Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕನಕಗಿರಿ | ಮಹಿಳೆಯರು ಎಲ್ಲಾ...

ಕನಕಗಿರಿ | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ: ವಿರುಪಾಕ್ಷಯ್ಯ

ವಾರ್ತಾಭಾರತಿವಾರ್ತಾಭಾರತಿ9 March 2026 5:29 PM IST
share
ಕನಕಗಿರಿ | ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ: ವಿರುಪಾಕ್ಷಯ್ಯ

ಕನಕಗಿರಿ: ಮಹಿಳೆ ಇಂದು ಸಮಾಜದ ಎಲ್ಲಾ ರಂಗಗಳಲ್ಲಿ ತನ್ನ ಸಾಮರ್ಥ್ಯವನ್ನು ತೋರಿಸುತ್ತಿದ್ದು, ಹಲವು ಕಟ್ಟುಪಾಡುಗಳ ನಡುವೆಯೂ ಸಾಧನೆಯ ಶಿಖರವನ್ನು ತಲುಪುತ್ತಿದ್ದಾಳೆ. ಆದರೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುವ ಸಂದರ್ಭಗಳಲ್ಲಿ ಇನ್ನೂ ಹಲವು ಸವಾಲುಗಳನ್ನು ಎದುರಿಸುತ್ತಿದ್ದಾಳೆ ಎಂದು ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ವಿರುಪಾಕ್ಷಯ್ಯ ಹೇಳಿದರು.

ಪಟ್ಟಣದ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ತಾಲೂಕು ಪಂಚಾಯತ್ ಕನಕಗಿರಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಹಾಗೂ ಶಿಶು ಅಭಿವೃದ್ಧಿ ಯೋಜನೆ ಕನಕಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯ ಪಾತ್ರ ವ್ಯಕ್ತಿಯ ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿದೆ. ತಾಯಿ, ಸಹೋದರಿ ಮತ್ತು ಪತ್ನಿಯಾಗಿ ಕುಟುಂಬದ ಜೀವನಕ್ಕೆ ಬೆಳಕಾಗುವ ಮಹಿಳೆ ಮನೆಯ ಅರ್ಧ ಜವಾಬ್ದಾರಿಯನ್ನು ಹೊತ್ತುಕೊಂಡು ಸಮಾಜದ ಅಭಿವೃದ್ಧಿಗೂ ಸಹಕರಿಸುತ್ತಾಳೆ ಎಂದು ಹೇಳಿದರು. ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಬಾಲ್ಯ ವಿವಾಹ ನಡೆಯುತ್ತಿರುವುದು ದುಃಖಕರವಾಗಿದ್ದು, ಪ್ರತಿಯೊಬ್ಬರೂ ಅದನ್ನು ತಡೆಯಲು ಮುಂದಾಗಬೇಕು ಎಂದು ಕರೆ ನೀಡಿದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕೆ. ರಾಜಶೇಖರ ಮಾತನಾಡಿ, ಸಮಾನತೆ ಮತ್ತು ಒಗ್ಗಟ್ಟಿನೊಂದಿಗೆ ಮಹಿಳೆಯರು ಸದಾ ಮುಂದಿರುವುದು ದೇಶದ ಆರ್ಥಿಕ ಅಭಿವೃದ್ಧಿಗೆ ಸಹಾಯಕವಾಗುತ್ತದೆ. ಅನೇಕ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ತೋರಿಸಿ ಸಮಾಜಕ್ಕೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹುಲಗಪ್ಪ ಚಲುವಾದಿ, ಗ್ಯಾರಂಟಿ ಸಮಿತಿ ಅಧ್ಯಕ್ಷ ಹಜರತ್ ಹುಸೇನ, ಪಪಂ ಸದಸ್ಯ ಹನುಮಂತ ಬಸರಿಗಿಡದ ಹಾಗೂ ಗ್ಯಾರಂಟಿ ಸಮಿತಿ ಸದಸ್ಯ ಗ್ಯಾನಪ್ಪ ಮಾತನಾಡಿದರು.

ಪಪಂ ಉಪಾಧ್ಯಕ್ಷ ಕಂಠಿರಂಗ ನಾಯಕ, ಮಾಜಿ ಅಧ್ಯಕ್ಷೆ ಹುಸೇನಬೀ ಚಳ್ಳಮರದ್, ಸದಸ್ಯರಾದ ಸಿದ್ದೇಶ ಕೆ., ರಾಕೇಶ ಕಂಪ್ಲಿ, ನಂದಿನಿ ಓಣಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ನಾಡಗೀತೆ ಹಾಡುವ ಮೂಲಕ ಹಾಗೂ ಕೆಕ್ ಕತ್ತರಿಸಿ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಸಾವಿತ್ರಿ ಹಿರೇಮಠ ಪ್ರಾರ್ಥಿಸಿದರು. ವಿಷಯ ನಿರ್ವಾಹಕ ಕೊಟ್ರಯ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

Tags

Kanakagiri
share
ವಾರ್ತಾಭಾರತಿ
ವಾರ್ತಾಭಾರತಿ
Next Story
X