Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kanakagiri | ಅದ್ದೂರಿಯಾಗಿ ನಡೆದ...

Kanakagiri | ಅದ್ದೂರಿಯಾಗಿ ನಡೆದ ತೊಂಡಿತೇವರಪ್ಪ ರಥೋತ್ಸವ

ವಾರ್ತಾಭಾರತಿವಾರ್ತಾಭಾರತಿ5 Sept 2026 7:07 PM IST
share
Kanakagiri | ಅದ್ದೂರಿಯಾಗಿ ನಡೆದ ತೊಂಡಿತೇವರಪ್ಪ ರಥೋತ್ಸವ

ಕನಕಗಿರಿ: ಪಟ್ಟಣದ ಐತಿಹಾಸಿಕ ದೇವಸ್ಥಾನಗಳಲ್ಲಿ ಒಂದಾದ ಗುಡ್ಡದ ಮೇಲಿರುವ ತೊಂಡಿತೇವರಪ್ಪ (ಕಂಠೀರಂಗನಾಥ) ದೇವರ ರಥೋತ್ಸವ ಶನಿವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಬೆಳಿಗ್ಗೆಯಿಂದಲೇ ದೇವಸ್ಥಾನದಲ್ಲಿ ಅಭಿಷೇಕ, ಪಂಚಾಮೃತ, ಪುಷ್ಪಾರ್ಚನೆ, ಬೆಳ್ಳಿ ಆಭರಣ ಅಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ರಥದ ಮುಂಭಾಗದಲ್ಲಿ ಹೋಮ, ಹವನ ಹಾಗೂ ಅನ್ನಬಲಿ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.

ಭಕ್ತರು ದೇವರಿಗೆ ತಾವು ಹರಕೆ ಹೊತ್ತಿದ್ದ ವಿವಿಧ ಸಾಮಗ್ರಿಗಳನ್ನು ಅರ್ಪಿಸಿ, ದಿಂಡ ನಮಸ್ಕಾರ ಸಲ್ಲಿಸುವ ಮೂಲಕ ಭಕ್ತಿ ಸಮರ್ಪಿಸಿದರು. ದೇವಸ್ಥಾನ ಸಮಿತಿ ವತಿಯಿಂದ ಪ್ರತಿವರ್ಷದಂತೆ ಈ ಬಾರಿಯೂ ವಿಶೇಷವಾಗಿ ಮುಂಗೈ ಸ್ಪರ್ಧೆ ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ದೇವಸ್ಥಾನದ ವತಿಯಿಂದ ಭಕ್ತರಿಗೆ ಅನ್ನಸಂತರ್ಪಣೆಯನ್ನೂ ಏರ್ಪಡಿಸಲಾಗಿತ್ತು.

ಸಂಜೆ ಸುಮಾರು 5.10ಕ್ಕೆ ರಥೋತ್ಸವ ಆರಂಭವಾಗುತ್ತಿದ್ದಂತೆ ಪಟ್ಟಣ ಸೇರಿದಂತೆ ವಿವಿಧ ಗ್ರಾಮಗಳು ಹಾಗೂ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಪಾಲ್ಗೊಂಡರು. ರಥದ ಮುಂಭಾಗದಲ್ಲಿ ಡೊಳ್ಳು ಕುಣಿತ, ತಾಷಾ ಮೇಳ ಹಾಗೂ ಯುವಕರ ನಾನಾ ಭಂಗಿಯ ನೃತ್ಯಗಳು ನೋಡುಗರ ಗಮನ ಸೆಳೆದವು. ಭಕ್ತರು ರಥದತ್ತ ಹುತ್ತುತ್ತಿ ಹಾಗೂ ಬಾಳೆಹಣ್ಣು ಎಸೆಯುವ ಮೂಲಕ ಭಕ್ತಿ ಮೆರೆದರು.

ದೇವಸ್ಥಾನದ ಸುತ್ತಮುತ್ತಲಿನ ಅಂಗಡಿ-ಮುಂಗಟ್ಟುಗಳಲ್ಲಿ ಮಹಿಳೆಯರು, ಮಕ್ಕಳು ಹಾಗೂ ಯುವಕರು ಆಟಿಕೆಗಳು, ತಿಂಡಿ-ತಿನಿಸುಗಳನ್ನು ಖರೀದಿಸುತ್ತಿರುವುದು ಕಂಡುಬಂತು. ಗೆಳೆಯರು ಹಾಗೂ ಕುಟುಂಬ ವರ್ಗದವರು ಒಂದೆಡೆ ಸೇರಿ ಮಂಡಕ್ಕಿ, ಕಾರ, ಮಿರ್ಚಿ, ವಡಾ ಸೇರಿದಂತೆ ವಿವಿಧ ಖಾದ್ಯಗಳನ್ನು ಸವಿದರು.

ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳು ಹಾಗೂ ವಿವಿಧ ತಾಲೂಕುಗಳಿಂದ ಭಕ್ತರು ಆಗಮಿಸಿದ್ದರು. ಕೊಪ್ಪಳ, ರಾಯಚೂರು, ಬಳ್ಳಾರಿ, ಹೊಸಪೇಟೆ, ಧಾರವಾಡ, ಹುಬ್ಬಳ್ಳಿ, ವಿಜಯನಗರ, ಬಾಗಲಕೋಟೆ, ಸಿರುಗುಪ್ಪ, ಸಿಂಧನೂರು ಸೇರಿದಂತೆ ವಿವಿಧ ಜಿಲ್ಲೆಗಳ ಜನರು ರಥೋತ್ಸವದಲ್ಲಿ ಪಾಲ್ಗೊಂಡು ದೇವರ ದರ್ಶನ ಪಡೆದರು. ಪಪಂ ಸದಸ್ಯರು, ವಿವಿಧ ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು ಕೂಡ ರಥೋತ್ಸವದಲ್ಲಿ ಭಾಗವಹಿಸಿದ್ದರು.

Tags

Kanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X