Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ತಲಾ ಆದಾಯದಲ್ಲಿ ಇಡೀ ದೇಶದಲ್ಲಿ...

ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ಕನ್ನಡಿಗರೇ ನಂಬರ್ ಒನ್: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ6 Oct 2025 5:47 PM IST
share
ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ಕನ್ನಡಿಗರೇ ನಂಬರ್ ಒನ್: ಸಿಎಂ ಸಿದ್ದರಾಮಯ್ಯ
ʼʼನಮ್ಮ ಸರಕಾರ ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ ನೀಡಿದೆʼʼ

ಕೊಪ್ಪಳ : ಇದುವರೆಗೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 13,000 ಕೋಟಿ ರೂ. ಅನುದಾನ ನೀಡಿದೆ. ಈ ಹಣ ಕೊಟ್ಟಿದ್ದೂ ಸಿದ್ದರಾಮಯ್ಯ ಸರ್ಕಾರ. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ರೈತರಿಗೆ 80 ಸಾವಿರ ಕೋಟಿ ರೂ. ಪರಿಹಾರ ಕೊಡುತ್ತಾ ಇರುವುದೂ ಇದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಪ್ಪಳ ವತಿಯಿಂದ ಕೊಪ್ಪಳ ಜಿಲ್ಲಾ ವ್ಯಾಪ್ತಿಯ 2,000 ಕೋಟಿ ರೂ. ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ / ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಇಲಾಖಾ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ನುಡಿದಂತೆ ನಡೆದ ಯಾವುದಾದರೂ ಸರ್ಕಾರ ಇದ್ದರೆ ಅದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ. ಬಿಜೆಪಿ ತನ್ನ ಅವಧಿಯಲ್ಲಿ ಒಂದೇ ಒಂದು ಮನೆ ಕೊಡಲಿಲ್ಲ. ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಈ ಕಾರಣಕ್ಕೆ ನಮ್ಮ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೊಟ್ಟೆಕಿಚ್ಚು ಪಡುತ್ತಿದ್ದಾರೆ ಎಂದು ತಿಳಿಸಿದರು.

ನಾವು ಎರಡು ವರ್ಷದಲ್ಲಿ ಒಂದು ಲಕ್ಷ ಕೋಟಿ ರೂ. ಹಣವನ್ನು ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಜೇಬಿಗೆ ಹಾಕಿದ್ದೇವೆ. ಇದರಿಂದ ರಾಜ್ಯದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಜನರ ತಲಾ ಆದಾಯ ಹೆಚ್ಚಾಗಿ ರಾಜ್ಯದ ಆರ್ಥಿಕತೆ ಪ್ರಗತಿ ಕಂಡಿದೆ ಎಂದರು.

ತಲಾ ಆದಾಯದಲ್ಲಿ ಇಡೀ ದೇಶದಲ್ಲಿ ಕನ್ನಡಿಗರೇ ನಂಬರ್ ಒನ್. ಇದು ನಮ್ಮ ಸರ್ಕಾರದ ಆರ್ಥಿಕ ಸಾಧನೆ. ತೆರಿಗೆ ಪಾವತಿಯಲ್ಲಿ ರಾಜ್ಯ ಇಡೀ ದೇಶದಲ್ಲಿ ಎರಡನೇ ಸ್ಥಾನದಲ್ಲಿ ಇದ್ದೇವೆ‌. ಇದು ನಮ್ಮ ಸರ್ಕಾರದ ಜಾತ್ಯತೀತ ಸಾಧನೆ ಎಂದರು.

ನಾವು ಎಲ್ಲಾ ಜಾತಿ, ಎಲ್ಲಾ ಧರ್ಮದವರ ಪ್ರಗತಿಗಾಗಿ ಯೋಜನೆ ರೂಪಿಸಿದೆವು‌‌. ಹೀಗಾಗಿ ಎಲ್ಲಾ ಜಾತಿಯ, ಎಲ್ಲಾ ಧರ್ಮದ ಜನರು ಸೇರಿ ರಾಜ್ಯದ ಆರ್ಥಿಕತೆಯನ್ನು ಪ್ರಗತಿಗೆ ಕೊಂಡೊಯ್ದರು ಎಂದು ಮೆಚ್ಚುಗೆ ಸೂಚಿಸಿದರು.

ಕೊಪ್ಪಳ ಜಿಲ್ಲೆಯೊಂದರಲ್ಲೇ 9 ಕೋಟಿ 22 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿ ಜಿಲ್ಲೆಗೆ 330 ಕೋಟಿ ರೂ. ಖರ್ಚಾಗಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಜಿಲ್ಲೆಯಲ್ಲಿ 3,17,776 ಫಲಾನುಭವಿಗಳಿಗೆ 1,283 ಕೋಟಿ ರೂ. ವಿತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 2,75,903 ಫಲಾನುಭವಿಗಳಿಗೆ 290 ಕೋಟಿ ರೂ. ಕೊಟ್ಟಿದ್ದೇವೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ 1.96 ಕೋಟಿ ಜನರಿಗೆ 320 ಕೋಟಿ ರೂ. ಮೊತ್ತದ 39.097 ಮೆಟ್ರಿಕ್ ಟನ್ ದವಸಧಾನ್ಯಗಳನ್ನು ವಿತರಿಸಲಾಗಿದೆ ಎಂದು ವಿವರಿಸಿದ ಸಿಎಂ ಅವರು, ಬೊಕ್ಕಸ ಖಾಲಿ ಆಗಿದ್ದರೆ ಇಷ್ಟೊಂದು ಪ್ರಮಾಣದ ಹಣವನ್ನು ಜನರಿಗೆ ಕೊಡಲಾಗುತ್ತಿತ್ತಾ ಎಂದು ಪ್ರಶ್ನಿಸಿದರು.

