Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kanakagiri | ಅಮೃತ 2.0 ಅನುದಾನ ಕೇಂದ್ರ...

Kanakagiri | ಅಮೃತ 2.0 ಅನುದಾನ ಕೇಂದ್ರ ಸರ್ಕಾರದ್ದು: ತಂಗಡಗಿ ವಿರುದ್ಧ ದಡೇಸೂಗೂರು ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ29 Jun 2026 5:50 PM IST
share
Kanakagiri | ಅಮೃತ 2.0 ಅನುದಾನ ಕೇಂದ್ರ ಸರ್ಕಾರದ್ದು: ತಂಗಡಗಿ ವಿರುದ್ಧ ದಡೇಸೂಗೂರು ವಾಗ್ದಾಳಿ

ಕನಕಗಿರಿ : ಅಮೃತ 2.0 ಯೋಜನೆಯಡಿ ದೊರೆತಿರುವ 202 ಕೋಟಿ ರೂ. ಅನುದಾನ ಕೇಂದ್ರ ಸರ್ಕಾರದದ್ದಾಗಿದ್ದು, ಅದು ರಾಜ್ಯ ಸರ್ಕಾರದ ಸಾಧನೆಯಲ್ಲ ಎಂದು ಮಾಜಿ ಶಾಸಕ ಬಸವರಾಜ ದಡೇಸೂಗೂರು ಮಾಜಿ ಸಚಿವ ಶಿವರಾಜ ತಂಗಡಗಿ ವಿರುದ್ಧ ವಾಗ್ದಾಳಿ ನಡೆಸಿದರು.

ಪಟ್ಟಣದ ನವಲಿ ರಸ್ತೆಯಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವರಾಜ ತಂಗಡಗಿ ಅವರು ‘ನಾನು 400 ಕೋಟಿ ರೂ. ತಂದು ರಸ್ತೆ ಅಭಿವೃದ್ಧಿ ಮಾಡಿದ್ದೇನೆ’ ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ ಕೆಲವು ಗ್ರಾಮಗಳಲ್ಲಿ ನಿರ್ಮಿಸಿರುವ ಡಾಂಬರ್ ಹಾಗೂ ಸಿಸಿ ರಸ್ತೆಗಳು ಕಳಪೆ ಕಾಮಗಾರಿಯಿಂದ ಕೂಡಿವೆ ಎಂದು ಆರೋಪಿಸಿದರು.

ಕೆಲ ಗ್ರಾಮಗಳಲ್ಲಿ ನಿರ್ಮಾಣಗೊಂಡಿರುವ ರಸ್ತೆಗಳ ಗುಣಮಟ್ಟ ಸಮರ್ಪಕವಾಗಿಲ್ಲ. ಈ ಹಿನ್ನೆಲೆಯಲ್ಲಿ ಅವುಗಳನ್ನು ಪುನಃ ನಿರ್ಮಿಸುವಂತೆ ತಾವೇ ಸೂಚನೆ ನೀಡಿದ್ದಾಗಿ ತಿಳಿಸಿದರು.

ಮುಷ್ಟೂರು, ಬೇವಿನೂರು ಹಾಗೂ ಹಣವಾಳ ಗ್ರಾಮಗಳಿಗೆ 110 ಕೆವಿ ವಿದ್ಯುತ್ ಉಪಕೇಂದ್ರ ಮಂಜೂರು ಮಾಡಿಸಿದ್ದು ತಾವು ಎಂದು ಹೇಳಿದ ಅವರು, ಗುಬ್ಬಿಗೆ ಕುಡಿಯುವ ನೀರು ತರುವ ಕೆಲಸವನ್ನು ತಂಗಡಗಿ ಮಾಡಿರಬಹುದು. ಆದರೆ ರೈತರ ಬದುಕಿಗೆ ಅನುಕೂಲವಾಗುವ ನೀರಾವರಿ ಯೋಜನೆಗಳನ್ನು ತಾವು ಜಾರಿಗೆ ತಂದಿದ್ದರಿಂದ ರೈತರು ನೆಮ್ಮದಿಯಿಂದ ಜೀವನ ಸಾಗಿಸುತ್ತಿದ್ದಾರೆ ಎಂದು ಪ್ರತಿಪಾದಿಸಿದರು.

ಸೋಲು-ಗೆಲುವು ರಾಜಕೀಯದಲ್ಲಿ ಸಾಮಾನ್ಯ. 2028ರ ಚುನಾವಣೆಯಲ್ಲಿ ಜನರು ಮತ್ತೊಮ್ಮೆ ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ ಅವರು, ಶಿವರಾಜ ತಂಗಡಗಿ ವಿರುದ್ಧ ತಾವು ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿಯನ್ನು ಬಹಿರಂಗವಾಗಿ ನೀಡಲು ಸಿದ್ಧವಿದ್ದು, ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.

ಮುಂಬರುವ ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಯಲ್ಲಿ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಬಿಜಿಪಿ ಜಿಲ್ಲಾ ಉಪಾಧ್ಯಕ್ಷ ಮನೋಹರ ಗೌಡ ಹೆರೂರು, ಮಂಡಲ ಅಧ್ಯಕ್ಷ ಸಣ್ಣಕನಕಪ್ಪ, ಉಪಾಧ್ಯಕ್ಷ ನಿಂಗಪ್ಪ ನಾಯಕ, ಪ್ರಮುಖರಾದ ಪ್ರಕಾಶ ಹಾದಿಮನಿ, ನಾಗರಾಜ ಬಿಲ್ದಾರ್, ಶರತಚಂದ್ರ ನಾಯಕ, ಗ್ಯಾನಪ್ಪ ಖ್ಯಾಡೇದ, ರಂಗಪ್ಪ ಕೊರಟಗಿ, ಶೇಷಪ್ಪ ಪೂಜಾರ, ಸುರೇಶ ಗುಗ್ಗಳಶೇಟ್ರ, ನರಸಪ್ಪ ನಾಯಕ, ಯಮನೂರು ಇದ್ಲಾಪೂರ, ಹುಲಿಗೇಮ್ಮ ಇತರರು ಇದ್ದರು.

Tags

Kanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X