ಕನಕಗಿರಿ | ಮುಸಲಾಪುರದಲ್ಲಿ ಚಿರತೆ ಸೆರೆ ಹಿಡಿದ ಅರಣ್ಯ ಇಲಾಖೆ

ಕನಕಗಿರಿ: ತಾಲ್ಲೂಕಿನ ಮುಸಲಾಪುರ ಗ್ರಾಮದ ಸರ್ವೆ ನಂಬರ್ 26ರಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಸುಮಾರು 3 ರಿಂದ 4 ವರ್ಷದ ಗಂಡು ಚಿರತೆ ಇದಾಗಿದ್ದು, ವಿಶೇಷ ಕಾರ್ಯಾಚರಣೆ ನಡೆಸಿ ಬೋನಿನಲ್ಲಿ ಸೆರೆ ಹಿಡಿಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿರತೆಯನ್ನು ವಡ್ಡರಹಟ್ಟಿ ನರ್ಸರಿಯಲ್ಲಿ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಬಸವರಾಜ ಪೂಜಾರ, ಉಪ ವಲಯ ಅರಣ್ಯಾಧಿಕಾರಿ ಎಸ್.ಎಂ.ಡಿ. ಸುಲೇಮಾನ್, ಗಸ್ತು ಅರಣ್ಯ ಪಾಲಕರಾದ ಶಿವಶರಣ ಕೋಳಿ ಹಾಗೂ ಮಹಾಂತೇಶ್ ಕುಂಬಾರ ಭಾಗವಹಿಸಿದ್ದರು.
Next Story




