Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kanakagiri | ಬಸವರೆಡ್ಡಿ ಮಾದಿನಾಳ...

Kanakagiri | ಬಸವರೆಡ್ಡಿ ಮಾದಿನಾಳ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ19 Aug 2026 7:56 PM IST
share
Kanakagiri | ಬಸವರೆಡ್ಡಿ ಮಾದಿನಾಳ ಕುಟುಂಬಕ್ಕೆ ನ್ಯಾಯ ಒದಗಿಸಲು ಆಗ್ರಹ
2.50‌ ಕೋಟಿ ರೂ. ಪರಿಹಾರ ನೀಡಲು ಒತ್ತಾಯ

ಕನಕಗಿರಿ: ನಿವೇಶನ ವಿವಾದದ ಹಿನ್ನೆಲೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಬಸವರೆಡ್ಡಿ ಮಾದಿನಾಳ ಅವರ ಕುಟುಂಬಕ್ಕೆ ಸರ್ಕಾರ ನ್ಯಾಯ ಒದಗಿಸಬೇಕು ಎಂದು ಅಖಿಲ ಕರ್ನಾಟಕ ರೆಡ್ಡಿ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ಸುಭಾಸಚಂದ್ರ ದಾನರೆಡ್ಡಿ ಆಗ್ರಹಿಸಿದರು.

ಈ ಕುರಿತು ಬುಧವಾರ ಇಲ್ಲಿನ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ ಅನಿತಾ ಇಂಡಿ ಹಾಗೂ ಶರಣಪ್ಪ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಬಸವರೆಡ್ಡಿ ಅವರ ಆತ್ಮಹತ್ಯೆಗೆ ಕಾರಣರಾದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಮೃತರ ಕುಟುಂಬಕ್ಕೆ 2.50 ಕೋಟಿ ರೂ. ಪರಿಹಾರ ನೀಡಬೇಕು. ಮೃತರ ಮಕ್ಕಳಿಗೆ ಸರ್ಕಾರದಿಂದ ಉಚಿತ ಶಿಕ್ಷಣ ಒದಗಿಸಬೇಕು. ಮೃತರಿಗೆ ಸಂಬಂಧಿಸಿದ ನಿವೇಶನಗಳಿಗೆ ಹದ್ದುಬಸ್ತು ಮಾಡಿಕೊಡಬೇಕು. ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಆಗ್ರಹಿಸಿದರು.

ಬಸವರಾಜ ರೆಡ್ಡಿ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಮತ್ತು ಕಿರುಕುಳ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳ ವಿರುದ್ಧವೂ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳನ್ನು ಶೀಘ್ರ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಹೋರಾಟ ನಡೆಸಲಾಗುವುದು ಎಂದು ಸುಭಾಸಚಂದ್ರ ದಾನರೆಡ್ಡಿ ಎಚ್ಚರಿಕೆ ನೀಡಿದರು.

ಮಹಾಸಭಾದ ಗೌರವಾಧ್ಯಕ್ಷ ಬಸವರೆಡ್ಡಿ ಗೂರೂಜಿ, ಪ್ರಮುಖರಾದ ಪುರುಷೋತ್ತಮ್ಮ ರೆಡ್ಡಿ ಮಾದಿನಾಳ, ಜಯಪ್ರಕಾಶ ರೆಡ್ಡಿ ಮಾದಿನಾಳ, ನಾಗನಗೌಡ ಪಾಟೀಲ, ಅಯ್ಯನಗೌಡ, ಯಂಕಾರೆಡ್ಡಿ ಕೆರಿ, ನಾಗರಾಜ ಬೇರ್ಗಿ, ತಿರುಮಲರೆಡ್ಡಿ, ದೊಡ್ಡಬಸವ ಸಾನಬಾಳ, ಗಣೇಶರೆಡ್ಡಿ ಕೆರಿ, ವೀರನಗೌಡ, ಇತರರು ಇದ್ದರು. ಇದೇ ಸಮಯದಲ್ಲಿ ಮೃತನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸ್ವಾತ್ವಂನ ಹೇಳಿದರು.

Tags

Kanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X