖ್ಯಮಂತ್ರಿಗಳ ಚಿಂತನೆಯಾಗಿದೆ ಎಂದರು.

ಮಾಧ್ಯಮಗಳಲ್ಲಿ ತೋರಿಸುತ್ತಿರುವುದು ತಪ್ಪು ಮಾಹಿತಿ:

ವರದಿಯನ್ನು ಓದದೆ ಮಾತನಾಡುವುದು ಸರಿಯಲ್ಲ. ವರದಿ ಓದಿ ಕೂಲಂಕಷವಾಗಿ ಚರ್ಚೆ ಮಾಡಲಿ. ಅದಕ್ಕಾಗಿ ಮುಖ್ಯಮಂತ್ರಿ ಅವರು ಒಂದು ವಾರ ಸಮಯ ನೀಡಿದ್ದಾರೆ. ಏ.17ರ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ. ಮಾಧ್ಯಮಗಳಲ್ಲಿ ತೋರಿಸುತ್ತಿರುವ ಅಂಕಿ-ಅಂಶ ಸರಿಯಿಲ್ಲ. ಈ ವಿಶೇಷ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗಳಿಗೂ ವರದಿ ಪ್ರತಿ ನೀಡುವುದಾಗಿ ಸಚಿವರು ತಿಳಿಸಿದರು.

ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ಯಾರು ಏನು ಮಾಡಿದ್ದಾರೆ. ಸಿಐಡಿ ಯಾರನ್ನೆಲ್ಲಾ ಬಂಧಿಸಿದೆ. ಬಿಜೆಪಿಗರು ಯಾರು ಭಾಗಿಯಾಗಿದ್ದಾರೆ ಎಲ್ಲದ ಬಗ್ಗೆ ಶೀಘ್ರದಲ್ಲೇ ಮಾಹಿತಿ ಒದಗಿಸುತ್ತೇನೆ. ಈ ಸಂಬಂಧ ಸಂಪೂರ್ಣ ಮಾಹಿತಿ ಪಡೆದು ಬಳಿಕ ಪ್ರತಿಕ್ರಿಯಿಸುವುದಾಗಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Tags

Shivaraj ThangadgiKantaraju
share
ವಾರ್ತಾಭಾರತಿ
ವಾರ್ತಾಭಾರತಿ
Next Story
X