ಕನಕಗಿರಿ | ಪ.ಪಂ ಅಧ್ಯಕ್ಷೆ ಸ್ಥಾನಕ್ಕೆ ಹುಸೇನಬೀ ಚಳ್ಳಮರದ ರಾಜೀನಾಮೆ

ಕೊಪ್ಪಳ: ಕನಕಗಿರಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಹುಸೇನಬೀ ಚಳ್ಳಮರದ ಅವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕೊಪ್ಪಳದ ಜಿಲ್ಲಾಡಳಿತ ಭವನದಲ್ಲಿ ಉಪ ವಿಭಾಗಾಧಿಕಾರಿ ಮಹೇಶ ಮಾಲಗಿತ್ತಿ ಅವರಿಗೆ ಗುರುವಾರ ರಾಜೀನಾಮೆ ಪತ್ರ ಸಲ್ಲಿಸಿದ್ದು, ರಾಜೀನಾಮೆ ಸ್ವೀಕೃತವಾಗಿದೆ ಎಂದು ಕಚೇರಿಯ ಮೂಲಗಳು ತಿಳಿಸಿವೆ.
ಹಿಂದುಳಿದ ವರ್ಗದ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಒಟ್ಟು ನಾಲ್ಕು ಜನ ಮಹಿಳಾ ಸದಸ್ಯೆಯರಿದ್ದು, ಬಿಜೆಪಿಯಲ್ಲಿ ಈ ವರ್ಗಕ್ಕೆ ಸೇರಿದ ಸದಸ್ಯರು ಯಾರು ಇಲ್ಲ. 2024ರ ಅ.1ರಂದು ನಿಗದಿಯಾಗಿದ್ದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ನಾಲ್ಕು ಜನ ಸ್ಪರ್ಧಾಳುಗಳ ಪೈಕಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಅವರ ಸೂಚನೆ ಮೇರೆಗೆ 13 ತಿಂಗಳ ಹುಸೇನಬೀ ಉಳಿದ ಅವಧಿಗೆ ತನುಶ್ರೀ ಟಿ.ಜೆ. ರಾಮಚಂದ್ರ ಅವರಿಗೆ ಬಿಟ್ಟು ಕೊಡಲು ಮಾತುಕತೆಯಾದ ಹಿನ್ನೆಲೆಯಲ್ಲಿ ಚಳ್ಳಮರದ ಅವರು ರಾಜೀನಾಮೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
Next Story





