Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಯಾವುದೇ ಧಾರ್ಮಿಕ ಮಂದಿರದಲ್ಲಿ ಬಾಲ್ಯ...

ಯಾವುದೇ ಧಾರ್ಮಿಕ ಮಂದಿರದಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ : ಸುರೇಶ ಇಟ್ನಾಳ

ವಾರ್ತಾಭಾರತಿವಾರ್ತಾಭಾರತಿ11 Nov 2025 11:49 PM IST
share
ಯಾವುದೇ ಧಾರ್ಮಿಕ ಮಂದಿರದಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯ : ಸುರೇಶ ಇಟ್ನಾಳ

ಕೊಪ್ಪಳ, ನ.11: ಜಿಲ್ಲೆಯಲ್ಲಿ ಹಿಂದೂ, ಮುಸ್ಲಿಮ್ ಮತ್ತು ಕ್ರೈಸ್ತ ಸೇರಿದಂತೆ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ ಆಗಿರುತ್ತದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ ಬಿ.ಇಟ್ನಾಳ್‌ ಹೇಳಿದ್ದಾರೆ.

ಮಂಗಳವಾರ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಿದ್ದ ‘‘ಬಾಲ್ಯವಿವಾಹ ನಿಷೇಧ ಕಾಯ್ದೆ-2006, ಕರ್ನಾಟಕ ತಿದ್ದುಪಡಿ-2016 ಹಾಗೂ ಹದಿಹರೆಯದ ಮಕ್ಕಳ ಸಬಲೀಕರಣ ಕುರಿತು ವಿವಿಧ ಭಾಗೀದಾರರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ಬಾಲ್ಯವಿವಾಹವನ್ನು ಮಾಡಿಸಿದ ಪಾಸ್ಟರ್(ಪಾದ್ರಿ)ರವರಿಗೆ ಶಿಕ್ಷೆಯಾಗಿದೆ. ಕಲ್ಯಾಣ ಮಂಟಪಗಳ ಮಾಲಕರು, ಸಾಮೂಹಿಕ ವಿವಾಹ ಆಯೋಜಕರ ವಿರುದ್ಧವೂ ಸಹ ಪ್ರಕರಣಗಳು ದಾಖಲಾಗಿವೆ. ಹಾಗಾಗಿ ತಾವುಗಳು ಬಾಲ್ಯವಿವಾಹದಲ್ಲಿ ಭಾಗವಹಿಸಬೇಡಿ ಮತ್ತು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯವಿವಾಹಗಳಿಗೆ ಅವಕಾಶ ನೀಡಬೇಡಿ ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಪ್ರಾದೇಶಿಕ ಸಂಯೋಜಕ ಡಾ.ಕೆ. ರಾಘವೇಂದ್ರ ಭಟ್ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆ-2006 ಕರ್ನಾಟಕ ತಿದ್ದುಪಡಿ-2016ರ ಕುರಿತು ಹಾಗೂ ಯುನಿಸೆಫ್-ಮಕ್ಕಳ ರಕ್ಷಣಾ ಯೋಜನೆಯ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕ ಹರೀಶ ಜೋಗಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಯ ಕುರಿತು ತರಬೇತಿಯನ್ನು ನೀಡಿದರು.

ಮಕ್ಕಳ ಬಾಲ್ಯವು ಅತ್ಯಮೂಲ್ಯವಾದದ್ದು, 18 ವರ್ಷದೊಳಗಿನ ಮಕ್ಕಳಲ್ಲಿ ದೈಹಿಕ, ಮಾನಸಿಕ, ಸಾಮಾಜಿಕ, ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಯು ತೀವ್ರವಾಗಿರುತ್ತದೆ. ಈ ಸಂದರ್ಭದಲ್ಲಿ ಮಕ್ಕಳು ಅವರ ಹಕ್ಕುಗಳನ್ನು ಅನುಭವಿಸುವಂತಹ ವಾತಾವರಣ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿರುತ್ತದೆ. ಜಾರಿಯಲ್ಲಿರುವ ಕಾನೂನಿನ್ವಯ ಅಪ್ರಾಪ್ತ ವಯಸ್ಸಿನ ಪತ್ನಿಯೊಂದಿಗಿನ ಲೈಂಗಿಕ ಸಂಪರ್ಕವು ಸಹ ಅತ್ಯಾಚಾರವಾಗಿರುತ್ತದೆ. ಆದ್ದರಿಂದ ಬಾಲ್ಯ ವಿವಾಹಗಳಲ್ಲಿ ಭಾಗವಹಿಸಬೇಡಿ, ಬಾಲ್ಯವಿವಾಹಗಳಿಗೆ ಅವಕಾಶವನ್ನು ನೀಡಬೇಡಿ ಮತ್ತು ಕಾಯ್ದೆಯ ಕುರಿತು ಸಮುದಾಯದಲ್ಲಿ ಜಾಗೃತಿ ಮೂಡಿಸಿ.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ದರಗದ, ಕೊಪ್ಪಳ ಡಿವೈ.ಎಸ್‌ಪಿ ಮುತ್ತಣ್ಣ ಸವರಗೋಳ, ಕೊಪ್ಪಳ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪಿ.ವೈ. ಶೆಟ್ಟೆಪ್ಪನವರ್, ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಮಹಾಂತಸ್ವಾಮಿ ಪೂಜಾರ, ಬೆಳಗಾವಿ ಸ್ಪಂದನ ಸೊಸೈಟಿ ಕಾರ್ಯದರ್ಶಿ ಸುಶೀಲಾ ವಿ. ಮತ್ತು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮೂಹಿಕ ವಿವಾಹ ಆಯೋಜಕರು, ಪೂಜಾರಿಗಳು, ಮೌಲ್ವಿಗಳು, ಪಾದ್ರಿಗಳು, ಡೇಕೊರೇರ್ಸ್‌, ಛಾಯಾಚಿತ್ರಗಾರರು, ಮುದ್ರಣಕಾರರು, ಕಲ್ಯಾಣ ಮಂಟಪಗಳ ಮಾಲಕರ ಹಾಗೂ ವಿವಿಧ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X