ಕನಕಗಿರಿ | ಮರಕ್ಕೆ ಕಾರು ಢಿಕ್ಕಿ : ಮಹಿಳೆ ಮೃತ್ಯು

ಕನಕಗಿರಿ: ಕಾರು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊರ್ವರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಸೂಳೇಕಲ್–ಅರಳಹಳ್ಳಿ ರಸ್ತೆಯ ಮಧ್ಯೆ ಬುಧವಾರ ನಡೆದಿದೆ.
ಮೃತ ಮಹಿಳೆಯನ್ನು ವತ್ಸಲಾ (39) ಎಂದು ಗುರುತಿಸಲಾಗಿದೆ.
ರಾಯಚೂರು ಜಿಲ್ಲೆಯ ದೇವದುರ್ಗಾದಿಂದ ಲಿಂಗಸೂರು–ಗಂಗಾವತಿ ಮಾರ್ಗದ ಮೂಲಕ ಗಂಗಾವತಿಗೆ ತೆರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ವತ್ಸಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾರು ಚಾಲಕ ತಿರುಮಲೇಶ ಹಾಗೂ ಮೃತಳ ಪುತ್ರಿ ಅನುಜ್ಞಾ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯರು ರಕ್ಷಿಸಿ ಗಂಗಾವತಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಈ ಕುರಿತು ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕುರಿತು ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story





