ಕೊಪ್ಪಳ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಾಹಿಲ್ ಬಾಗ್ಲಾ ಅಧಿಕಾರ ಸ್ವೀಕಾರ

ಕೊಪ್ಪಳ : ಕೊಪ್ಪಳ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಾಹಿಲ್ ಬಾಗ್ಲಾ ಅವರು ಆಗಸ್ಟ್ 30ರಂದು ಅಧಿಕಾರ ಸ್ವೀಕರಿಸಿದರು.
ಡಾ. ರಾಮ್ ಎಲ್. ಅರಸಿದ್ದಿ ಅವರ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಸಾಹಿಲ್ ಬಾಗ್ಲಾ ಅವರನ್ನು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನಿಯೋಜಿಸಿ ರಾಜ್ಯ ಸರಕಾರ ಆದೇಶಿಸಿದೆ.
ಕರ್ನಾಟಕ ಕೇಡರ್‌ನ 2018ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದು, ಈ ಹಿಂದೆ ಬೆಂಗಳೂರು ನಗರದ ಪೂರ್ವ ಸಂಚಾರ ವಿಭಾಗದ ಡಿಸಿಪಿಯಾಗಿ, ಧಾರವಾಡ ಡಿಸಿಪಿ ಹಾಗೂ ಗುಪ್ತಚರ ವಿಭಾಗದ ಡಿಸಿಪಿಯಾಗಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಅಧಿಕಾರ ಸ್ವೀಕಾರ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಉಪಾಧೀಕ್ಷಕರಾದ ಮುತ್ತಣ್ಣ ಸರವಗೋಳ ಸೇರಿದಂತೆ ಪೊಲೀಸ್ ಇಲಾಖೆಯ ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
Next Story




