ಕನಕಗಿರಿ | ಸೊಳ್ಳೆಗಳ ಕಾಟಕ್ಕೆ ಬ್ರೇಕ್ : ಪಟ್ಟಣ ಪಂಚಾಯಿತಿ ವತಿಯಿಂದ ಫಾಗಿಂಗ್

ಕನಕಗಿರಿ: ಪಟ್ಟಣದಲ್ಲಿ ಇತ್ತೀಚೆಗೆ ಸೊಳ್ಳೆಗಳ ಕಾಟ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪಟ್ಟಣ ಪಂಚಾಯಿತಿ ವತಿಯಿಂದ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಫಾಗಿಂಗ್ ಕಾರ್ಯ ಕೈಗೊಳ್ಳಲಾಗಿದೆ.
ಸಂಜೆ ವೇಳೆಯಲ್ಲಿ ಸಿಬ್ಬಂದಿ ಸೈಕಲ್, ಬೈಕ್ ಮೂಲಕ ಬೀದಿ-ಬೀದಿಗಳಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದು, ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದಾರೆ.
ಮಳೆಗಾಲದಲ್ಲಿ ಸೊಳ್ಳೆಗಳಿಂದ ಡೆಂಗ್ಯೂ, ಮಲೇರಿಯಾ, ಚಿಕೂನ್ ಗುನ್ಯಾ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು, ಸ್ವಚ್ಛತೆ ಕಾಪಾಡಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ರಾಜಶೇಖರ್ ಮನವಿ ಮಾಡಿದ್ದಾರೆ.
Next Story




