Kanakagiri | ಕಾರು ಬ್ರಿಡ್ಜ್ಗೆ ಢಿಕ್ಕಿ: ಸಾಫ್ಟ್ವೇರ್ ಎಂಜಿನಿಯರ್ ಸ್ಥಳದಲ್ಲೇ ಮೃತ್ಯು

ಕನಕಗಿರಿ: ಗಂಗಾವತಿ-ಲಿಂಗಸುಗೂರು ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಕಾರು ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಸಾಫ್ಟ್ವೇರ್ ಎಂಜಿನಿಯರ್ ಅವಿನಾಶ್ ಆರ್. (39) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಗಳೂರು ಮೂಲದ ಅವಿನಾಶ್ ಅವರು ಹೈದರಾಬಾದ್ನ ಎಲ್ ಆ್ಯಂಡ್ ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕನಕಗಿರಿಯಿಂದ ಗಂಗಾವತಿ ಕಡೆಗೆ ಬ್ರೆಝಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಬಸವೇಶ್ವರ ವೃತ್ತದ ಬಳಿ ಕಾರು ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಅವಿನಾಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಶಿವರಾಜ ಇಂಗಳೆ ತಿಳಿಸಿದ್ದಾರೆ.
Next Story




