ಕನಕಗಿರಿ | ಹೊಸಗುಡ್ಡ ರಸ್ತೆಯಲ್ಲಿದ್ದ ಉರುಳಿದ ಮರ ತೆರವು

ಕನಕಗಿರಿ: ಹುಲಿಹೈದರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಗುಡ್ಡ ಗ್ರಾಮದ ರಸ್ತೆಯಲ್ಲಿ ಮಳೆಯಿಂದ ಉರುಳಿದ್ದ ದೊಡ್ಡ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಶನಿವಾರ ರಾತ್ರಿ ಸುರಿದ ಮಳೆಗೆ ದೊಡ್ಡ ಗಿಡವೊಂದು ಬೇರುಸಮೇತ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಗ್ರಾಮಸ್ಥರ ಓಡಾಟಕ್ಕೆ ತೀವ್ರ ತೊಂದರೆ ಉಂಟಾಗಿತ್ತು.
ಈ ಕುರಿತು ‘ವಾರ್ತಾ ಭಾರತಿ’ಯಲ್ಲಿ ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ರಸ್ತೆಯಲ್ಲಿ ಬಿದ್ದಿದ್ದ ಮರ ಹಾಗೂ ರೆಂಬೆ-ಕೊಂಬೆಗಳನ್ನು ತೆರವುಗೊಳಿಸಿ ವಾಹನ ಸಂಚಾರ ಮತ್ತು ಸಾರ್ವಜನಿಕರ ಓಡಾಟಕ್ಕೆ ಅನುಕೂಲ ಕಲ್ಪಿಸಿದರು. ಸುದ್ದಿ ಪ್ರಕಟವಾದ ಬೆನ್ನಲ್ಲೇ ಸಮಸ್ಯೆ ಬಗೆಹರಿದ ಹಿನ್ನೆಲೆಯಲ್ಲಿ ಗ್ರಾಮಸ್ಥ ಯಂಕಪ್ಪ ಬೋವಿ ಅವರು ಪತ್ರಿಕೆ ಹಾಗೂ ತ್ವರಿತವಾಗಿ ಸ್ಪಂದಿಸಿದ ಅಧಿಕಾರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.
Next Story




