Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಸ್ಮಾರ್ಟ್‌ಫೋನ್, ನಿಗದಿತ...

Koppal | ಸ್ಮಾರ್ಟ್‌ಫೋನ್, ನಿಗದಿತ ವೇತನವಿಲ್ಲದೆ ಸಮಸ್ತ ಆ್ಯಪ್ ಕೆಲಸ: ಆಶಾ ಕಾರ್ಯಕರ್ತೆಯರ ವಿರೋಧ

ವಾರ್ತಾಭಾರತಿವಾರ್ತಾಭಾರತಿ10 Sept 2026 7:20 PM IST
share
Koppal | ಸ್ಮಾರ್ಟ್‌ಫೋನ್, ನಿಗದಿತ ವೇತನವಿಲ್ಲದೆ ಸಮಸ್ತ ಆ್ಯಪ್ ಕೆಲಸ: ಆಶಾ ಕಾರ್ಯಕರ್ತೆಯರ ವಿರೋಧ

ಕೊಪ್ಪಳ: ಸ್ಮಾರ್ಟ್‌ಫೋನ್, ತಾಂತ್ರಿಕ ಸೌಲಭ್ಯ ಹಾಗೂ ನಿಗದಿತ ವೇತನವಿಲ್ಲದೆ ‘ಸಮಸ್ತ’ ಆ್ಯಪ್ ಮೂಲಕ ಹೆಚ್ಚುವರಿ ಆನ್‌ಲೈನ್ ಕೆಲಸ ಹೇರಿರುವುದನ್ನು ವಿರೋಧಿಸಿ ಎಐಯುಟಿಯುಸಿಗೆ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರು ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಈಶ್ವರ ಸವಡಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷ ಡಾ. ಪ್ರಮೋದ್ ಮಾತನಾಡಿ, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ತೆರಳಿ ಗರ್ಭಿಣಿಯರು, ಬಾಣಂತಿಯರು, ಮಕ್ಕಳ ಆರೋಗ್ಯ, ಲಸಿಕೆ ಹಾಗೂ ಕುಟುಂಬ ಕಲ್ಯಾಣ ಸೇರಿದಂತೆ ಹಲವು ಆರೋಗ್ಯ ಸೇವೆಗಳನ್ನು ಈಗಾಗಲೇ ನಿರ್ವಹಿಸುತ್ತಿದ್ದಾರೆ. ಇದರ ಜೊತೆಗೆ ಸಮಸ್ತ ಆ್ಯಪ್‌ನಲ್ಲಿ ಮಾಹಿತಿ ದಾಖಲಿಸುವ ಹೆಚ್ಚುವರಿ ಹೊರೆ ಹೇರಲಾಗಿದೆ ಎಂದು ಆರೋಪಿಸಿದರು.

ಹಲವು ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ಫೋನ್, ಸಮರ್ಪಕ ನೆಟ್‌ವರ್ಕ್, ತರಬೇತಿ ಹಾಗೂ ತಾಂತ್ರಿಕ ನೆರವು ಲಭ್ಯವಿಲ್ಲ. ಅನೇಕ ಕಡೆ ಸರ್ವರ್ ಮತ್ತು ನೆಟ್‌ವರ್ಕ್ ಸಮಸ್ಯೆಯಿಂದ ಆ್ಯಪ್‌ನಲ್ಲಿ ಮಾಹಿತಿ ದಾಖಲಿಸುವುದು ಕಷ್ಟವಾಗುತ್ತಿದೆ. ಅಗತ್ಯ ಸೌಲಭ್ಯ ಒದಗಿಸದೆ ಸ್ವಂತ ಮೊಬೈಲ್‌ನಲ್ಲಿ ಕೆಲಸ ಮಾಡಿಸುವುದು ಸರಿಯಲ್ಲ ಎಂದು ಹೇಳಿದರು.

ಮೊಬೈಲ್ ಬಳಕೆಗೆ ನೀಡುವ ಮಾಸಿಕ ಭತ್ಯೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸಬೇಕು. ಸಮಸ್ತ ಆ್ಯಪ್‌ನ ಹೆಚ್ಚುವರಿ ಕೆಲಸಕ್ಕೆ ಒತ್ತಡ ಹೇರುವುದನ್ನು ನಿಲ್ಲಿಸಿ, ಆಶಾ ಕಾರ್ಯಕರ್ತೆಯರ ಕೆಲಸದ ಹೊರೆ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿದರು.

ಬೇಡಿಕೆಗಳು ಈಡೇರುವವರೆಗೆ ಸಮಸ್ತ ಆ್ಯಪ್‌ನ ಆನ್‌ಲೈನ್ ಕೆಲಸವನ್ನು ಮಾಡುವುದಿಲ್ಲ ಎಂದು ಸಂಘದ ಜಿಲ್ಲಾ ಸಮಿತಿ ತಿಳಿಸಿದೆ.

ಈ ವೇಳೆ ಜಿಲ್ಲಾ ಅಧ್ಯಕ್ಷ ಶರಣು ಗಡ್ಡಿ, ಕಾರ್ಯದರ್ಶಿ ಕೌಶಲ್ಯ ದೊಡ್ಡಗೌಡರ್, ಮುಖಂಡರಾದ ಶಂಕ್ರಮ್ಮ ಹಳ್ಳಿಕೇರಿ, ರೇಖಾ, ಲಲಿತಾ, ಗೀತಾ, ಸವಿತಾ, ರಜಿಯಾ ಬೇಗಂ, ದ್ರಾಕ್ಷಾಯಿಣಿ, ಲತಾ, ಪ್ರೇಮ, ಪುಷ್ಪಾವತಿ, ದ್ಯಾವಕ್ಕ, ಪುಷ್ಪಾ, ಕಸ್ತೂರಮ್ಮ, ಸುನಂದಾ, ಅನ್ನಪೂರ್ಣ, ನಾಗಮ್ಮ, ಪದ್ಮಾವತಿ, ಜೈತುನಾಬಿ, ರೇಣುಕಾ, ಜಾನಕಿ ಸೇರಿದಂತೆ ಹಲವರು ಇದ್ದರು.

Tags

Koppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X