Kanakagiri | ಎತ್ತರ ಜಿಗಿತ ಸ್ಪರ್ಧೆ : ಯಮನಮ್ಮ ರಾಜ್ಯಮಟ್ಟಕ್ಕೆ ಆಯ್ಕೆ

ಕನಕಗಿರಿ: ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಚನ್ನಶ್ರೀ ರುದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯಮನಮ್ಮ ವೈಯಕ್ತಿಕ ವಿಭಾಗದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ ಎಂದು ಪ್ರಾಂಶುಪಾಲ ನಿರುಪಾದಿ ತಿಳಿಸಿದ್ದಾರೆ.
ಜಿಲ್ಲಾಮಟ್ಟದಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿನಿ ಯಮನಮ್ಮ ಅವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ಅಭಿನಂದಿಸಿ ಶುಭ ಹಾರೈಸಿದರು.
Next Story




