ಕಾರಟಗಿ | ಪಡಿತರ ಅಕ್ಕಿ ಅಕ್ರಮ ಸಾಗಣೆ : ಪ್ರಕರಣ ದಾಖಲು

ಕಾರಟಗಿ : ತಾಲೂಕಿನ ಚಳ್ಳೂರು ಕ್ಯಾಂಪ್ ಬಳಿಯ ಕಾಲುವೆ ಹತ್ತಿರ ಅಕ್ರಮವಾಗಿ ಸಾಗಿಸುತ್ತಿದ್ದ ಪಡಿತರ ಅಕ್ಕಿಯನ್ನು ಖಚಿತ ಮಾಹಿತಿಯೊಂದಿಗೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡು ಪ್ರಕರಣ ದಾಖಲು ಮಾಡಿದ ಘಟನೆ ಜು.27ರ ಭಾನುವಾರ ರಾತ್ರಿ ನಡೆದಿದೆ.
ಜು.27 ರಂದು ರಾತ್ರಿ ಸುಮಾರು 10 ಗಂಟೆಗೆ ಕಾರಟಗಿ- ಚಳ್ಳೂರು ಮಾರ್ಗವಾಗಿ ಗಂಗಾವತಿ ಕಡೆಗೆ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ಆಟೋ ವಾಹನ ಹಾಗೂ ಅಂದಾಜು 8 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದ್ದು, ಅಗತ್ಯ ವಸ್ತುಗಳ ಕಾಯ್ದೆಯಡಿ, ಕಾರಟಗಿ ಪೊಲೀಸ್ ಠಾಣೆಯಲ್ಲಿ FIR ಸಂಖ್ಯೆ: 208/2025 ರ ಮೂಲಕ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿ ನವೀನ್ ಮಠದ್ ತಿಳಿಸಿದ್ದಾರೆ.
Next Story





