Kanakagiri | ಶಾಲಾ ಆವರಣದ ತೆಂಗಿನ ಮರಕ್ಕೆ ಕಿಡಿಗೇಡಿಗಳಿಂದ ಬೆಂಕಿ : ಶಂಕೆ

ಕನಕಗಿರಿ : ಪಟ್ಟಣದ ಶಿವಯೋಗಿ ಚೆನ್ನಮಲ್ಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಬೆಳೆದಿದ್ದ ತೆಂಗಿನ ಮರಕ್ಕೆ ಗುರುವಾರ ಬೆಳಿಗ್ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಒಣಗಿದ ಗರಿ ಹಾಗೂ ಸೋಗೆಯಿದ್ದ ಮರದ ಮಧ್ಯಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಹೊಗೆ ಮತ್ತು ಜ್ವಾಲೆಗಳು ಎದ್ದಿದ್ದವು. ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ.
“ಬೆಳಗಿನ ವೇಳೆಯಲ್ಲಿ ಯಾರೋ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿ ಹೋಗಿರುವ ಸಾಧ್ಯತೆ ಇದೆ” ಎಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ. ಈ ಕುರಿತು ಶಾಲೆ ಅಥವಾ ಕಾಲೇಜು ಸಂಸ್ಥೆಯಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿಲ್ಲ ಎನ್ನಲಾಗಿದೆ. ತಪ್ಪಿತಸ್ಥರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Next Story