ಬಿಜೆಪಿಯವರ ಮನೆ ದೇವರೇ ಸುಳ್ಳು. ಆದ್ದರಿಂದ ಅವರ ಸುಳ್ಳುಗಳಿಗೆ ರಾಜ್ಯದ ಜನತೆ ತಮ್ಮ ತಲೆಯನ್ನು, ಬುದ್ದಿಯನ್ನು ಒತ್ತೆ ಇಡುವುದಿಲ್ಲ ಎನ್ನುವ ಭರವಸೆ ನನಗಿದೆ ಎಂದರು.

GST ಯಲ್ಲಿ 8 ವರ್ಷ ಸುಲಿಗೆ ಬಳಿಕ ಫೋಸು ಕೊಡುತ್ತಾರೆ :

GST ಜಾರಿ ಮಾಡಿದ ಪರಧಾನಿ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ಎಂಟು ವರ್ಷಗಳ ಕಾಲ ನಿರಂತರವಾಗಿ ರಾಜ್ಯದ ಮತ್ತು ದೇಶದ ಜನರ ಸುಲಿಗೆ ನಡೆಸಿತು. ನಾವು GST ಸುಲಿಗೆ ವಿರೋಧಿಸಿ ಸರಳೀಕರಣಕ್ಕೆ ಆಗ್ರಹಿಸಿದ್ದೆವು. ಎಂಟು ವರ್ಷದ ಸುಲಿಗೆ ಬಳಿಕ ಸುಲಿಗೆ ನಡೆಸಿದವರೇ ಸರಳೀಕರಣದ ಕ್ರೆಡಿಟ್ ಗಾಗಿ ಒದ್ದಾಡುತ್ತಿದ್ದಾರೆ. ಈಗಲೂ ಕೇಂದ್ರದಿಂದ 15 ಸಾವಿರ ಕೋಟಿ ರೂಪಾಯಿ ರಾಜ್ಯಕ್ಕೆ ಅನ್ಯಾಯ ಆಗುತ್ತಿದೆ. 15ನೇ ಹಣಕಾಸು ಆಯೋಗದಿಂದಲೂ ರಾಜ್ಯಕ್ಕೆ ಅನ್ಯಾಯ ಆಗುತ್ತಲೇ ಇದೆ. ನಮಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಬಿಜೆಪಿಯ ಸಂಸದರು ಮತ್ತು ರಾಜ್ಯ ಪ್ರತಿನಿಧಿಸುವ ಕೇಂದ್ರ ಮಂತ್ರಿಗಳು ಪಾರ್ಲಿಮೆಂಟಿನಲ್ಲಿ ತುಟಿ ಬಿಚ್ಚಿ ಪ್ರಶ್ನಿಸಲಿಲ್ಲ ಎಂದರು‌ .

ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ನಾಲ್ಕು ಬಾರಿ ದೆಹಲಿಗೆ ಹೋಗಿ ಅನ್ಯಾಯ ಸರಿಪಡಿಸಲು ಮನವಿ ಮಾಡಿದರೂ ಮೋದಿಯೂ ಮಾಡಲಿಲ್ಲ, ನಿರ್ಮಲಾ ಸೀತರಾಮನ್ ಅವರೂ ಅನ್ಯಾಯ ಸರಿ ಪಡಿಸಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಕ್ಕುಂಬಿ ಕೆರೆಗೆ ನೀರು ಹರಿಸಿದ್ದು ನಾವು. ಈಗ ಯಲಬುರ್ಗಾ ಕ್ಷೇತ್ರದ ಕೆರೆ ತುಂಬಿಸುವ ಯೋಜನೆಗೆ 650 ಕೋಟಿ ರೂ. ಹಣ ಕೊಡುತ್ತಿದ್ದೇವೆ. ಇದೂ ನಮ್ಮ-ನಿಮ್ಮ ಸರ್ಕಾರದ್ದೇ ಹಣ ಎಂದರು.

ಕೊಪ್ಪಳದ ಋಣ ತೀರಿಸೋದು ಇನ್ನೂ ಬಾಕಿ ಇದೆ :

ನಾನು ಕೊಪ್ಪಳಕ್ಕೆ ಕಾಲಿಟ್ಟಾಗಲೆಲ್ಲಾ ಮೈಸೂರಿಗೇ ಕಾಲಿಟ್ಟಷ್ಟು ಖುಷಿ ಆಗುತ್ತದೆ. ನಿಮ್ಮ ಪ್ರೀತಿಗೆ ಸದಾ ಋಣಿ. ರಾಜೀವ್ ಗಾಂಧಿ ಅವರ ಹತ್ಯೆ ಆಗದೇ ಹೋಗಿದ್ದರೆ ನಾನು ಕೊಪ್ಪಳ ಲೋಕಸಭಾ ಸದಸ್ಯ ಆಗಿರುತ್ತಿದ್ದೆ. ನಿಮ್ಮ ಪ್ರೀತಿಯ ಋಣ ನನ್ನ ಮೇಲಿದೆ‌. ಅರ್ಧ ಋಣ ತೀರಿಸಿದ್ದೇನೆ. ಉಳಿದ ಋಣವನ್ನೂ ತೀರಿಸುತ್ತೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X