Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಹಿಂದುಳಿದ ಸಮುದಾಯಗಳಿಗೆ...

Koppal | ಹಿಂದುಳಿದ ಸಮುದಾಯಗಳಿಗೆ ಸಮರ್ಪಕ ರಾಜಕೀಯ ಪ್ರತಿನಿಧಿತ್ವ ದೊರಕಬೇಕಾಗಿದೆ: ತಾಹೇರ್ ಹುಸೇನ್

ವಾರ್ತಾಭಾರತಿವಾರ್ತಾಭಾರತಿ13 Jun 2026 8:07 PM IST
share
Koppal | ಹಿಂದುಳಿದ ಸಮುದಾಯಗಳಿಗೆ ಸಮರ್ಪಕ ರಾಜಕೀಯ ಪ್ರತಿನಿಧಿತ್ವ ದೊರಕಬೇಕಾಗಿದೆ: ತಾಹೇರ್ ಹುಸೇನ್
"ಸಾಮಾಜಿಕ ನ್ಯಾಯಕ್ಕೆ ರಾಜಕೀಯ ಸಬಲೀಕರಣ ಅಗತ್ಯ"

ಕೊಪ್ಪಳ: ಸಾಮಾಜಿಕ ನ್ಯಾಯ, ಪ್ರಜಾಸತ್ತಾತ್ಮಕ ಮೌಲ್ಯಗಳ ರಕ್ಷಣೆ ಹಾಗೂ ಹಿಂದುಳಿದ ಸಮುದಾಯಗಳಿಗೆ ಸಮರ್ಪಕ ರಾಜಕೀಯ ಪ್ರತಿನಿಧಿತ್ವ ದೊರಕಬೇಕಾದ ಅಗತ್ಯವಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಡ್ವೋಕೇಟ್ ತಾಹೇರ್ ಹುಸೇನ್ ಹೇಳಿದರು.

ನಗರದ ಮುಸ್ಲಿಂ ಶಾದಿ ಮಹಲ್‌ನಲ್ಲಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ “ಸಾಮಾಜಿಕ ನ್ಯಾಯಕ್ಕಾಗಿ ರಾಜಕೀಯ ಸಬಲೀಕರಣ” ಎಂಬ ಘೋಷವಾಕ್ಯದಡಿ ಆಯೋಜಿಸಿದ್ದ ಜಿಲ್ಲಾ ಸಮಾವೇಶದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಆದರೆ ಪ್ರಸ್ತುತ ರಾಜಕೀಯ ವ್ಯವಸ್ಥೆ ಹಾಗೂ ಕೆಲವು ರಾಜಕೀಯ ಶಕ್ತಿಗಳು ಅಲ್ಪಸಂಖ್ಯಾತರ ಹಕ್ಕುಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಸುತ್ತಿವೆ ಎಂದು ಆರೋಪಿಸಿದರು.

ಸಮಾಜದ ಎಲ್ಲ ವರ್ಗಗಳ ಸಬಲೀಕರಣಕ್ಕಾಗಿ ರಾಜಕೀಯ ಜಾಗೃತಿ, ಸಂಘಟಿತ ಹೋರಾಟ ಹಾಗೂ ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆ ಅಗತ್ಯವಾಗಿದೆ ಎಂದು ಅವರು ಹೇಳಿದರು.

ದೇಶದ ಒಂದು ದೊಡ್ಡ ಸಮುದಾಯವನ್ನು ಮೂಲಭೂತ ಹಕ್ಕುಗಳಿಂದ ವಂಚಿತಗೊಳಿಸಿದರೆ ಸಮಗ್ರ ಅಭಿವೃದ್ಧಿ ಸಾಧ್ಯವಿಲ್ಲ. ಎಲ್ಲ ವರ್ಗಗಳಿಗೂ ಸಮಾನ ಅವಕಾಶ ಮತ್ತು ನ್ಯಾಯ ದೊರೆತಾಗ ಮಾತ್ರ ದೇಶದ ಪ್ರಗತಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಸಂವಿಧಾನಾತ್ಮಕ ಮೌಲ್ಯಗಳ ರಕ್ಷಣೆಗೆ ಜನರು ಸಂಘಟಿತರಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಕರೆ ನೀಡಿದರು.

ಸಮಾವೇಶದಲ್ಲಿ ಸಾರ್ವಜನಿಕರು, ಯುವಕರು, ಮಹಿಳೆಯರು, ಸಾಮಾಜಿಕ ಹೋರಾಟಗಾರರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಸಮಾವೇಶದಲ್ಲಿ ಸಾರ್ವಜನಿಕರು, ಯುವಕರು, ಮಹಿಳೆಯರು, ಸಾಮಾಜಿಕ ಹೋರಾಟಗಾರರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಹಬಿಬುಲ್ಲಾ ಖಾನ್, ರಾಜ್ಯ ಮಹಿಳಾ ಅಧ್ಯಕ್ಷೆ ಸಬಿಹಾ ಪಟೇಲ್,ರಾಜ್ಯ ಮಹಿಳಾ ಕಾರ್ಯದರ್ಶಿ ತಲತ್ ಯಾಸ್ಮಿನ್, ವಲಯ ಕಾರ್ಯದರ್ಶಿ ಇರ್ಫಾನ್, ರಾಜ್ಯ ಕಾರ್ಮಿಕರ ಸಂಘ FITUಸಂಚಾಲಕರು ರಾಜಾ ನಾಯಕ.ಧಾರವಾಡ ಜಿಲ್ಲಾ ಅಧ್ಯಕ್ಷರು ಅಬ್ದುಲ್ ಮಲಿಕ್, ಗದಗ್ ಜಿಲ್ಲಾ ಅಧ್ಯಕ್ಷರು ಜುನೆದ್ ಉಮಚ್ಗಿ, ಕೊಪ್ಪಳ ಜಿಲ್ಲಾ ಅಧ್ಯಕ್ಷರು ಆದಿಲ್ ಪಟೇಲ್, ಕೊಪ್ಪಳ ಜಿಲ್ಲಾ ಕಾರ್ಯದರ್ಶಿ ಮುಹಮ್ಮದ್ ಅನ್ಸರ್, ಮಹಿಳಾ ಘಟಕ ಜಿಲ್ಲಾ ಕಾರ್ಯದರ್ಶಿ ಸಲಿಮಾ ಜಹಾನ್, ಕೊಪ್ಪಳ ಜಿಲ್ಲೆ ಉಪಾಧ್ಯಕ್ಷರು ಮಹಬೂಬ್ ಸಾಬ್ ಕುಷ್ಟಗಿ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Tags

Koppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X